ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ. ಶಿರಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಂಜಾಗೃತಾ ಸಭೆ.

Source: SO News | By Laxmi Tanaya | Published on 6th November 2020, 9:41 PM | State News |

ಶಿರಸಿ : ಇತ್ತಿಚಿನ ದಿನಗಳಲ್ಲಿ ದೇವಸ್ಥಾನ ಕಳ್ಳತನ ಪ್ರಕರಣಗಳು ವ್ಯಾಪಕವಾಗಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಶಿರಸಿಯ ಆಯಾ  ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ದೇವಸ್ಥಾನ ಸಮಿತಿಯ ಅಧ್ಯಕ್ಷ - ಸದಸ್ಯರ ಸಭೆಯನ್ನು ನಡೆಸಲಾಯಿತು .

ಪೊಲೀಸ್ ಇಲಾಖೆ ವತಿಯಿಂದ ನಡೆದ ಈ ಸಭೆಯಲ್ಲಿ ಮುಂಜಾಗೃತೆಯ ಬಗ್ಗೆ ತಿಳಿಸಲಾಯಿತು. ದೇವಸ್ಥಾನ ಕಳ್ಳತನ ಪ್ರಕರಣಗಳನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನಗಳಿಗೆ ಸಿಸಿಟಿವಿಗಳನ್ನು ಅಳವಡಿಸುವುದು, ಕಾವಲುಗಾರರನ್ನು ನೇಮಿಸಿಕೊಳ್ಳುವುದು,
ಭದ್ರವಾದ ಲಾಕರ್ ಗಳನ್ನು ಅಳವಡಿಸುವುದು, ಕಳ್ಳತನ ಸೂಚನೆ ನೀಡುವ ಅಲಾರಾಂ ಅಳವಡಿಸುವುದು, ದೇವಸ್ಥಾನದಲ್ಲಿರುವ ಬಂಗಾರದ ಆಭರಣಗಳು ಮತ್ತು ಕಾಣಿಕೆ ಹುಂಡಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಯಿತು.

ಶಿರಸಿ ಉಪವಿಭಾಗದ ಡಿಎಸ್ಪಿ  ಗೋಪಾಲಕೃಷ್ಣ ನಾಯಕ ಹಾಗೂ ಶಿರಸಿ ವೃತ್ತ ನಿರೀಕ್ಷಕರಾದ  ಬಿ ಯು ಪ್ರದೀಪ ರವರ ಮಾರ್ಗದರ್ಶನದಲ್ಲಿ ಹೊಸ ಮಾರುಕಟ್ಟೆ ಠಾಣೆಯ ಪಿಎಸ್ಐ ನಾಗಪ್ಪ ಅಪರಾಧ ವಿಭಾಗದ ಪಿಎಸ್ಐ ಜಯಶ್ರೀ ಶಾನಭಾಗ, ಪ್ರೋಬೆಷನರಿ ಪಿಎಸ್ಐ ನಾಗೇಂದ್ರ , ಗ್ರಾಮೀಣ ಮತ್ತು ನಗರ ಠಾಣೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಭಾಗವಹಿಸಿದ್ದರು

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...