ಕಾರ್ಮಿಕರ ವಿಸ್ತೃತ ವಸತಿ ಸಮುಚ್ಚಯ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ : ಅರಬೈಲು ಶಿವರಾಮ್ ಹೆಬ್ಬಾರ್

Source: SO News | By Laxmi Tanaya | Published on 28th June 2022, 10:48 PM | State News | Don't Miss |

ಶಿವಮೊಗ್ಗ  : ಶಿವಮೊಗ್ಗ ಸಮೀಪದ ಸಿದ್ಲೀಪುರ ಗ್ರಾಮದಲ್ಲಿ 10 ಎಕರೆ ಜಾಗದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ 500ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನ ಒಳಗೊಂಡ ವಸತಿ ಸಮುಚ್ಛಯವನ್ನು ನರ್ಮಿಸಲು ಉದ್ದೇಶಿಸಲಾಗಿದ್ದು, ಹೆಚ್ಚುವರಿ 500 ಮಂದಿ ಕಾರ್ಮಿಕರು ಉಳಿದುಕೊಳ್ಳಲು ಅನುಕೂಲವಾಗುವಂತೆ ಕಟ್ಟಡ ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಲಾಗುವುದು ಎಂದು ರಾಜ್ಯ ಕಾರ್ಮಿಕ ಸಚಿವ ಅರಬೈಲು ಶಿವರಾಮ್ ಹೆಬ್ಬಾರ್ ಅವರು ಹೇಳಿದರು.

ಅವರು ಮಂಗಳವಾರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಸಿದ್ಲೀಪುರದಲ್ಲಿ ಕಾರ್ಮಿಕರಿಗೆ ವಸತಿ ಸಮುಚ್ಛಯ ಕಾಮಗಾರಿಯ ಗುದ್ದಲಿ ಪೂಜೆ ಮತ್ತು ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಇರುವ ಒಟ್ಟು ಕಾರ್ಮಿಕ ಕುಟುಂಬಗಳಲ್ಲಿ ಮೊದಲ ಹಂತದಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ 30000 ಕುಟುಂಬಗಳ ಸದಸ್ಯರಿಗೆ 20 ರೀತಿಯ ಕಾಯಿಲೆಗಳಿಗೆ ಸಂಬಂಧಿಸಿದಂತೆ ಉಚಿತ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಅದಕ್ಕಾಗಿ ಪ್ರತಿ ವ್ಯಕ್ತಿಗೆ 11600/-ರೂ.ಗಳಂತೆ ಹಣ ಖರ್ಚು ಮಾಡಲಾಗುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ 30000 ಮಂದಿಯ ಆರೋಗ್ಯ ತಪಾಸಣೆಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುವುದು ಎಂದರು.

ಕಾರ್ಮಿಕರ ಮಕ್ಕಳಲ್ಲೂ ಎಲ್ಲಾ ರೀತಿಯ ಅರ್ಹತೆ ಇದ್ದು ಅವರಿಗೂ ಸಮಾಜದಲ್ಲಿ ಗುರುತಿಸುವ ಹಾಗೂ ಸ್ವಾಭಿಮಾನದಿಂದ ಜೀವಿಸುವ ಅವಕಾಶ ಒದಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸಲಾಗುತ್ತಿದೆ. ಕಾರ್ಮಿಕರ ಅರ್ಹ ಮತ್ತು ಆಸಕ್ತ ಮಕ್ಕಳನ್ನು ಪೈಲಟ್ ಆಗಿಸುವ ನಿಟ್ಟಿನಲ್ಲಿ 18ತಿಂಗಳ ತರಬೇತಿಯನ್ನು ಆಯೋಜಿಸಲಾಗಿದೆ. ಐ.ಎ.ಎಸ್ ಮತ್ತು ಕೆ.ಎ.ಎಸ್ ತರಬೇತಿಯೊಂದಿಗೆ ಶಿಷ್ಯವೇತನ ನೀಡಿ ಪ್ರೋತ್ಸಾಹಿಸುತ್ತಿರುವುದು ದೇಶದಲ್ಲೇ ಮೊದಲು ಎಂದರು.

