ಎಪಿಸಿಆರ್ ಕರ್ನಾಟಕ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ನ್ಯಾಯವಾದಿ ಪಿ.ಉಸ್ಮಾನ್, ಕಾರ್ಯದರ್ಶಿಯಾಗಿ ಮೊಹಮ್ಮದ್ ನಿಯಾಜ್ ಮರು ಆಯ್ಕೆ

Source: S O News | By Staff Correspondent | Published on 20th March 2023, 10:02 PM | State News |

ಬೆಂಗಳೂರು: ಬೆಂಗಳೂರು ಹೈಕೋರ್ಟ್ ಹಿರಿಯ ವಕೀಲ ಅಡ್ವೋಕೇಟ್ ಪಿ.ಉಸ್ಮಾನ್ ಮತ್ತು ಅಡ್ವೋಕೇಟ್ ಮೊಹಮ್ಮದ್ ನಿಯಾಜ್  ಕ್ರಮವಾಗಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಕರ್ನಾಟಕ ಘಟಕದ ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ ಮರು ಆಯ್ಕೆಯಾಗಿದ್ದಾರೆ, ಜೊತೆಗೆ ತುಮಕೂರಿನ ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಫ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಕೋಶಾಧಿಕಾರಿಯಾಗಿ ನ್ಯಾಯವಾದಿ ಅಬ್ದುಲ್ ಸಲಾಂ, ಶೇಖ್ ಶಫಿ ಅಹಮದ್ ಆರ್ಟಿಐ ಸಂಯೋಜಕರಾಗಿ ಮತ್ತು ಪತ್ರಕರ್ತ ಇನಾಯತುಲ್ಲಾ ಗವಾಯಿ ಮಾಧ್ಯಮ ಸಂಯೋಜಕರಾಗಿ ಮರು ಆಯ್ಕೆಯಾದರು.

ಬೆಂಗಳೂರಿನ ಇಂಡಿಯನ್ ಅಗ್ರಿಕಲ್ಚರಲ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ ಭಾನುವಾರ ನಡೆದ ರಾಜ್ಯ ಎಪಿಸಿಆರ್ಮೀಟಿಂಗ್ ನಲ್ಲಿ ಮುಂದಿನ ಅವಧಿಗೆ ರಚಿಸಲಾದ ನೂತನ ಕಾರ್ಯಕಾರಿ ಸಮಿತಿಯಲ್ಲಿ ವಕೀಲ ಮಹಮೂದ್ ಖಾಜಿ, ಸುಮಯ್ಯ ರೋಷನ್, ನಸ್ರೀನ್ ತಾಜ್ ಮತ್ತು ಹುಸೇನ್ ಕೋಡಿ ಬೆಂಗ್ರೆ ಆಯ್ಕೆಗೊಂಡರು.

ಕರ್ನಾಟಕದ ವಿವಿಧ ಜಿಲ್ಲೆಗಳ ಎಪಿಸಿಆರ್ ಅಧ್ಯಕ್ಷರನ್ನು ವಕೀಲ ಮೊಹಮ್ಮದ್ ನಿಯಾಜ್ ಸ್ವಾಗತಿಸಿದರು. ವಕೀಲ ಪಿ.ಉಸ್ಮಾನ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಎತ್ತಿ ತೋರಿಸಿದರು ಮತ್ತು ಆಯಾ ಜಿಲ್ಲೆಗಳಲ್ಲಿ ಯಾವುದೇ ಘಟನೆಗಳು ಸಂಭವಿಸಿದಾಗ, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಹದಗೆಡುತ್ತಿರುವ ಪರಿಸ್ಥಿತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಎಪಿಸಿಆರ್ ಕಾರ್ಯಕರ್ತರನ್ನು ಒತ್ತಾಯಿಸಿದರು. ದ್ವೇಷ ಭಾಷಣ, ಎಲ್ಲಿಂದಲಾದರೂ ಯಾವುದೇ ನಿರ್ದೇಶನವನ್ನು ಕಾಯದೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಕಾರ್ಯಕರ್ತರನ್ನು ಒತ್ತಾಯಿಸಿದರು.

ನ್ಯಾಯವಾದಿ ಅಬ್ದುಲ್ ಸಲಾಂ ಸಭೆಯನ್ನು ನಡೆಸಿಕೊಟ್ಟರು, ಎಪಿಸಿಆರ್ ಮೇಲ್ವಿಚಾರಕ ಮೌಲಾನಾ ಮೊಹಮ್ಮದ್ ಯೂಸುಫ್ ಕಣ್ಣಿ ಚುನಾವಣಾ ಪ್ರಕ್ರಿಯೆಯ ಅಧ್ಯಕ್ಷತೆ ವಹಿಸಿದ್ದರು, ಕೊನೆಯಲ್ಲಿ ಶೇಖ್ ಶಫಿ ಅಹಮದ್ ಧನ್ಯವಾದಗೈದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...