ಮುರುಢೇಶ್ವರ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳಿಸಲು ಕ್ರಮ- ಜಿ.ಪಂ. ಸಿಇಒ ಪ್ರಿಯಾಂಗ್

Source: SOnews | By Staff Correspondent | Published on 26th January 2021, 8:21 PM | Coastal News |

•    ಮುರುಢೇಶ್ವರದಲ್ಲಿ ಜ.೩೧ ರಿಂದ ಫೆ.೧ ರ ವರೆಗೆ ಕಡಲು ಸ್ವಚ್ಚತಾ ಅಭಿಯಾನ

ಭಟ್ಕಳ: ಅಪೂರ್ಣಗೊಂಡಿರುವ ಮುರ್ಡೇಶ್ವರ ರಸ್ತೆ ಅಗಲೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗ ಹೇಳಿದರು. 

ಭಟ್ಕಳದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಮುಗಿಸಿ ಕಾರವಾರಕ್ಕೆ ಮರಳುವ ಹಾದಿಯಲ್ಲಿ ಬೇಂಗ್ರೆ, ಮಾವಳ್ಳಿ-೧, ಮಾವಳ್ಳಿ-೨ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮುರ್ಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. 

ಕಳೆದ ಮೂರು ವರ್ಷಗಳಿಂದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ವಾಹನ ದಟ್ಟಣೆ ಸೇರಿದಂತೆ ಮತ್ತಿತರ ಸಮಸ್ಯೆಗಳ ಹಿನ್ನೆಲೆಯಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗಿಲ್ಲ. ೧೫ ದಿನಗಳ ಕಾಲ ರಸ್ತೆಯನ್ನು ಬಂದ್ ಮಾಡಿ ಕಾಮಗಾರಿ ಮುಗಿಸಲಾಗುವುದು ಎಂದರು. ಕಾಮಗಾರಿಯ ಸಮಯದಲ್ಲಿ ಬದಲೀ ಮಾರ್ಗದ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದ್ದು, ಕಾಮಗಾರಿ ಶೀಘ್ರ ಮುಗಿಸಲು ಸ್ಥಳೀಯರ ಸಹಕಾರ ಅಗತ್ಯಬೇಕು ಎಂದೂ ಹೇಳಿದರು. 

ಕಡಲತೀರ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಜ.೧೬ ರಿಂದ ಫೆ.೧೫ರ ವರೆಗೆ ಕಡಲತೀರದ ಸ್ವಚ್ಛತಾ ಅಭಿಯಾನ ನಡೆಯಲಿದೆ.  ಮುರ್ಡೇಶ್ವರದಲ್ಲೂ ಸಹ ಜ.೩೧ ರಿಂದ ೧ ವಾರದ ಕಾಲ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಈ ಕಾರ್ಯದಲ್ಲಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗ, ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸುತ್ತಿದ್ದು, ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ಕೋರಿದರು. ಬೇಂಗ್ರೆಯ ಗೊಂಡರಕೇರಿಯ ಕಾಮಗಾರಿಗೆ  ಚಿಕ್ಕ ನೀರಾವರಿ ಇಲಾಖೆ ಬಿಲ್ ಪಾವತಿ ವಿಚಾರಕ್ಕೆ ಸಂಬAಧಿಸಿದAತೆ ಜಿಲ್ಲಾ ಪಂಚಾಯತ್ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿದ್ದು, ಸ್ಥಳ ಪರಿಶೀಲನೆ ನಡೆಸಿದ್ದೇನೆ.  ಈ ಬಗ್ಗೆ ತನಿಖಾ ತಂಡ ರಚಿಸಲಾಗಿದ್ದು ತಂಡದಿAದ ವರದಿ ಬಂದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಪಿಡಿಓ ಮಹೇಶ ನಾಯ್ಕ ಮುಂತಾದವರಿದ್ದರು. 
 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...