ಹುಣಸೋಡು ದುರ್ಘಟನೆಯ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಚಿವ ಮುರುಗೇಶ್ ನಿರಾಣಿ

Source: SO News | By Laxmi Tanaya | Published on 22nd January 2021, 8:19 PM | State News | Don't Miss |

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು.

ಅವರು ಶುಕ್ರವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇಲ್ಲಿ ಕಲ್ಲು ಗಣಿಗಾರಿಕೆ ಅಧಿಕೃತವಾಗಿ ನಡೆಯುತ್ತಿತ್ತೇ ಅಥವಾ ಅನಧಿಕೃತವಾಗಿತ್ತೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಆದಷ್ಟು ಬೇಗನೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಲೋಪದೋಷಗಳನ್ನು ಪತ್ತೆಹಚ್ಚಲಾಗುವುದು. ಗಣಿಗಾರಿಕೆಗೆ ಸ್ಫೋಟಕ ಎಲ್ಲಿಂದ ಬಂತು, ಇದಕ್ಕೆ ಪರವಾನಿಗೆ ಇತ್ತೆ, ಸ್ಫೋಟಕ ಸಾಗಣಿಕೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಪಾಲಿಸಲಾಗಿದೆಯೇ ಎಂಬ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಇಂತಹ ದುರ್ಘಟನೆಗಳು ಆಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಅಭಿವೃದ್ಧಿಗೆ ಜಲ್ಲಿ ಕಲ್ಲುಗಳ ಪೂರೈಕೆ ಅನಿವಾರ್ಯ. ಆದರೆ ಪರವಾನಿಗೆ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುವುದಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಅನಧಿಕೃತ ಗಣಿಗಾರಿಕೆ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

5ಮಂದಿ ದುರ್ಮರಣ: ಗುರುವಾರ ರಾತ್ರಿ ಸಂಭವಿಸಿದ ಸ್ಫೋಟದಲ್ಲಿ 5ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮುಖ್ಯಮಂತ್ರಿಯವರು ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ಧನ ಈಗಾಗಲೇ ಘೋಷಿಸಿದ್ದಾರೆ. ಇನ್ನುಳಿದಂತೆ ಕಾರ್ಮಿಕ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ಹಾಗೂ ಸಹಾಯ ಸೌಲಭ್ಯ  ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...