ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಶೀಘೃದಲ್ಲಿ ಅದಾನಿ ಸಮೂಹ ಸಂಸ್ಥೆಗೆ.

Source: SO News | By Laxmi Tanaya | Published on 16th October 2020, 4:04 PM | Coastal News | Don't Miss |

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರಕಾರದ ಮಹತ್ವದ ಯೋಜನೆ ಅಂತಿಮ ಹಂತ ತಲುಪಿದ್ದು, ಮಾಸಾಂತ್ಯದೊಳಗೆ ಗೌತಮ್‌ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಗೆ ಹಸ್ತಾಂತರವಾಗಲಿದೆ.

 ಇದರೊಂದಿಗೆ 69 ವರ್ಷಗಳಿಂದ ಸರಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಖಾಸಗಿಯ ಪಾಲಾಗಲಿದೆ. ಮೂಲಗಳ ಪ್ರಕಾರ ಅದಾನಿ ಸಂಸ್ಥೆಗೆ ಹಸ್ತಾಂತರ ಪ್ರಕ್ರಿಯೆ ನ. 12ರ ಒಳಗೆ ಪೂರ್ಣಗೊಳ್ಳಬೇಕು.  ಲಭಿಸಿರುವ ಉನ್ನತ ಮೂಲದ ಮಾಹಿತಿಯಂತೆ ಅ. 24ರ ಶನಿವಾರದ ಮಧ್ಯರಾತ್ರಿಯಿಂದ ಅಥವಾ ನ. 1ರಿಂದ ಏರ್‌ಪೋರ್ಟ್‌ ನಿರ್ವಹಣೆಯ ಹೊಣೆಯನ್ನು ಅದಾನಿ ಸಂಸ್ಥೆಗೆ ಅಧಿಕೃತವಾಗಿ ಹಸ್ತಾಂತರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಮಾಸಾಂತ್ಯಕ್ಕೆ ಹಸ್ತಾಂತರವಾದರೂ ಮುಂದಿನ ಒಂದೆರಡು ವರ್ಷ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಅದಾನಿ ಸಂಸ್ಥೆ ಸಮಾನಾಂತರ ಜವಾಬ್ದಾರಿ ಯೊಂದಿಗೆ ಕಾರ್ಯ ನಿರ್ವಹಿಸಲಿವೆ. ಈ ಸಮಯದಲ್ಲಿ ನಿಲ್ದಾಣ ಸಂಬಂಧಿತ ವಿಚಾರದಲ್ಲಿ ಹಣ ವಿನಿಯೋಗ, ಟರ್ಮಿನಲ್‌ನಲ್ಲಿ ವಾಣಿಜ್ಯ ಚಟುವಟಿಕೆ, ಲಾಭ-ನಷ್ಟ ವ್ಯವಹಾರವನ್ನೂ ಅದಾನಿ ಸಂಸ್ಥೆಯೇ ನೋಡಿಕೊಳ್ಳಲಿದೆ.

 ಪ್ರಾಧಿಕಾರವು ವಿಮಾನ ಆಗಮನ-ನಿರ್ಗಮನದ ವಿಚಾರಕ್ಕೆ ಆದ್ಯತೆ ನೀಡಿ ಒಟ್ಟು ವ್ಯವಸ್ಥೆಯ ಬಗ್ಗೆ ಮಾರ್ಗದರ್ಶಕ ಸ್ಥಾನದಲ್ಲಿರಲಿದೆ. ಏರ್‌ಲೈನ್ಸ್‌ ಸಂಸ್ಥೆಯವರು ಇಲ್ಲಿಯವರೆಗೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಬಾಡಿಗೆ ನೀಡುತ್ತಿದ್ದರೆ ಹಸ್ತಾಂತರದ ಬಳಿಕ ಈ ವ್ಯವಹಾರವನ್ನು ಅದಾನಿ ಸಂಸ್ಥೆಯೇ ನೋಡಿಕೊಳ್ಳಲಿದೆ.

ಸದ್ಯ ಅಲ್ಲಿನ ಉದ್ಯೋಗಿಗಳು ಯಥಾಸ್ಥಿತಿಯಂತೆ ಕರ್ತವ್ಯದಲ್ಲಿರುತ್ತಾರೆ. ವರ್ಷದ ಬಳಿಕ ಹೊಸ ನೇಮಕಾತಿಯನ್ನು ಅದಾನಿ ಸಂಸ್ಥೆ ನಡೆಸುವ ಸಾಧ್ಯತೆಯಿದೆ.

ಪೂರ್ಣವಾಗಿ ಹಸ್ತಾಂತರದ ಬಳಿಕ ವಿಮಾನಗಳ ಆಗಮನ-ನಿರ್ಗಮನದ ಉಸ್ತುವಾರಿಯನ್ನು ಮಾತ್ರ ಪ್ರಾಧಿಕಾರ ನೋಡಿಕೊಳ್ಳಲಿದೆ. ಹೀಗಾಗಿ ಎಟಿಸಿ (ಏರ್‌ ಟ್ರಾಫಿಕ್‌ ಕಂಟ್ರೋಲ್‌) ಹಾಗೂ ಕಮ್ಯುನಿಕೇಶನ್‌ ಆ್ಯಂಡ್‌ ನೇವಿಗೇಷನ್‌ ಸೆಂಟರ್‌ನ ಉಸ್ತುವಾರಿ ಪ್ರಾಧಿಕಾರದಲ್ಲೇ ಉಳಿಯಲಿದೆ. ಭದ್ರತಾ ಸಿಬಂದಿ ಹಾಗೂ ಏರ್‌ಲೈನ್‌ ಸಿಬಂದಿ ಹೊರತುಪಡಿಸಿ ಟರ್ಮಿನಲ್‌ ಕಟ್ಟಡ, ರನ್‌ ವೇ, ಎಲೆಕ್ಟ್ರಿಕಲ್‌, ಸಿವಿಲ್‌ ಸೇರಿದಂತೆ ಎಲ್ಲ ವಿಚಾರಗಳನ್ನು ಅದಾನಿ ಸಂಸ್ಥೆ ನಿರ್ವಹಿಸಲಿದೆ.

