ಎಬಿಆರ್‌ಕೆ ಅಡಿ ಬ್ಲಾಕ್ ಫಂಗಸ್ ಚಿಕಿತ್ಸೆ: ಡಾ.ಕೆ.ಸುಧಾಕರ್

Source: SO News | By Laxmi Tanaya | Published on 5th June 2021, 8:28 PM | State News | Don't Miss |

ಹುಬ್ಬಳ್ಳಿ : ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಗೆ ರಾಜ್ಯ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕದಡಿ ಬ್ಲಾಕ್ ಫಂಗಸ್ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುವುದು. ಕಿಮ್ಸ್‌ನಲ್ಲಿ ಬ್ಲಾಕ್ ಫಂಗಸ್ ಸರ್ಜರಿಗೆ ಬೇಕಾದ ವೈದ್ಯಕೀಯ ಪರಿಕರಗಳನ್ನು ತಕ್ಷಣವೇ ಖರೀದಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಸಾರಿ( SAREE) ಲಕ್ಷಣದಿಂದ ಆಸ್ಪತ್ರೆಗೆ ದಾಖಲಾಗಿ ಮರಣ ಹೊಂದಿದರೆ ಕೋವಿಡ್  ಮರಣ ಎಂದೇ ಪರಿಗಣಿಸಲಾಗುವುದು. ಸಾರಿ ಲಕ್ಷಣಗಳಿಂದ ತಂದೆ ತಾಯಿ ಮೃತಪಟ್ಟರೆ, ಮಕ್ಕಳಿಗೆ ಸರ್ಕಾರದಿಂದ ಎಲ್ಲಾ ಸವಲತ್ತುಗಳನ್ನು ನೀಡಲಾಗುವುದು. ಅಂಪೋಟೆರಿಸನ್ ಬಿ ಲಸಿಕೆಯನ್ನು  ಅಕ್ರಮವಾಗಿ ಮಾರಾಟ ಮಾಡಿದರೆ ಎಫ್.ಐ.ಆರ್.ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ
ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮೋಹನ ಲಿಂಬಿಕಾಯಿ, ವಾ.ಕ.ರ.ಸಾ.ಸಂ ಅಧ್ಯಕ್ಷ ವಿ.ಎಸ್ ಪಾಟೀಲ, ಶಾಸಕರಾದ ಶ್ರೀನಿವಾಸ ಮಾನೆ, ಅರವಿಂದ ಚಂದ್ರಕಾತ್ ಬೆಲ್ಲದ್, ಎಸ್.ವಿ. ಸಂಕನೂರ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ,ಪ್ರದೀಪ್ ಶೆಟ್ಟರ್,ರಾಜ್ಯ  ಕೃಷಿ ಉತ್ಪನ್ನ ರಫ್ತು ನಿಗಮದ ಅಧ್ಯಕ್ಷ ಎಸ್.ಐ.ಚಿಕ್ಕನಗೌಡ್ರ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ  ಈರಣ್ಣ ಜಡಿ, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರವಿಕುಮಾರ್ ಸುರಪುರ, ನಗರ ಪೊಲೀಸ್ ಆಯುಕ್ತ ಲಾಬೂರಾಮ್, ಜಿ.ಪಂ.ಸಿ.ಇ.ಓ ಡಾ.ಬಿ.ಸುಶೀಲ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ,  ಮಹಾನಗರಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಶವಂತ ಮದೀನಕರ್, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗ ಅಂಟರಠಾಣಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...