'ಗೃಹಲಕ್ಷ್ಮಿ' ಯೋಜನೆಗೆ ಪ್ರತ್ಯೇಕ ಆ್ಯಪ್

Source: SOnews | By Staff Correspondent | Published on 23rd June 2023, 11:54 PM | State News | Don't Miss |

ಬೆಂಗಳೂರು: ‘ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ' ಯೋಜನೆಗೆ ಬುಧವಾರ(ಜೂ.28) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.  

ಶುಕ್ರವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗೃಹ ಲಕ್ಷ್ಮಿ ಯೋಜನೆ ಜಾರಿ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಾಗುವುದು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ನಿರ್ಧಾರ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.  ಆಗಸ್ಟ್‍ನಲ್ಲಿ ಯೋಜನೆ ಜಾರಿ: ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬರುತ್ತೆ. ಸೇವಾಸಿಂಧು ಸರ್ವರ್‍ಗೆ ಓವರ್ ಲೋಡ್ ಆಗುತ್ತಿದೆ. ಅಪ್‍ಡೇಟ್ ಆದರೂ ಕೂಡ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲಾ ಆ್ಯಪ್ ನಲ್ಲಿ ಪರಿಹಾರ ಸಿಗಲಿದೆ. ಸಂಪುಟ ಸಭೆಯಲ್ಲಿ ಆ್ಯಪ್‍ನ ಸ್ವರೂಪ, ಕಾರ್ಯವಿಧಾನ ಕುರಿತು ಮುಖ್ಯಮಂತ್ರಿಗೆ ತೋರಿಸಿ ಅಂತಿಮ ದಿನಾಂಕ ಘೋಷಣೆ ಮಾಡ್ತೇವೆ. ಬಹುತೇಕ ಆಗಸ್ಟ್ 17 ಅಥವಾ 18ರಿಂದ ಅರ್ಜಿ ಸ್ವೀಕಾರಕ್ಕೆ ಚಾಲನೆ ಸಿಗಬಹುದು ಎಂದು ಅವರು ಹೇಳಿದರು.  

ಕಂದಾಯ ಸಚಿವ ಕೃಷ್ಣಭೈರೇಗೌಡ ನಾಡಕಚೇರಿ, ತಹಶೀಲ್ದಾರರ ಕಚೇರಿ ಬಗ್ಗೆ ಗಮನ ಹರಿಸುತ್ತಿದ್ದಾರೆ. ಗ್ರಾಮೀಣಾಬಿವೃದ್ಧಿ ಸಚಿವರ ಅಡಿ ಬಾಪೂಜಿ ಕೇಂದ್ರಗಳು ಬರುತ್ತವೆ. ಹೀಗಾಗಿ ಮೂವರು ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು.  ಗೃಹ ಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಒಂದೇ ಸಾರಿ ಓವರ್ ಲೋಡ್ ಆಗುತ್ತಿತ್ತು. ಲಕ್ಷಾಂತರ ಜನ ಅರ್ಜಿ ಹಾಕಿದ್ದರಿಂದ ಓವರ್ ಲೋಡ್ ಆಗಿತ್ತು. ಇದೀಗ ಗೃಹ ಜ್ಯೋತಿ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಸ್ಥಿರವಾಗಿದೆ. ಇಂದು ಒಂದೇ ದಿನ ಗೃಹ ಜ್ಯೋತಿಗೆ ಆರು ಲಕ್ಷ ಮಂದಿ ಅರ್ಜಿ ಹಾಕಿದ್ದಾರೆ. ಅದೇ ರೀತಿ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ಸ್ಥಿರವಾಗಿರುವಂತೆ ನೋಡಿಕೊಳ್ಳುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.  

ಪ್ರಜಾಪ್ರತಿನಿಧಿ ಆಯ್ಕೆ: ಗೃಹಲಕ್ಷ್ಮಿ ಯೋಜನೆಗೆ ಪ್ರಜಾಪ್ರತಿನಿಧಿ ಆಯ್ಕೆ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಪ್ರಜಾಪ್ರತಿನಿಧಿ ಆಯ್ಕೆ ಅಂತಿಮ ನಿರ್ಧಾರ ಆಗುತ್ತದೆ. ಸಾವಿರ ಜನರಿಗೆ ಇಬ್ಬರು ಪ್ರಜಾಪ್ರತಿನಿಧಿ ಆಯ್ಕೆ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ. ಅರ್ಜಿ ಸಲ್ಲಿಕೆಗೆ ಕಾಲಮಿತಿಯಿಲ್ಲ. ಆದುದರಿಂದ, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...