ಕೋವಿಡ್ -19 ನಿಂದ ಮೃತರ ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ್ದಲ್ಲಿ ಕಠಿಣ ಕ್ರಮ:ಜಿಲ್ಲಾಧಿಕಾರಿ ಜಿ.ಜಗದೀಶ್

Source: so news | Published on 25th July 2020, 12:25 AM | Coastal News | Don't Miss |


ಉಡುಪಿ:ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು  ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು,  ಸೋಂಕಿತರ ಸಾವಿನ ಸಂಖ್ಯೆಯು  ಸಹ ಗಣನೀಯವಾಗಿ ಹೆಚ್ಚಾಗುತ್ತಿರುವುದರಿಂದ . ನಾಗರಿಕರು ಮೃತ ಪಟ್ಟಾಗ ಗೌರವಯುತ ಸಂಸ್ಕಾರ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು,   ಕೋವಿಡ್ 19 ಸೋಂಕಿತರು ಮೃತಪಟ್ಟಲ್ಲಿ ಅವರ ಶವ ಸಂಸ್ಕಾರಕ್ಕೆ  ಸರಕಾರದಿಂದ ಪ್ರತ್ಯೇಕ  ಮಾರ್ಗಸೂಚಿ ಹೊರಡಿಸಲಾಗಿದ್ದು ಅದರಂತೆ ಶವ ಸಂಸ್ಕಾರವನ್ನು   ನಡೆಸಲಾಗುತ್ತಿದೆ.
ಆದರೆ ಇತ್ತೀಚಿನ ದಿನಗಳಲ್ಲಿ ಕೋವಿಡ್ 19 ಸೋಂಕಿತರ ಹಾಗೂ  ಇತರ ಪ್ರಕರಣಗಳಲ್ಲಿ ಶವ ಸಂಸ್ಕಾರಕ್ಕೆ  ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದ್ದು ,ಇದು ವಿಷಾದನೀಯ  ಬೆಳವಣಿಯಾಗಿದೆ. ಸೋಂಕಿತರ ಶವ ಸಂಸ್ಕಾರ ಸರಕಾರದ ನಿರ್ದೇಶನದಂತೆ  ನಡೆಸಲಾಗುತ್ತಿದ್ದು, ಜನರು ಯಾವುದೇ ರೀತಿ ಆತಂಕ ಪಡುವ ಅವಶ್ಯಕತೆ ಇಲ್ಲ.  
ಸಾರ್ವಜನಿಕರು  ,ಶವ ಸಂಸ್ಕಾರಕ್ಕೆ ಯಾವುದೇ ರೀತಿಯ ಪ್ರತಿರೋಧ ಒಡ್ಡಬಾರದಾಗಿ ಎಚ್ಚರಿಕೆ ನೀಡಲಾಗಿದೆ. ಯಾರೇ ಆಗಲಿ ಪ್ರತಿರೋಧ ಒಡ್ಡಿದ್ದರೇ ಕಾನೂನಿನಂತೆ ಕಠಿಣಕ್ರಮವನ್ನು ಕೈಗೊಳ್ಳಲಾಗುವುದು  ಎಂದು ಜಿಲ್ಲಾದಂಡಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...