ಹೊಸದಿಲ್ಲಿ: ಎಬಿಪಿ-ಸಿವೋಟರ್ ಸಮೀಕ್ಷೆ ಪ.ಬಂಗಾಳದಲ್ಲಿ ದೀದಿ', ತಮಿಳುನಾಡಿನಲ್ಲಿ ಸ್ಟಾಲಿನ್, ಕೇರಳದಲ್ಲಿ ಪಿಣರಾಯಿ ಅಧಿಕಾರಕ್ಕೆ

Source: VB | By S O News | Published on 17th March 2021, 2:19 PM | National News |

ಹೊಸದಿಲ್ಲಿ: ಅತ್ಯಂತ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿಯ ಮಧ್ಯೆ ತುರುಸಿನ ಸ್ಪರ್ಧೆ ಏರ್ಪಟ್ಟಿದ್ದರೂ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ನಿರೀಕ್ಷೆಯಿದೆ ಎಂದು  ಸಮೀಕ್ಷೆಯನ್ನಾಧರಿಸಿ ಎಬಿಪಿ-ಸಿವೋಟರ್ ವರದಿ ಮಾಡಿದೆ.

ಪಶ್ಚಿಮ ಬಂಗಾಳ ಚುನಾವಣೆಯ ಹಿನ್ನೆಲೆಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ 43 ಶೇ. ಮಂದಿ ಟಿಎಂಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ವಿಧಾನಸಭೆಯ 294 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) 150ರಿಂದ 160 ಸ್ಥಾನ ಪಡೆಯುವ ನಿರೀಕ್ಷೆಯಿದೆ. ಇನ್ನೊಂದೆಡೆ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿಸಲು ಶತಾಯ ಗತಾಯ ಪ್ರಯತ್ನಿಸುತ್ತಿರುವ ಬಿಜೆಪಿ 2016ರ ಚುನಾವಣೆಗಿಂತ ತನ್ನ ಸಾಧನೆಯನ್ನು ಉತ್ತಮ ಪಡಿಸಿಕೊಂಡರೂ 98ರಿಂದ 114 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ದ್ವಿತೀಯ ಸ್ಥಾನ ಗಳಿಸಲಿದೆ. ಕಾಂಗ್ರೆಸ್-ಎಡಪಕ್ಷಗಳ ಮೈತ್ರಿಕೂಟ 23ರಿಂದ 31 ಸ್ಥಾನ ಪಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ಕೇರಳದಲ್ಲಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಎಬಿಪಿ ಸಿವೋಟರ್ ಸಮೀಕ್ಷೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ 140 ಸದಸ್ಯ ಬಲದ ವಿಧಾನಸಭೆಯಲ್ಲಿ ಎಲ್‌ಡಿಎಫ್ 77ರಿಂದ 85 ಸ್ಥಾನ, ಕಾಂಗ್ರೆಸ್ ನೇತೃತ್ವದ ಯುಡಿಎಫ್ 54008 62 ಸ್ಥಾನ ಪಡೆಯಲಿದೆ. ಬಿಜೆಪಿ ಯಾವುದೇ ಪರಿಣಾಮ ಬೀರಲು ವಿಫಲವಾಗಲಿದ್ದು 0ದಿಂದ 2 ಸ್ಥಾನ ಪಡೆಯಬಹುದು ಎಂದು ಚುನಾವಣಾ ಸಮೀಕ್ಷೆ ಹೇಳಿದೆ.

ಅಧಿಕಾರಕ್ಕೆ: 2016ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಎಲ್ ಡಿಎಫ್, ಯುಡಿಎಫ್ ಮತ್ತು ಬಿಜೆಪಿಯ ಮತಗಳ ಪ್ರಮಾಣದಲ್ಲಿ ಕ್ರಮವಾಗಿ 0.6 ಶೇ., 0.9 ಶೇ. ಮತ್ತು 0.3 ಶೇ. ಇಳಿಕೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ತಿಳಿದುಬಂದಿದೆ. 2016ರ ಚುನಾವಣೆಯಲ್ಲಿ ಎಲ್‌ಡಿಎಫ್ 91, ಯುಡಿಎಫ್ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ತಮಿಳುನಾಡಿನಲ್ಲಿ ಈ ಬಾರಿ ಬಿಜೆಪಿಯೊಂದಿಗೆ ಮೈತ್ರಿ ಸಾಧಿಸಿ ಅಧಿಕಾರಕ್ಕೆ ಬರುವ ಎಐಎಡಿಎಂಕೆಯ ಕನಸು ನನಸಾಗದು. ರಾಜ್ಯದ ಜನತೆ ಡಿಎಂಕೆಯನ್ನು ಅಧಿಕಾರಕ್ಕೆ ತರುವ ನಿರೀಕ್ಷೆಯಿದೆ ಎಂದು ಎಬಿಪಿ ಸಿವೋಟರ್ ಸಮೀಕ್ಷೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. 40 ಶೇ.ಕ್ಕೂ ಹೆಚ್ಚಿನ ಮತದಾರರು ಎಂ.ಕೆ.ಸ್ಟಾಲಿನ್ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರೆ, ಎಐಎಡಿಎಂಕೆಯ ಪಳನಿಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ಆಶಿಸಿದವರು ಕೇವಲ 29.7 ಶೇ. ಮತದಾರರು ಮಾತ್ರ. ಎಐಎಡಿಎಂಕೆ ಸರಕಾರದ ಸಾಧನೆ ಸಾಮಾನ್ಯ ಮಟ್ಟದಲ್ಲಿತ್ತು ಎಂದು ಸಮೀಕ್ಷೆಗೆ ಒಳಗಾದ ಮತದಾರರು ಹೇಳಿದ್ದರೆ ಸುಮಾರು 48 ಶೇ. ಮತದಾರರು ಹಾಲಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಡಿಎಂಕೆ ಮೈತ್ರಿಕೂಟ 161ರಿಂದ 169 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಎಐಎಡಿಎಂಕೆ ಬಿಜೆಪಿ ಮೈತ್ರಿಕೂಟ 53ರಿಂದ 63 ಸ್ಥಾನದಲ್ಲಿ ಗೆಲುವು ಸಾಧಿಸಲಿದೆ. ಉಳಿದಂತೆ ಎಂಎನ್‌ಎಂ 2-6 ಸ್ಥಾನ, ಎಎಂಎಂಕೆ 1-5 ಸ್ಥಾನ, ಇತರರು 3-7 ಸ್ಥಾನಗಳಲ್ಲಿ ಗೆಲ್ಲಲಿದ್ದಾರೆ. ರಾಜ್ಯದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಪ್ರಮುಖ ವಿಷಯವೆಂದರೆ ನಿರುದ್ಯೋಗ ಎಂದು 38.2 ಶೇ. ಮತದಾರರು ಹೇಳಿದ್ದರೆ, 11.6 ಶೇ. ಜನತೆ ವಿದ್ಯುತ್ ಮತ್ತು ನೀರಿನ ಸಮಸ್ಯೆ, 10.4 ಶೇ. ಜನತೆ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಎಪ್ರಿಲ್ 6ರಂದು ಚುನಾವಣೆ ನಡೆಯಲಿದ್ದು ಮೇ 2ರಂದು ಮತ ಎಣಿಕೆ ನಡೆಯಲಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...