ಸಿಇಒ ಉಸ್ತುವಾರಿ
ನಿಲ್ದಾಣದ ಒಟ್ಟು ವಿಚಾರಗಳ ಬಗ್ಗೆ ಕಳೆದ ಒಂದೆರಡು ತಿಂಗಳಿನಿಂದ ಅದಾನಿ ಸಂಸ್ಥೆಯ 25 ಉನ್ನತ ಅಧಿಕಾರಿಗಳು ಅಧ್ಯಯನ ಮಾಡಿದ್ದಾರೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಜಾರಿಯಲ್ಲಿರಲಿದ್ದು, ಬಳಿಕ ಅದಾನಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಉಸ್ತುವಾರಿ ನೋಡಿಕೊಳ್ಳುವ ನಿರೀಕ್ಷೆಯಿದೆ.

ಕೋಟ್ಯಂತರ ರೂ. ಹೂಡಿಕೆ ನಿರೀಕ್ಷೆ
ಅದಾನಿ ಸಂಸ್ಥೆ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಕೋಟ್ಯಂತರ ರೂ. ಹೂಡಿಕೆ ಮಾಡುವ ಸಾಧ್ಯತೆಯಿದೆ. ಬಹುನಿರೀಕ್ಷೆಯ ರನ್‌ವೇ ವಿಸ್ತರಣೆ, ಹೊಸದಿಲ್ಲಿ-ಮುಂಬಯಿ ಏರ್‌ಪೋರ್ಟ್‌ ಮಾದರಿಯಲ್ಲಿ ಮಂಗಳೂರಿನಲ್ಲೂ ಪ್ರತ್ಯೇಕ ಕಾಂಪ್ಲೆಕ್ಸ್‌, ಮಾಲ್‌ಗ‌ಳು ಬರಲಿವೆ. ಪ್ರಯಾಣಿಕರಿಗೆ ವಿಧಿಸುವ ಶುಲ್ಕದ ಪ್ರಮಾಣ, ಟರ್ಮಿನಲ್‌ ಒಳಗಿನ ವಾಣಿಜ್ಯ ಮಳಿಗೆಗಳ ಮಾಸಿಕ ಬಾಡಿಗೆ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.

2018ರ ಡಿಸೆಂಬರ್‌ನಲ್ಲಿ ಮಂಗಳೂರು ವಿಮಾನ ನಿಲ್ದಾಣವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಗೆ ಟೆಂಡರ್‌ ಆಹ್ವಾನಿಸಲಾಗಿತ್ತು. 2019 ಜುಲೈಯಲ್ಲಿ ಕೇಂದ್ರ ಸರಕಾರ ಅನುಮೋದನೆ ನೀಡಿ, 2020ರ ಫೆಬ್ರವರಿಯಲ್ಲಿ ಅದಾನಿ ಸಂಸ್ಥೆಯ ಜತೆಗೆ ಕೇಂದ್ರ ವಿಮಾನ ನಿಲ್ದಾಣ ಒಪ್ಪಂದ ಮಾಡಿ ಮುಂದಿನ 50 ವರ್ಷಗಳಿಗೆ ಗುತ್ತಿಗೆ ನೀಡಲಾಗಿತ್ತು. ಅದಾನಿ ಸಂಸ್ಥೆಯು ಬಳಿಕ ಇತರ ನಿರ್ವಹಣೆಗಾಗಿ ಜರ್ಮನಿಯ ಕಂಪೆನಿಗೆ ಹೊರಗುತ್ತಿಗೆ ನೀಡಲಿದೆ.

ಪ್ರಕ್ರಿಯೆ ಕೊನೆಯ ಹಂತದಲ್ಲಿ
ವಿಮಾನ ನಿಲ್ದಾಣವನ್ನು ಅದಾನಿ ಸಂಸ್ಥೆಗೆ ಹಸ್ತಾಂತರಿಸುವ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ. ನ. 12ರ ಒಳಗೆ ನಿಲ್ದಾಣ ಪ್ರಾಧಿಕಾರದ ಕಡೆಯಿಂದ ಹಸ್ತಾಂತರ ಮಾಡಬೇಕಿದೆ. ಅಧಿಕೃತ ಹಸ್ತಾಂತರ ದಿನಾಂಕವನ್ನು ಅದಾನಿ ಸಂಸ್ಥೆಯೇ ತೀರ್ಮಾನಿಸುತ್ತದೆ. ನಾವು ಮಾಹಿತಿ ಬಹಿರಂಗಪಡಿಸುವಂತಿಲ್ಲ.
– ವಿ.ವಿ. ರಾವ್‌, ನಿರ್ದೇಶಕರು, ಮಂಗಳೂರು ವಿಮಾನ ನಿಲ್ದಾಣ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...