ಕೋವಿಡ್ ಲಸಿಕೆ ನೀಡುವ ಕೆಲಸವನ್ನು ಚುರುಕುಗೊಳಿಸಿ: ಡಿ.ಕೆ. ಸುರೇಶ್

Source: SO News | By Laxmi Tanaya | Published on 13th September 2021, 9:48 PM | State News | Don't Miss |

ರಾಮನಗರ : ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆಯದೇ ಇರುವವರ ಹೆಸರನ್ನು ಗ್ರಾಮವಾರು ಪಟ್ಟಿಮಾಡಿಕೊಳ್ಳಿ. ರೂಟ್ ಮ್ಯಾಪ್‌ನೊಂದಿಗೆ ಯೋಜನೆ ಸಿದ್ಧಪಡಿಸಿಕೊಳ್ಳಿ. ಗ್ರಾಮಾಂತರ ಪ್ರದೇಶದಲ್ಲಿ ಜನರನ್ನು ಬೆಳಿಗ್ಗೆ ಸಂಪರ್ಕಿಸುವುದು ಸುಲಭ.  ಬೆಳಿಗ್ಗೆ 7 ರಿಂದ 10 ಗಂಟೆಯವರೆಗೆ ಗ್ರಾಮವಾರು ಲಸಿಕಾ ಕಾರ್ಯಕ್ರಮ ಏರ್ಪಡಿಸಿಕೊಂಡು ಎಲ್ಲರಿಗೂ ಲಸಿಕೆ ನೀಡುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ಅವರು ತಿಳಿಸಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ನಿಂದ ಮೃತರಾದವರಿಗೆ ಕೆಲವು ಷರತ್ತು ವಿಧಿಸಿ ಸರ್ಕಾರ ಪರಿಹಾರ ಧನ ನೀಡುತ್ತಿದೆ. ಕೋವಿಡ್ ಸಂದರ್ಭದಲ್ಲಿ ಕೆಲವರು ಆಸ್ಪತ್ರೆಯಲ್ಲಿ ಬೆಡ್ ಸಿಗದೇ, ಅಂಬ್ಯೂಲೆನ್ಸ್ ಸಿಗದೆ ಕೋವಿಡ್ ಸೋಂಕಿತರು ಮೃತರಾಗಿದ್ದಾರೆ. ಕೆಲವರಿಗೆ ಕೋವಿಡ್ ನೆಗಟಿವ್ ಬಂದಿದ್ದರೂ, ಕೋವಿಡ್ ಲಕ್ಷಣದಿಂದ ಮೃತಪಟ್ಟಿದ್ದಾರೆ. ಅವರಿಗೂ ಸಹ ಪರಿಹಾರ ಧನ ಸಿಗುವಂತೆ ಚಿಂತನೆ ನಡೆಸಬೇಕಿದೆ. ಕೋವಿಡ್ ಸೋಂಕಿತರು ಗುಣಮುಖರಾದ ನಂತರ ಗಂಭೀರವಾದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇವರಿಗೆ ಚಿಕಿತ್ಸೆ ನೀಡುವ ಬಗ್ಗೆ ಚಿಂತಸಬೇಕಿದೆ ಎಂದರು.

