ರಾಜ್ಯ ಸರ್ಕಾರದ ಒಂದು ವರ್ಷದ ಸಮಾರಂಭ; ಸಾಧನೆಯ ಕಿರು ಹೊತ್ತಿಗೆ ಬಿಡುಗಡೆ                             

Source: sonews | By Staff Correspondent | Published on 27th July 2020, 6:43 PM | Coastal News |

ಕಾರವಾರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಒಂದು ವರ್ಷದ ಸಾಧನಾ ಪ್ರಧಾನ ಸಮಾರಂಭವು ತಂತ್ರಜ್ಞಾನದ ವರ್ಚವಲ್ ಪ್ಲಾಟ್ ಫಾರಂ ಮೂಲಕ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಹಾಗೂ ಸಕ್ಕರೆ ಮತ್ತು ಜಿಲ್ಲಾ ಉಸ್ತವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸರ್ಕಾರದ ಒಂದು ವರ್ಷದ ಸಾಧನೆಗೆ ಸಂಬಂಧಿಸಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರ ತಂದಿರುವ ವಿಶೇಷ ಕಿರು ಹೊತ್ತಿಗೆಗಳಾದ ‘ಸವಾಲುಗಳು ಒಂದು ವರ್ಷ ಪರಿಹಾರದ ಸ್ಪರ್ಶ’ ಜನಪದ ಹಾಗೂ ಮಾರ್ಚ ಆಫ್ ಕರ್ನಾಟಕ ಪುಸ್ತಕಗಳನ್ನು ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ, ಕರ್ನಾಟಕ ವಿಧಾನ ಪರಿಷತ್‍ನ ನೂತನ ನಾಮನಿರ್ದೇಶಿತ ಸದಸ್ಯ ಶಾಂತಾರಾಮ ಸಿದ್ದಿ, ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರದ್ ನಾಯ್ಕ ಸೇರಿದಂತೆ ಇತರರು ಹಾಜರಿದ್ದರು. 

ಕೋವಿಡ್-19 ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿ ಕಾರ್ಮಿಕ ಇಲಾಖೆಯಿಂದ ಸಹಾಯಧನ ಪಡೆದಂತಹ ಫಲಾನುಭವಿಗಳಾದಂತಹ ತುಕಾರಾಮ ಗುನಗಿ, ರಂಗ ಬಸಪ್ಪ ವಡ್ಡರ್, ಪ್ರಭಾಕರ ಎಂ ಗುನಗಿ, ಸತೀಶ ಬಿ. ವಡ್ಡರ್, ರಮೇಶ ಆರ್ ನಾಯ್ಕ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳು ಕೂಡ ಹಾಜರಿದ್ದರು.
 

Read These Next