ರಾಷ್ಟ್ರೀಯ ಕಾಂಗ್ರೆಸ್ ಗೆ ಹೊಸ ನಾಯಕ. ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ಪತ್ರ ಸ್ವೀಕಾರ.

Source: SO News | By Laxmi Tanaya | Published on 26th October 2022, 9:34 PM | National News |

ನವದೆಹಲಿ : ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಬುಧವಾರ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಚುನಾವಣಾಧಿಕಾರಿ ಮಧುಸೂದನ್ ಮಿಸ್ತ್ರಿ ಅವರು ಅಧ್ಯಕ್ಷ ಸ್ಥಾನದ ಪ್ರಮಾಣ ಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ  ಖರ್ಗೆ,   50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಪಕ್ಷದಲ್ಲಿ ಶೇಕಡಾ 50 ರಷ್ಟು ಹುದ್ದೆಗಳನ್ನು ನೀಡುವುದಾಗಿ ಘೋಷಿಸಿದರು. 
ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಘೋಷಣೆಗೆ ವ್ಯಂಗ್ಯವಾಡಿದ ಖರ್ಗೆ, ಅವರ ಪ್ರಕಾರ, ನವ ಭಾರತ ನಿರ್ಮಾಣದ ಹೆಸರಿನಲ್ಲಿ ಅವರು ಕಾಂಗ್ರೆಸ್ ಮುಕ್ತ ಭಾರತ ಮಾಡುವ ಘೋಷಣೆಯನ್ನು ನೀಡುತ್ತಾರೆ, ಆದರೆ ನಾವು ಇದಕ್ಕೆ ಅವಕಾಶ ನೀಡುವುದಿಲ್ಲ ಮತ್ತು ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಈ ಗೌರವವನ್ನು ನೀಡಿದ್ದಕ್ಕಾಗಿ   ಧನ್ಯವಾದ ಸಲ್ಲಿಸಿದ ಅವರು, ನನಗೀದು ಭಾವನಾತ್ಮಕ ಕ್ಷಣ ಎಂದರು.

 ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಒಂದಾಗಬೇಕು ಎಂದು ಮನವಿ ಮಾಡಿದ ಖರ್ಗೆ, ಇದು ಕಷ್ಟದ ಸಮಯ ಎಂದು ನನಗೆ ತಿಳಿದಿದೆ, ಕಾಂಗ್ರೆಸ್ ಸ್ಥಾಪಿಸಿದ ಪ್ರಜಾಪ್ರಭುತ್ವವನ್ನು ಬದಲಾಯಿಸಲು ಪ್ರಯತ್ನಿಸಲಾಗುತ್ತಿದೆ.
ಭಾರತ್ ಜೋಡೋ ಯಾತ್ರೆಗಾಗಿ ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದ ಅವರು,   ಇಡೀ ದೇಶದಲ್ಲಿ ಹೊಸ ಶಕ್ತಿ ತುಂಬುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧೀ, ನೂತನ ಅಧ್ಯಕ್ಷ ಖರ್ಗೆ ಜಿ ಅವರನ್ನು ಅಭಿನಂದಿಸುತ್ತೇನೆ. ಅಧ್ಯಕ್ಷರಾಗಿ ಆಯ್ಕೆಯಾದವರು ಅನುಭವಿ ಮತ್ತು ಡೌನ್ ಟು ಅರ್ಥ್ ನಾಯಕರು ಎಂಬುದು ಅತ್ಯಂತ ತೃಪ್ತಿಕರ ಸಂಗತಿ. ಸರಳ ಕೆಲಸಗಾರನಾಗಿ ದುಡಿಯುತ್ತಿರುವ ಇವರು ತಮ್ಮ ಪರಿಶ್ರಮ ಹಾಗೂ ಸಮರ್ಪಣಾ ಮನೋಭಾವದಿಂದ ಈ ಎತ್ತರಕ್ಕೆ ತಲುಪಿದ್ದಾರೆ. ಸೋನಿಯಾ ತಮ್ಮ ಅಧಿಕಾರಾವಧಿಗಾಗಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಹೇಳಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...