ಜಿಲ್ಲಾ ಆಸ್ಪತ್ರೆಯಲ್ಲಿ ಸಿ.ಟಿ ಸ್ಕ್ಯಾನರ್ ಯಂತ್ರ ಅಳವಡಿಸಲಾಗಿದೆ. ಜಿಲ್ಲೆಯಲ್ಲಿ ಡಯಾಲಿಸಿಸ್ ಯಂತ್ರಗಳಿವೆ ಆದರೆ ಅದರ ಕಾರ್ಯನಿರ್ವಹಣೆಗಾಗಿ ಸರಿಯಾದ ಸಿಬ್ಬಂದಿಗಳ ನಿಯೋಜನೆಯಾಗಿಲ್ಲ. ಡಯಾಲಿಸಿಸ್ ಗೆ ಜಿಲ್ಲೆಯಲ್ಲಿ ಬೇಡಿಕೆ ಇದ್ದು, ಇನ್ನೂ ಹೆಚ್ಚಿನ ಯಂತ್ರಗಳನ್ನು ಅಳವಡಿಸಬೇಕು. ಸಿಬ್ಬಂದಿ ಸಮಸ್ಯೆಯನ್ನು ಸರಿಪಡಿಸಬೇಕು. ವೈದ್ಯಕೀಯ ಯಂತ್ರಗಳ ಅಳವಡಿಕೆಯೊಂದಿಕೆ ಅವುಗಳ ಕಾರ್ಯನಿರ್ವಹಣೆಯ ವ್ಯವಸ್ಥೆ ಸಹ ಆಗಬೇಕು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಅವರು ಮಾತನಾಡಿ ಸಂಭವನೀಯ ಮೂರನೇ ಅಲೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಂದಾಯ ಭವನದಲ್ಲಿ 200 ಆಕ್ಸಿಜನೇಟಡ್ ಬೆಡ್ ಹಾಗೂ ಹೊಸ ಜಿಲ್ಲಾಸ್ಪತ್ರೆಯಲ್ಲಿ 250 ಆಕ್ಸಿಜನೇಟಡ್ ಬೆಡ್‌ಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲು ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಹಂತದಲ್ಲಿ ತರಬೇತಿ ನೀಡಲಾಗಿದೆ.  ಕೋವಿಡ್ ಎರಡನೇ ಅಲೆಯಲ್ಲಿ 219068 ಪರೀಕ್ಷೆಗಳನ್ನು ನಡೆಸಲಾಗಿದ್ದು, 16760 ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ ಹಾಗೂ 275 ಜನ ಮೃತರಾಗಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ಅವರು ಮಾತನಾಡಿ ಶಾಲಾ, ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಸಿಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿ ಎಲ್ಲಾ ರೂಟ್‌ಗಳಲ್ಲೂ ಬಸ್‌ಗಳ ವ್ಯವಸ್ಥೆಯಾಗಬೇಕು. ಕೆಲವು ವಿದ್ಯಾರ್ಥಿಗಳು ಬಸ್‌ಗಳಲ್ಲಿ ಹಳೆಯ ಪಾಸ್‌ನ್ನು ಮಾನ್ಯ ಮಾಡುತ್ತಿಲ್ಲ ಎಂದು ಶಾಲಾ ಕಾಲೇಜುಗಳಿಗೆ ಬರುತ್ತಿಲ್ಲ. ಈ ಸಮಸ್ಯೆ ಕೂಡ ಪರಿಹಾರವಾಗಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಹಳೆಯ ಪಾಸ್ ಹಾಗೂ ವಿದ್ಯಾರ್ಥಿ ಶಾಲಾ/ ಕಾಲೇಜಿಗೆ ದಾಖಲಾಗಿರುವ ರಶೀದಿ ಹಾಜರು ಪಡಿಸಿ ಶಾಲಾ/ ಕಾಲೇಜಿಗೆ ಬಸ್‌ಗಳಲ್ಲಿ ತೆರಳಬಹುದು. ಬಸ್ ಪಾಸ್‌ಗಾಗಿ ಈ ಬಾರಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಿರುವ ಬಹಳಷ್ಟು ವಿದ್ಯಾರ್ಥಿಗಳು ಪಾಸ್ ಪಡೆದಿರುವುದಿಲ್ಲ ಎಂದರು. ಸಂಸದರು ಪಾಸ್ ಪಡೆಯದಿದ್ದಲ್ಲಿ ಅವುಗಳನ್ನು ತಾಲ್ಲೂಕು ಬಿ.ಇ.ಒ ಕಚೇರಿಗೆ ತಲುಪಿಸಿ ಅವರು ಸಂಬಂಧಿಸಿದ ಶಾಲಾ ವಿದ್ಯಾರ್ಥಿಗಳಿಗೆ ಪಾಸ್ ತಲುಪಿಸುತ್ತಾರೆ ಎಂದರು.

ಬೆಂಗಳೂರು-ಮೈಸೂರು ರಾಷ್ರ್ಟೀಯ ಹೆದ್ದಾರಿ ನಿರ್ಮಾಣದ ವ್ಯಾಪ್ತಿಗೆ ಬಂದಿರುವ ಕೆರೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಕೇವಲ ಸಿಲ್ಟ್ ತೆಗೆಯುವ ಕೆಲಸವನ್ನು ಮಾತ್ರ ತೆಗೆದುಕೊಳ್ಳದೆ ಅಲ್ಲಿಯ ಜನರಿಗೆ ಉಪಯುಕ್ತವಾಗುವ ರೀತಿ ಬಂಡಿಂಗ್, ವಾಕಿಂಗ್ ಟ್ರ್ಯಾಕ್ ಮುಂತಾದ ಕೆಲಸಗಳನ್ನು ಕೈಗೊಳ್ಳುವಂತೆ ತಿಳಿಸಿದರು.
 
