ದಮನಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ: ಫಲಾನುಭವಿಗಳನ್ನು ಶೀಘ್ರ ಆಯ್ಕೆ: ಜಿಲ್ಲಾಧಿಕಾರಿ ದೀಪಾ ಚೋಳನ್

Source: so news | By Manju Naik | Published on 18th June 2019, 9:47 PM | State News | Don't Miss |

ಧಾರವಾಡ : ಸರಕಾರವು ದಮನಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಮಾಜಿ ದೇವದಾಸಿಯರು, ಅಲೆಮಾರಿಗಳು, ಜೀತದಿಂದ ಮುಕ್ತರಾದವರು, ಸಫಾಯಿ ಕರ್ಮಚಾರಿಗಳು, ಬೀದಿಬದಿಯಲ್ಲಿ ವಾಸಿಸುವ ನಿರ್ಗತಿಕರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮದ ಮೂಲಕ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಸಂಬಂಧಿಸಿದ ಇಲಾಖೆಗಳು, ಸಂಘ ಸಂಸ್ಥೆಗಳು ಈ ವರ್ಗದ ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಂಭಾಂಗಣದಲ್ಲಿ ಇಂದು (ಮಂಗಳವಾರ) ಸಂಜೆ ನಡೆದ ದಮನಿತ ಮಹಿಳೆಯರ ಸಂರಕ್ಷಣೆ, ಪುನಶ್ಚೆÃತನ ಹಾಗೂ ದಮನ ತಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಡಾ.ಜಯಮಾಲಾ ಅವರ ಅಧ್ಯಕ್ಷತೆಯಲ್ಲಿ 2015ರಲ್ಲಿ ಲೈಂಗಿತ ದಮನಿತ ಮಹಿಳೆಯರ ಸ್ಥಿತಿಗತಿಗಳ ಅಧ್ಯಯನಕ್ಕೆ ಸಮಿತಿ ರಚನೆ ಮಾಡಿತ್ತು. ಈ ಸಮಿತಿ ನೀಡಿದ ಶಿಫಾರಸ್ಸುಗಳನ್ನು 2017-18ನೇ ಸಾಲಿನ ಆಯವ್ಯಯದಲ್ಲಿ ಅಳವಡಿಸಲಾಗಿದೆ. ದಮನಿತ ಮಹಿಳೆಯರ ಅಸಹಾಯಕತೆ ಹೋಗಲಾಡಿಸಲು, ಅವರ ಜೀವನ ಮಟ್ಟ ಸುಧಾರಣೆ ಮಾಡಿ ಸಬಲೀಕರಣ ಮತ್ತು ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ನೀಡಲು ಜಿಲ್ಲಾ ಮಟ್ಟದ ಕೋಶವು ಎಲ್ಲ ಇಲಾಖೆಗಳಿಗೆ ಸೂಚನೆ ನೀಡಿದೆ. ಈ ಕಾರ್ಯದಲ್ಲಿ ಅಡಚಣೆಗಳು ಎದುರಾದರೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳನ್ನು ತೃತೀಯಲಿಂಗಿಗಳು ಭೇಟಿಮಾಡಿ ಪರಿಹಾರ ಕಂಡುಕೊಳ್ಳಬಹುದು. ಆಧಾರ ಕಾರ್ಡ, ಆರೋಗ್ಯ ಕಾರ್ಡ ಪಡೆಯಬೇಕು. ಮೈತ್ರಿ ಯೋಜನೆಯಡಿ ಮಾಶಾಸನ ನೀಡಲಾಗುತ್ತಿದೆ. ಉದ್ಯೊÃಗ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಗಳಿಂದ ಸ್ವಯಂ ಉದ್ಯೊÃಗ ತರಬೇತಿ ನೀಡಲು ಏರ್ಪಾಡು ಮಾಡಲಾಗುವುದು. ಲಿಂಗತ್ವ ಅಲ್ಪಸಂಖ್ಯಾತರು ಇವುಗಳ ಪ್ರಯೋಜನ ಪಡೆಯಲು ಮುಂದೆ ಬರಬೇಕು ಎಂದರು.
ಕಳೆದ ಮಾರ್ಚನಲ್ಲಿ ಧಾರವಾಡದ ಕುಮಾರೇಶ್ವರ ನಗರದಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತ ಪ್ರಕರಣ ನಡೆದಾಗ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ವರ್ಗದ ಹಲವು ಕುಟುಂಬಗಳ ಸದಸ್ಯರು ಗಾಯಗೊಂಡಿದ್ದಾರೆ. ಅವರಿಗೆ ಈ ಯೋಜನೆಯಡಿ ಸೂರು ಒದಗಿಸಲು ಅವಕಾಶ ಕಲ್ಪಿಸಲು ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ವಸತಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಕುಷ್ಟರೋಗದಿಂದ ಗುಣಮುಖರಾದವರು, ಎಚ್.ಐ.ವಿ. ಪೀಡಿತರು ಮತ್ತು ಸೋಂಕಿತರು ನೂರಾರು ಜನ ವಸತಿ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅವರ ಬಳಿ ನಿವೇಶನ ಇಲ್ಲ. ಯೋಜನೆಯ ಮಾರ್ಗ ಸೂಚಿಗಳ ಪ್ರಕಾರ ಸರಕಾರದ ಭೂಮಿ ಗುರುತಿಸಿ, ಮನೆಗಳನ್ನು ನಿರ್ಮಿಸಿ ಕೊಡಲು ಅವಕಾಶವಿದೆ ಎಂದರು.
ಲಿಂಗತ್ವ ಅಲ್ಪಸಂಖ್ಯಾತರ ಅಹವಾಲುಗಳನ್ನು ವ್ಯಕ್ತಪಡಿಸಿದ ರಾಜರತ್ನ ಅವರು, ತಮ್ಮನ್ನು ಅನಾಥಾಶ್ರಮ ಅಥವಾ ವೃದ್ಧಾಶ್ರಮಗಳಿಗೆ ಸೇರಿಸಬೇಡಿ. ಸ್ವಯಂ ಉದ್ಯೊÃಗ ಕೈಗೊಳ್ಳಲು ಮಾರ್ಗದರ್ಶನ, ಆರ್ಥಿಕ ನೆರವು ಬೇಕು. ಸ್ವಸಹಾಯ ಗುಂಪುಗಳನ್ನು ರಚಿಸಿಕೊಳ್ಳಲು ಸಿದ್ಧರಿದ್ದೆÃವೆ. ಶಾಲೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರವೇಶ ಕಲ್ಪಿಸುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರಕಾರ ತಮ್ಮ ಸಂಸ್ಥೆಗಳಿಗೆ ನೆರವು ನೀಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್.ಚಿನ್ನಣ್ಣವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ಎಮ್.ದೊಡ್ಡಮನಿ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾ¯ನಕರ್, ಡಿವೈಎಸ್‌ಪಿ ಗುರು ಮತ್ತೂರ, ದಮನಿತ ಮಹಿಳೆಯರ ಸ್ಥಿತಿಗತಿಗಳ ಅಧ್ಯಯನ ಸಮಿತಿ ಸದಸ್ಯ, ನ್ಯಾಯವಾದಿ ಬಿ.ಎಲ್.ಪಾಟೀಲ್, ರಾಜೀವ ಗಾಂಧಿ ವಸತಿ ನಿಗಮದ ನೋಡಲ್ ಅಧಿಕಾರಿ ರೇಖಾ ಡೊಳ್ಳಿನವರ್, ಮಹಿಳಾ ಅಭಿವೃದ್ಧಿ ನಿಗಮದ ನಂದಿನಿ ಮತ್ತಿತರರು ಇದ್ದರು.

