ಸ್ಪೋಟಕ ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರಿಗೆ ಹಸ್ತಾಂತರ

Source: sonews | By Staff Correspondent | Published on 22nd January 2020, 6:44 PM | Coastal News |

ಬೆಂಗಳೂರು: ಮಂಗಳೂರಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರುವ ಬ್ಯಾಗ್ ನ್ನು ಇಟ್ಟು ಪರಾರಿಯಾಗಿದ್ದ ಪ್ರಕರಣದ ಆರೋಪಿ ಆದಿತ್ಯ ರಾವ್ ಎಂಬಾತನನ್ನು  ವಶಕ್ಕೆ ತೆಗೆದುಕೊಂಡಿದ್ದ ಹಲಸೂರು ಗೇಟ್ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಎಸಿಪಿಗಳಾದ ವಿನಯ್ ಎ ಗಾಂವಕರ್ ಮತ್ತು ಕೆ.ಯು.ಬೆಳ್ಳಿಯಪ್ಪ ನೇತೃತ್ವದ ಪೊಲೀಸರ ತಂಡ  ಇಂದು ಬೆಳಗ್ಗೆ ವಿಮಾನದಲ್ಲಿ ತೆರಳಿ  ಆತತನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪೊಲೀಸರು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ  ಮಂಗಳೂರಿಗೆ ಕರೆ ತರಲಿದ್ದಾರೆ.

ಆರೋಪಿ ಆದಿತ್ಯ ರಾವ್  ಮಂಗಳೂರಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ತುಂಬಿದ ಬ್ಯಾಗ್  ಇಟ್ಟು ಪರಾರಿಯಾಗಿದ್ದನು. ಬಳಿಕ ಅಲ್ಲಿಂದ ಲಾರಿ ಮೂಲಕ ಬೆಂಗಳೂರಿಗೆ ಪರಾರಿಯಾಗಿ ಇಂದು ಬೆಳಗ್ಗೆ ಬೆಂಗಳೂರಿನ ಡಿಜಿಪಿ ಮತ್ತು ಐಸಿಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದನು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...