ಈಗಾಗಲೇ ರಾಜ್ಯದಲ್ಲಿ 4,91,000 ಕಾರ್ಮಿಕ ಮಕ್ಕಳಿಗೆ 400 ಕೋ.ರೂ.ಗಳ ವಿದ್ಯಾರ್ಥಿವೇತನ ನೀಡಲಾಗಿದೆ. ಅಲ್ಲದೆ ರಾಜ್ಯದ ಒಟ್ಟು ಕಾರ್ಮಿಕರಲ್ಲಿ ಈವರೆಗೆ ಸುಮಾರು 70000 ಕಾರ್ಮಿಕರು ಇ-ಶ್ರಮ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ರಾಜ್ಯದ ಅಸಂಘಟಿತ ಕಾರ್ಮಿಕರು, ಉದ್ಯೋಗ ಅರಸಿ ಊರಿಂದೂರಿಗೆ ತೆರಳುವ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವ ಹಾಗೂ ಸರ್ಕಾರಿ ಸೇವಾಸೌಲಭ್ಯಗಳಿಗಾಗಿ ಇ-ಶ್ರಮ್ ಕಾರ್ಡನ್ನು ವಿತರಿಸಲಾಗುತ್ತಿದೆ ಎಂದರು.

ಪ್ರಸ್ತುತ ಆಯೋಜಿಸಲಾಗಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯದಿಂದ ಗಂಭೀರ ಸ್ವರೂಪದ ಕಾಯಿಲೆಗಳು ಗೋಚರಿಸಿದಲ್ಲಿ ಚಿಕಿತ್ಸೆಗಾಗಿ ಮಾಡಲಾದ ವೈದ್ಯಕೀಯ ವೆಚ್ಚವನ್ನು ಸರ್ಕಾರದ ವತಿಯಿಂದ ಮರುಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಕೊರೋನದಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಸಚಿವರು ಕೈಗೊಂಡ ಕ್ರಮ ಅಭಿನಂದನಾರ್ಹವಾದುದಾಗಿದೆ ಮಾತ್ರವಲ್ಲ ಸಕಾಲದಲ್ಲಿ ಅಸಂಖ್ಯಾತ ಕಾರ್ಮಿಕರಿಗೆ ಆಹಾರ ಪೆÇಟ್ಟಣಗಳನ್ನು ವಿತರಿಸಿದ ಕೀರ್ತಿ ಕಾರ್ಮಿಕ ಸಚಿವರಿಗೆ ಸಲ್ಲುತ್ತದೆ ಎಂದರು.

ಅಲ್ಲದೆ ಹೊರರಾಜ್ಯಗಳಿಂದ ರಾಜ್ಯದ ವಿವಿದೆಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ  ಅಸಂಖ್ಯಾತ ಕಾರ್ಮಿಕರನ್ನು ಕೋವಿಡ್ ನಂತಹ ಸಂದರ್ಭದಲ್ಲಿ ಸುರಕ್ಷಿತವಾಗಿ ಊರಿಗೆ ಬಿಟ್ಟು ಬರಲಾಯಿತು ಎಂದರು. 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ಮಾತನಾಡಿ, ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಸಕಾಲದಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ ಹಸ್ತಾಂತರಿಸುವಂತೆ ಸೂಚಿಸಿದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯರಾದ ರುದ್ರೇಗೌಡರು, ಡಿ.ಎಸ್.ಅರುಣ್, ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಎಸ್.ದತ್ತಾತ್ರಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸಿ.ಇ.ಒ. ಶ್ರೀಮತಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸತೀಶ್ ಮುಂತಾದವರು ಉಪಸ್ಥಿತರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...