ಉಚಿತ ಪಾಸ್ ನೀಡುವಂತೆ ಎಬಿವಿಪಿ ಆಗ್ರಹ

Source: sonews | By Staff Correspondent | Published on 6th June 2018, 12:13 AM | Coastal News | Don't Miss |


ಭಟ್ಕಳ: ಎ.ಬಿ.ವಿ.ಪಿ. ಯಿಂದ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಿ ಸಹಾಯಕ ಕಮಿಷನರ್ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.  

ಮನವಿಯಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅನುಕೂಲಕರವಾಗಿತ್ತು. ಆದರೆ ರಾಜ್ಯ ಸಮ್ಮಿಶ್ರ ಸರಕಾರ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸದಂತೆ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಹೇಳಲಾಗಿತ್ತು. 2018-19ನೇ ಸಾಲಿನ ಬಜೆಟ್‍ನಲ್ಲಿ ಕೂಡಾ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಉಚಿತ ಬಸ್ ಪಾಸ್ ನೀಡುವ ಘೋಷಣೆಯನ್ನು ಮಾಡಿದ್ದರು. ಆದರೆ ಇಂದಿನ ಸಮ್ಮಿಶ್ರ ಸರಕಾರ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಳ್ಳದೇ ಹಿಂದಿನ ಬಜಟ್ ಘೋಷಣೆಗೆ ವಿರೋಧವಾಗಿ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದ್ದಾರೆ. 

ರಾಜ್ಯದಲ್ಲಿ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಭಾಗದವರೇ ಹೆಚ್ಚಿದ್ದು ಅವರ ಭವಿಷ್ಯದೊಂದಿಗೆ ಸರಕಾರ ಆಟವಾಡುವುದು ಸರಿಯಲ್ಲ.  ರಾಜ್ಯದ್ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಲಾಗಿದೆ. 

ರಾಜ್ಯಾದ್ಯಂತ ಇಂದು ರಾಜ್ಯದಲ್ಲಿ ಉಚಿತ ಬಸ್ ಪಾಸ್ ನೀಡುವಂತೆ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿ ಪ್ರತಿಭಟನೆಯನ್ನು ನಡೆಸುವಂತೆ ಎ.ಬಿ.ವಿ.ಪಿ. ನೀಡಿದ್ದ ಕರೆಯಂತೆ ಭಟ್ಕಳದಲ್ಲಿಯೂ ಸಹ ಪ್ರತಿಭಟನೆಯನ್ನು ನಡೆಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಅರ್ಪಿಸಲಾಯಿತು. 
ಮನವಿಯನ್ನು ಸಹಾಯಕ ಆಯುಕ್ತರ ಅನುಪಸ್ಥಿತಿಯಲ್ಲಿ ಕಚೇರಿ ವ್ಯವಸ್ಥಾಪಕ ಎಲ್. ಎ. ಭಟ್ ಸ್ವೀಕರಿಸಿ ಮುಖ್ಯ ಮಂತ್ರಿಗಳಿಗೆ ಕಳುಹಿಸುವ ಭರವಸೆ ನೀಡಿದರು. 
 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...