ಬಂಟ್ವಾಳ ಬಳಿ ಓಮಿನಿ ಕಾರು, ಬೈಕ್ ನಡುವೆ ಅಪಘಾತ. ಓರ್ವ ಸಾವು, ಇನ್ನೋರ್ವ ಗಾಯ.

Source: SO News | By Laxmi Tanaya | Published on 23rd November 2020, 7:20 PM | Coastal News | Don't Miss |

ಬಂಟ್ವಾಳ : ಓಮಿನಿ ಕಾರು ಬೈಕ್ ಗೆ‌ ಢಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಾಯಗೊಂಡಿರುವ ಘಟನೆ  ಮಬಾಳ್ತಿಲ ಗ್ರಾಮದ  ಕುದ್ರೆಬೆಟ್ಟು ಬೋಲ್ಪೋಡಿ ಬಳಿ ನಡೆದಿದೆ.

 ಕಲ್ಲಡ್ಕ ಕಡೆಯಿಂದ KA-19-MD-2880   ನೇ ಓಮ್ನಿ ಕಾರನ್ನು  ಚಾಲಕ  ಅತೀ ವೇಗ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ KA-21-X-1255  ನೇ ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೋಟಾರ್ ಸೈಕಲ್ ಸವಾರ ಬಂಟ್ವಾಳ ಬಾಳ್ತಿಲ ಗ್ರಾಮದ ನಿವಾಸಿ ಯತಿರಾಜ್ ಹಾಗೂ ಓಮ್ನಿ ಕಾರು ಚಾಲಕ ಯೋಗೀಶ್  ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ವಾಹನಗಳು ಹಾಗೂ ರಸ್ತೆ ಬದಿಯ ವಿದ್ಯುತ್ ಕಂಬ ಜಖಂಗೊಂಡಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ  ಯತಿರಾಜ್ ಎಂಬಾತ ಮೃತಪಟ್ಟಿದ್ದಾನೆ.   ಓಮ್ನಿ ಕಾರು ಚಾಲಕ ಯೋಗೀಶ್ ಚಿಕಿತ್ಸೆ ನೀಡಲಾಗಿದೆ.

 ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...