ಮುರುಡೇಶ್ವರದಲ್ಲಿ 27 ವರ್ಷ ಹಿಂದಿನ ಹೊಡೆದಾಟ, ದೊಂಬಿ ಪ್ರಕರಣದ ಆರೋಪಿ ಸೆರೆ

Source: so news | By MV Bhatkal | Published on 6th December 2022, 11:53 PM | Coastal News |

ಭಟ್ಕಳ : ೧೯೯೫ರಲ್ಲಿ ಮುರುಡೇಶ್ವರದಲ್ಲಿ ನಡೆದಿದ್ದ ಹೊಡೆದಾಟ, ದೊಂಬಿ ಪ್ರಕರಣವೊಂದರಲ್ಲಿ  ಆರೋಪಿಯಾಗಿದ್ದು ಸುಮಾರು ೨೭ ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ  ಮುರುಡೇಶ್ವರ ಪೊಲೀಸರು ಸಫಲರಾಗಿದ್ದಾರೆ. 
ಬಂಧಿತ ಆರೋಪಿಯನ್ನು ಮುರುಡೇಶ್ವರ ನ್ಯಾಶನಲ್ ಕಾಲೋನಿಯ ನಿವಾಸಿ ಮಹ್ಮದ್ ಸಾಧಿಕ್ ಅಹ್ಮದ್ ದಬಾಪು ಎಂದು ಗುರುತಿಸಲಾಗಿದೆ. ಈತ ಕೆಲವು ವರ್ಷಗಳ ಕಾಲ ತಲೆ ಮರೆಸಿಕೊಂಡು ಅರಬ್ ರಾಷ್ಟ್ರಗಳಲ್ಲಿ ನೆಲೆಸಿದ್ದ ಎನ್ನಲಾಗಿದೆ. ಈತ ಮುರುಡೇಶ್ವರಕ್ಕೆ ಬಂದಿದ್ದ ಕುರಿತು ಖಚಿತ ಮಾಹಿತಿಯನ್ನು ಪಡದ  ವಾರೆಂಟ್ ಹವಾಲ್ದಾರ ನವೀನ್ ನಾಯಕ್, ಪೊಲೀಸ್ ಕಾನ್‌ಸ್ಟೇಬಲ್ ಲಕ್ಷ್ಮಣ ಪೂಜಾರಿ ಇವರುಗಳು  ಮುರುಡೇಶ್ವರ ಎಸ್.ಐ. ಪರಮಾನಂದ ಕೊಣ್ಣೂರು ಅವರ ಮಾರ್ಗದರ್ಶನದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ೧೫ ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಮಾಡಿದೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...