ಇದಕ್ಕೆ ಪ್ರತಿಕ್ರಿಯಿಸಿದ ರಾಷ್ರ್ಟೀಯ ಹೆದ್ದಾರಿ ಯೋಜನೆ ಅಧಿಕಾರಿ ಶ್ರೀಧರ್ ಅವರು ಮಾತನಾಡಿ ಕೆರೆಗಳ ಅಭಿವೃದ್ಧಿಗೆ ಬೇಕಿರುವ ಹಣವನ್ನು ಮೀಸಲಿಡಲಾಗಿದೆ. ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕೆರೆಗಳಿಗೆ ಸಂಬಂಧಿಸಿದಂತೆ ಯೋಜನೆ ಸಿದ್ದಪಡಿಸಿ ತಿಳಿಸಿದರೆ ಹಣ ಪಾವತಿಸುವುದಾಗಿ ತಿಳಿಸಿದರು.

ರೇಷ್ಮೆ ಬೆಳೆಯಲ್ಲಿ ಕಾಣುತ್ತಿರುವ ನುಸಿ ರೋಗ, ಗಂಟು ರೋಗದಿಂದ ರೈತರಿಗೆ ಬಹಳ ತೊಂದರೆಯಾಗುತ್ತಿದ್ದು, ಇದನ್ನು ತಡೆಗಟ್ಟಲು ಶೀಘ್ರ ಕ್ರಮ ಕೈಗೊಳ್ಳಬೇಕು. ಸೆಂಟ್ರಲ್ ಸಿಲ್ಕ್ ಬೋರ್ಡ್ ಅವರೊಂದಿಗೆ ಮಾತನಾಡಿ ಅಲ್ಲಿಯ ವಿಜ್ಞಾನಿಗಳೊಂದಿಗೆ ಸಭೆ ಏರ್ಪಡಿಸಲಾಗುವುದು. ಸ್ಥಳೀಯ ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಹಾಜರಾಗುವಂತೆ ಸಂಸದರು ತಿಳಿಸಿದರು.

ರಾಸುಗಳಲ್ಲಿ ಕಂಡುಬರುವ ಕಾಲು-ಬಾಯಿ ರೋಗ ಉಲ್ಭಣವಾಗುವ ಸ್ಥಳಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತಿದೆ. ಕಳೆದ ಸಾಲಿನಲ್ಲೂ ಸಹ ಕೋವಿಡ್ ಹಿನ್ನಲೆಯಲ್ಲಿ ಲಸಿಕೆ ನೀಡಿರುವುದಿಲ್ಲ. ಈ ಬಾರಿ ಎಲ್ಲಾ ಜಾನುವಾರುಗಳಿಗೆ ಕಾಲು-ಬಾಯಿ ರೋಗ ನಿಯಂತ್ರಿಸುವ ಲಸಿಕೆ ನೀಡುವಂತೆ ಮನವಿ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿರುವ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗಾಗಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ನರೇಗಾ ಯೋಜನೆಯಡಿ 15 ಕೋಟಿ ಅನುದಾನ ನೀಡಲಾಗುತ್ತಿದೆ. ಸಂಬಂಧಿಸಿದ ಶಾಲಾ ಮುಖ್ಯಸ್ಥರು ಗುಣಮಟ್ಟದ ಕೆಲಸಗಳು ನಡೆಯುತ್ತಿರುವುದನ್ನು ಖಾತ್ರಿ ಮಾಡಿಕೊಳ್ಳಬೇಕು. ಯಾವುದೇ ಲೋಪ ಕಂಡುಬಂದಲ್ಲಿ ಮಾಹಿತಿಯನ್ನು ಉನ್ನತ ಅಧಿಕಾರಿಗಳಿಗೆ ತಿಳಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ,ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ , ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಬೆಂಗಳೂರು: 2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ - ಸಚಿವ ಬಿ. ಶ್ರೀರಾಮುಲು

2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ...

ಬೆಂಗಳೂರು: ಅಕ್ಟೋಬರ್ 24ರಿಂದ ಒಂದು ವಾರಗಳ ಕಾಲ ‘ಕನ್ನಡಕ್ಕಾಗಿ ನಾವು’ ಅಭಿಯಾನ - ಸಚಿವ ಸುನೀಲ್ ಕುಮಾರ್

ರಾಜ್ಯಾದಾದ್ಯಂತ 66ನೆ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ನ್ಯಾಮತಿ ತಾಲ್ಲೂಕು ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ- ಗ್ರಾಮವಾಸ್ತವ್ಯಕ್ಕೆ ಚಾಲನೆ

ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ...

ಬಾಗಲಕೋಟೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಪಾಪ್ಯುಲರ್ ಫ್ರಂಟ್ ಕಳವಳ

ಬಾಗಲಕೋಟೆಯ ಜಿಲ್ಲೆಯ ಇಳಕಲ್ ನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಹಿನ್ನೆಲೆಯ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...