2015 ರಿಂದ ಇಲ್ಲಿ ತನಕ ಭಟ್ಕಳ ದಲ್ಲಿ ವಾಸವಾಗಿದ್ದ ಪಾಕಿಸ್ತಾನಿ ಮಹಿಳೆಯ ಮಧ್ಯರಾತ್ರಿ ಬಂಧಿಸಿದ ಪೋಲಿಸರು

Source: S.O. News Service | By MV Bhatkal | Published on 10th June 2021, 8:37 PM | Coastal News | Don't Miss |

ಭಟ್ಕಳ: ಅಕ್ರಮವಾಗಿ ಭಟ್ಕಳದ ನವಾಯತ ಕಾಲೋನಿಯಲ್ಲಿ 2015ರಿಂದ ವಾಸ್ತವ್ಯ ಮಾಡಿಕೊಂಡಿದ್ದ ಪಾಕಿಸ್ಥಾನಿ ಮಹಿಳೆಯೋರ್ವಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಭಟ್ಕಳ ನಗರ ಠಾಣೆಯ ಪೊಲೀಸರು ಯಶಸ್ವೀಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾಹಿತಿ ನೀಡಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ ಕೋಂ ಜಾವೀದ್ ಮೊಹಿದ್ದೀನ ರುಕ್ನುದ್ದೀನ್ ಎಂದು ಗುರುತಿಸಲಾಗಿದೆ.

ಈಕೆ ಪಾಕಿಸ್ತಾನದ ರಾಷ್ಟ್ರೀಯತೆಯನ್ನು ಹೊಂದಿದ್ದು, ಸುಮಾರು 8 ವರ್ಷಗಳ ಹಿಂದೆ ಭಟ್ಕಳದ ನವಾಯತ ಕಾಲೋನಿಯ ಜಾವೀದ್ ಮೊಹಿದ್ದೀನ್ ರುಕ್ಕುದ್ದೀನ್ ಎಂಬಾತನನ್ನು ದುಬೈನಲ್ಲಿ ವಿವಾಹವಾಗಿ  2015ರ ಪ್ರಾರಂಭದಲ್ಲಿ ಕಳ್ಳ ಮಾರ್ಗದಲ್ಲಿ ಭಾರತಕ್ಕೆ ನುಸುಳಿ ಬಂದು ತನ್ನ ಗಂಡನ ಮನೆಯಾದ ಭಟ್ಕಳದ ನವಾಯತ ಕಾಲೋನಿಯಲ್ಲಿ ತನ್ನ 3 ಮಕ್ಕಳೊಂದಿಗೆ ಅಕ್ರಮವಾಗಿ ವಾಸವಾಗಿದ್ದಳು ಎಂದು ಎಸ್ಪಿ ತಿಳಿಸಿದ್ದಾರೆ.

ಭಟ್ಕಳದಲ್ಲಿ ಈಕೆಯು ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಶನ್ ಕಾರ್ಡ್, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದಕೊಂಡಿದ್ದಾಳೆ ಎಂದರು . 

ನ್ಯಾಯಾಲಯದಿಂದ ಸರ್ಚ ವಾರಂಟ್ ಪಡೆದು ಮನೆಯನ್ನು ಶೋಧ ಮಾಡಿದಾಗ ಈಕೆಯು ಇರುವುದು ಖಚಿತವಾಗಿದ್ದು ಆಕೆಯನ್ನು ಬಂಧಿಸಿ ಈಕೆಯ ವಿರುದ್ಧ ವಿದೇಶಿಯರ ಕಾಯ್ದೆ ಕಲಂ 14, 14 (ಎ), (ಬಿ), ಹಾಗೂ ಐ.ಪಿ.ಸಿ. ಕಲಂ 468 ಹಾಗೂ 471ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಈಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 

ಈಕೆಯನ್ನು ಪತ್ತೆ ಹಚ್ಚುವಲ್ಲಿ , ಹೆಚ್ಚುವರಿ ಎಸ್.ಪಿ. ಬದರೀನಾಥ, ಡಿ.ವೈ.ಎಸ್.ಪಿ. ಕೆ.ಯು. ಬೆಳ್ಳಿಯಪ್ಪ, ಸಿ.ಪಿ.ಐ. ದಿವಾಕರ ಪಿ.ಎಂ. ಇವರ ಮಾರ್ಗದರ್ಶನದಲ್ಲಿ ಭಟ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸಪೆಕ್ಟರ್ ಸುಮಾ ಬಿ., ಸಿಬ್ಬಂದಿಗಳಾದ ನಾರಾಯಣ ನಾಯ್ಕ, ಮಗ್ದುಂ ಪತ್ತೇಖಾನ್, ಲೋಕಪ್ಪ, ಗ್ರಾಮೀಣ ಠಾಣೆಯ ಹೀನಾ ಎಫ್. ಮುಂತಾದವರು ಶ್ರಮಿಸಿದ್ದರು.

Read These Next

ಮಂಗಳೂರು: ಕುಸಿದ ಮರವೂರು ಸೇತುವೆ ಹೈಡ್ರಾಲಿಕ್ ತಂತ್ರಜ್ಞಾನ ಬಳಸಿ ದುರಸ್ತಿಗೆ ಚಿಂತನೆ

ಕುಸಿದಿರುವ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿಯ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆ ಕುಸಿದ ಹಿನ್ನೆಲೆಯಲ್ಲಿ ...