ಮಾನಸಿಕವಾಗಿ ನೊಂದು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಕೊಂದು ತಾಯಿ ಆತ್ಮಹತ್ಯೆ

Source: SO News | By Laxmi Tanaya | Published on 3rd December 2023, 10:41 PM | Coastal News | Don't Miss |

ಮಂಗಳೂರು: ತನ್ನ ನಾಲ್ಕುವರೆ ತಿಂಗಳ ಮಗುವನ್ನ ತಾಯಿಯೊಬ್ಬಳು ಕೊಂದು ಆಯ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಸಮೀಪದ ಗುಜ್ಜರಕೆರೆ ಎಂಬಲ್ಲಿ ಲೇಕ್ವೀವ್ ಅಪಾರ್ಟ್ಮೆಂಟ್ನಲ್ಲಿ  ನಡೆದಿದೆ.‌  

ಖತಿಜಾತುಲ್ ಕುಬ್ರ ರವರ ಮಗಳು ಫಾತಿಮಾ ರುಕಿಯಾ (23) ಆತ್ಮಹತ್ಯೆ ಮಾಡಿಕೊಂಡಾಕೆ. ಆಕೆಯ ನಾಲ್ಕುವರೆ ತಿಂಗಳಿನ ಗಂಡು ಮಗು ಅಬ್ದುಲ್ ಹೂದ್ ಮೃತ ಮಗು ಎಂದು ಗುರುತಿಸಲಾಗಿದೆ.

ಮಾಹಿತಿಗಳ ಪ್ರಕಾರ ಫಾತಿಮಾ ರುಕಿಯಾರಿಗೆ ಮುಹಮ್ಮದ್ ಉನೈಸ್ ಎಂಬವರೊಂದಿಗೆ ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದು ಜುಲೈ ತಿಂಗಳಿನಲ್ಲಿ ಹೆರಿಗೆಯಾಗಿದ್ದು ನಾಲ್ಕುವರೆ ತಿಂಗಳಿನ ಗಂಡು ಮಗು ಇದ್ದು, ಫಾತಿಮಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. 

ಮಂಗಳೂರಿನಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದು ಶನಿವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ನ ಫ್ಲಾಟ್ ನಂಬರ್ 507 ರ ಬೆಡ್ ರೂಮ್ ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ 4.5 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಬಳಿಕ  ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...