ದೇರಳಕಟ್ಟೆ ಬಳಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ. ಘಟನೆ ನಡೆದು ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು.

Source: SO News | By Laxmi Tanaya | Published on 25th October 2020, 12:59 PM | Coastal News |

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಬಳಿ ಬಸ್ಸಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಘಟನೆ ನಡೆದ ಗಂಟೆಯೊಳಗೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ  ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಪರಾರಿಯಾಗಲು ಸಹಕರಿಸಿದ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . 

 ಬಸ್ಸಿಗೆ ಕಲ್ಲು ತೂರಾಟ ನಡೆಸಿ ಆರೋಪಿ ಅಲ್ಫಾಜ್ ಕಲ್ಪಾದೆ ಪೊಲೀಸರ ವಶದಲ್ಲಿದ್ದು ಇನ್ನೋರ್ವ ಆರೋಪಿ ಪೊಂಗ್ಗ ಅಶ್ರಫ್  ಪರಾರಿಯಾಗಿದ್ದಾನೆ.  ಮಂಗಳೂರಿನಿಂದ ವಿಟ್ಲ  ಕಡೆ ಸಂಚರಿಸುವ ಖಾಸಗಿ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ನಿತ್ಯಾನಂದ ನಗರದಿಂದ ದೇರ್ಲಕಟ್ಟೆ ವರೆಗೆ ಬೈಕ್ ಸವಾರರಿಗೆ ಮತ್ತು ಬಸ್ ಚಾಲಕನಿಗೆ ಮಧ್ಯೆ ಮಾತಿನ ಚಕಮಕಿ ನಡೆದಿತ್ತು .

ದೇರಳಕಟ್ಟೆ ಬಳಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ಕಲ್ಲು ಎಸೆದು ಪರಾರಿಯಾಗಿದ್ದರು. ಕಲ್ಲು ಬಸ್ ಚಾಲಕನ ಕೆನ್ನೆ ಸವರಿ ಬಸ್ಸಿನೊಳಗೆ ಬಿದ್ದಿದ್ದು ಬಸ್ಸಿನ ಗಾಜು ಪುಡಿಯಾಗಿದೆ.‌ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿದ್ದು ಬಸ್ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ.

 ಘಟನೆ ಬಳಿಕ ಪೊಲೀಸರು ಸ್ಥಳೀಯ ಸಿಸಿಟಿವಿ ಮೂಲಕ ಘಟನೆಯ ದೃಶ್ಯಾವಳಿ  ಸಿಕ್ಕಿದ್ದು ಪೊಲೀಸರು ಬೈಕ್ ಹೋದ ದಿಕ್ಕಿಗೆ ತೆರಳಿ ವಾಪಸ್ ದೇಅರಳಕಟ್ಟೆ  ಬಂದಾಗ ಸಿಸಿಟಿವಿ ಯಲ್ಲಿ ದಾಖಲಾಗಿದ್ದ ಬೈಕ್ ಸ್ಥಳೀಯವಾಗಿ ಸುತ್ತಾಡುತ್ತಿರುವುದನ್ನ ಕಂಡು  ಹಿಡಿಯಲು ಯತ್ನಿಸಿದ್ದಾರೆ . ಆದರೆ ಬೈಕಿನಲ್ಲಿದ್ದವರು ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಓಡಲು ಯತ್ನಿಸಿದ್ದಾನೆ . ಈ ಸಂದರ್ಭದಲ್ಲಿ ಅಲ್ಲಿಯ ಸ್ಥಳೀಯ ಗುಂಪೊಂದು  ಪೋಲಿಸರಿಂದ ತಪ್ಪಿಸಲು  ಸಹಕರಿಸಿದ್ದು,  ಆದರೆ ಪೊಲೀಸರು ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಹಿಡಿಯಲು ಯಶಸ್ವಿಯಾಗಿದ್ದಾರೆ

 ಆರೋಪಿಗಳು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಹಕರಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಸ್ಥಳೀಯರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...