ಜಿಲ್ಲೆಯನ್ನು ವಿಶ್ವ ದರ್ಜೆಯ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಎಲ್ಲಾ ರೀತಿಯ ನೆರವು ; ಸಚಿವ ಮಂಕಾಳ ವೈದ್ಯ

Source: SO News | By Laxmi Tanaya | Published on 27th September 2023, 10:19 PM | Coastal News | Don't Miss |

ಕಾರವಾರ : ಜಿಲ್ಲೆಯನ್ನು ವಿಶ್ವ ದರ್ಜೆಯ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮುಂದೆ ಬರುವ ಹೂಡಿಕೆದಾರರಿಗೆ ಎಲ್ಲಾ ರೀತಿಯ ಅಗತ್ಯ  ಸಹಕಾರ ಮತ್ತು ನೆರವನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು  ಮೀನುಗಾರಿಕೆ, ಬಂದರು ಮತ್ತು ಒಳನಾಡು‌ ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಮಂಕಾಳ ವೈದ್ಯ ಹೇಳಿದರು.

ಅವರು ಬುಧವಾರ ನಗರದ ಆಜ್ವೀ ಸಭಾಂಗಣದಲ್ಲಿ  ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಪ್ರವಾಸೋದ್ಯಮ ಉದ್ಯಮೆದಾರರ ಸಹಯೋಗದಲ್ಲಿ ಏರ್ಪಡಿಸಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ವಿಫಲ ಅವಕಾಶಗಳಿದ್ದು , ಸುಂದರ ಸಮುದ್ರತೀರ, ನದಿಗಳು , ಅರಣ್ಯ ಸೇರಿದಂತೆ ಅತ್ಯುತ್ತಮ ಪ್ರಾಕೃತಿಕ ಸೌಂದರ್ಯಗಳಿದ್ದು ಇದನ್ನು ವಿಶ್ವ ದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಮುಂದೆ ಬರುವ ಹೂಡಿಕೆದಾರರಿಗೆ ಎಲ್ಲಾ ಅಗತ್ಯ ನೆರವು ನೀಡಲಾಗುವುದು ಎಂದರು.

 ಪ್ರವಾಸೋದ್ಯಮ ಅಭಿವೃದ್ಧಿಯಿಂದ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸಾಧ್ಯವಿದ್ದು, ಪ್ರವಾಸೋದ್ಯಮದಲ್ಲಿ ಅತಿ ಹೆಚ್ಚು ಉದ್ಯೋಗಾವಕಾಶಗಳಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಪ್ರಸ್ತುತ ಸಿ.ಆರ್.ಝಡ್. ನಿಯಮಗಳು ಕೂಡಾ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಿದ್ದು, ಪ್ರವಾಸೋದ್ಯಮ ಬೆಳವಣಿಗೆಯಲ್ಲಿ ಜಿಲ್ಲೆಯು ವಿಶ್ವ ಮಟ್ಟದ್ದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು.

  ಸ್ಥಳೀಯ ಉತ್ಪನ್ನಗಳಿಗೆ ಪ್ರವಾಸೋದ್ಯಮದಿಂದ ಉತ್ತೇಜನ ನೀಡಿ, ಸ್ಥಳೀಯರಿಗೆ ಉದ್ಯೋಗವಕಾಶವನ್ನು ಪ್ರವಾಸೋದ್ಯಮದಾರರು ಒದಗಿಸಬೇಕು.  ಜಿಲ್ಲೆಯ ಆಚಾರ -ವಿಚಾರ, ಪದ್ದತಿ,  ಪರಂಪರೆಯ ಬಗ್ಗೆ‌ ಪ್ರವಾಸಿಗರಿಗೆ ತಿಳಿಸುವ ಹಸಿರು ಪ್ರವಾಸೋದ್ಯಮದ ಕಡೆ ಎಲ್ಲರು ಗಮನಹರಿಸುವ ಅಗತ್ಯವಿದೆ ಎಂದರು.

ಇದೇ ಸಂದರ್ಭದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳ ಸ್ಥಳೀಯ ಉತ್ಪನಗಳ ಮಳಿಗೆಯನ್ನು ವೀಕ್ಷಿಸಿದರು.

 ಕಾರ್ಯಕ್ರಮದಲ್ಲಿ  ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ‌ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 

ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಗಂಗೂಬಾಯಿ‌ ಮಾನಕರ್, ಜಿ.ಪಂ. ಸಿಇಒ ಈಶ್ವರ ಕುಮಾರ ಕಾಂದೂ, ಪ್ರವಾಸೋದ್ಯಮದಾರರು ಇತರರು ಇದ್ದರು. ಪ್ರವಾಸೋದ್ಯಮ ಇಲಾಖೆ‌ ಉಪ‌ ನಿರ್ದೇಶಕಿ ಬೇಬಿ ಮೊಗೇರ‌ ಸ್ವಾಗತಿಸಿದರು.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...