Read These Next

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು - ಸಚಿವ ಜಗದೀಶ ಶೆಟ್ಟರ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು - ಸಚಿವ ಜಗದೀಶ ಶೆಟ್ಟರ್

ರಾಣೇಬೆನ್ನೂರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ಸುಗಮ ಮತದಾನಕ್ಕೆ ಸರ್ವ ಸಿದ್ಧತೆ

ರಾಣೇಬೆನ್ನೂರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ಸುಗಮ ಮತದಾನಕ್ಕೆ ಸರ್ವ ಸಿದ್ಧತೆ

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂ. ಕಾಲೇಜಿನ ಸಹಯೋಗದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಸಂಪನ್ನ 

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂರ್ವ ಕಾಲೇಜಿನ ಸಹಯೋಗದಲ್ಲಿ ಭಟ್ಕಳ ತಾಲೂಕಿನ ಹೈಸ್ಕೂಲಿನ ಪ್ರೌಢಶಾಲಾ ...

ನದಿಗೆ ಕೊಳಚೆ ನೀರು ಸೇರ್ಪಡೆ: ಮಣ್ಕುಳಿ ಮತ್ತು ಮಾರುತಿ ನಗರ ಅಭಿವೃದ್ಧಿ ಸಮಿತಿಯಿಂದ ಪಂಚಾಯತಗೆ ಮನವಿ ಸಲ್ಲಿಕೆ’

ನದಿಗೆ ಕೊಳಚೆ ನೀರು ಸೇರ್ಪಡೆ: ಮಣ್ಕುಳಿ ಮತ್ತು ಮಾರುತಿ ನಗರ ಅಭಿವೃದ್ಧಿ ಸಮಿತಿಯಿಂದ ಪಂಚಾಯತಗೆ ಮನವಿ ಸಲ್ಲಿಕೆ’