ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್

Source: SO News | By Laxmi Tanaya | Published on 8th January 2024, 10:03 PM | State News | Don't Miss |

ಬಳ್ಳಾರಿ : ಜಿಲ್ಲಾಡಳಿತದಿಂದ ಜ.15 ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, ಜ.19 ರಂದು ಮಹಾಯೋಗಿ ವೇಮನ ಜಯಂತಿ ಹಾಗೂ ಜ.21 ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ಬಾರಿ ವಿವಿಧ ಮಹನೀಯರ ಜಯಂತಿಯನ್ನು ವಿಜೃಂಭಣೆಯಿಂದ ನಡೆಸಲಾಗುತ್ತದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಮಹನೀಯರ ಜಯಂತಿಯಂದು ಅದ್ದೂರಿ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮ ಇರಲಿದೆ. ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಹನೀಯರ ಕುರಿತು ವಿಶೇಷ ಉಪನ್ಯಾಸ, ಆಯಾ ಸಮುದಾಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.

ಸಭೆಯಲ್ಲಿ ಸಮಾಜದ ಮುಖಂಡರುಗಳು ತಮ್ಮ ಸಲಹೆಗಳನ್ನು ನೀಡಿದರು. ಈ ಸಂಧರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...