ಬೆಳಗಾವಿ: ಕಲುಷಿತ ನೀರು ಸೇವನೆ; ಓರ್ವ ಮೃತ್ಯು: ನಾಲ್ವರ ಸ್ಥಿತಿ ಗಂಭೀರ

Source: Vb | By I.G. Bhatkali | Published on 29th October 2022, 1:41 AM | State News |

ಬೆಂಗಳೂರು: ಕಲುಷಿತ ನೀರು ಸೇವನೆಯಿಂದಾಗಿ ಓರ್ವ ವೃದ್ಧ ಮೃತಪಟ್ಟು, ಸುಮಾರು 90ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಗುರುವಾರ ಬೆಳಗಾವಿಯ ರಾಮದುರ್ಗ ತಾಲೂಕಿನಲ್ಲಿ ಸಂಭವಿಸಿದೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ತಾಲೂಕಿನ ಮುದೇನೂರು ಗ್ರಾಮದ ಶಿವಪ್ಪ ಬೆಳ್ಳೇರಿ (70) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿರುವ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಇನ್ನುಳಿದವರನ್ನು ತಾಲೂಕು ಹಾಗೂ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮುದೇನೂರು ಗ್ರಾಮದಲ್ಲಿ ಕುಡಿ ಯುವ ನೀರು ಪೂರೈಕೆ ಮಾಡುತ್ತಿದ್ದ ಕೊಳವೆ ಒಡೆದು ಕಲುಷಿತ ನೀರು ಸೇರ್ಪಡೆಯಾಗಿದೆ. ಈ ಕಲುಷಿತ ನೀರನ್ನು ಸೇವಿಸಿದ್ದರಿಂದ ಗ್ರಾಮದ ಜನ ಅಸ್ವಸ್ಥಗೊಂಡಿದ್ದಾರೆ. ವಿಷಯ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಮಹಾದೇವಪ್ಪ ಯಾದವಾಡ, ಅಸ್ವಸ್ಥ ಗೊಂಡಿರುವವರಿಗೆ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಕುರಿತಂತೆ ಗುರುವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಶುದ್ದ ಕುಡಿಯುವ ನೀರಿನ ಘಟಕ (ಆರೊ ಪ್ಲಾಂಟ್) ಅಳವಡಿಸಲಾಗಿದೆ. ಗ್ರಾಮದ ಜನ ಈ ಘಟಕದ ನೀರನ್ನೇ ಸೇವಿಸಬೇಕು. ಅಲ್ಲದೆ, ಬೋರ್‌ವೆಲ್‌ಗಳ ಸುತ್ತಮುತ್ತ ಕೆಲವು ರೈತರು ನಿರ್ಮಿಸಿಕೊಂಡಿರುವ ತಿಪ್ಪೆ ಗುಂಡಿಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಶುದ್ದ ನೀರು ಒದಗಿಸುವ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಒಂದು ತಿಂಗಳಲ್ಲಿ ಪ್ರತೀ ಮನೆಗೂ ಸುರಕ್ಷಿತ, ಶುದ್ಧ ನೀರು ಕೊಡಲು ಸರಕಾರ ವ್ಯವಸ್ಥೆ ಮಾಡಲಿದೆ ಎಂದು ಅವರು ಹೇಳಿದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...