21 ಜೂನ್ ನಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದದಲ್ಲಿ ಎಲ್ಲ ಸೇವೆಗಳು ಸಾರ್ವಜನಿಕರಿಗೆ ಮುಕ್ತ

Source: Press Release | By I.G. Bhatkali | Published on 18th June 2021, 8:34 PM | Coastal News |

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು ಸೋಮವಾರ ದಿನಾಂಕ 21ನೇ ಜೂನ್ 2021 ರಿಂದ ಜಾರಿಗೆ ಬರುವಂತೆ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗಗಳು, ಒಳರೋಗಿ ಸೇವೆಗಳು, ನಾನ್- ಓ ಪಿ ಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲಾ ವಿಭಾಗಗಳು ಸಾರ್ವಜನಿಕರಿಗೆ ಸೇವೆಗೆ ಮುಕ್ತವಾಗಲಿದೆ. ಹೊರರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳೆಗ್ಗೆ 8.00 ರಿಂದ ಸಂಜೆ 5.00 ರ ವರೆಗೆ ಲಭ್ಯವಾಗಲಿದೆ " ಎಂದು ಪ್ರಕಟಿಸಿದ್ದಾರೆ.

ಎಲ್ಲ ರೀತಿಯ ಶಸ್ತ್ರ ಚಿಕಿತ್ಸಾ ಸೌಲಭ್ಯ ಕೂಡ ದೊರೆಯಲಿದೆ. ಆದರೆ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ  ಸೇರ್ಪಡೆಯಾಗಲು ಕೋವಿಡ್ -19 ಪರೀಕ್ಷೆ (RT-PCR) ಖಡ್ಡಾಯವಾಗಿದೆ.  ಒಂದು ವೇಳೆ ತಮ್ಮ ಊರಿನಲ್ಲಿಯೇ ಮಾಡಿಸಿದ್ದರೆ ಗಂಟಲ ದ್ರವ ತೆಗೆದ 72 ಘಂಟೆಗಳ ವರೆಗೆ ಮಾತ್ರ ಊರ್ಜಿತವಾಗಿರುತ್ತದೆ. ಇಲ್ಲವಾದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ  ಸೇರ್ಪಡೆಗೊಳಿಸುವ ಮೊದಲು ಖಡ್ಡಾಯವಾಗಿ ಕೋವಿಡ್ -19 ಪರೀಕ್ಷೆ ಮಾಡಲಾಗುವುದು”. ಈ ಸೇವೆಯನ್ನು ಪಡೆದುಕೊಳ್ಳಲು ಬರುವ ಪ್ರತಿಯೊಂದು ರೋಗಿಯು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು, ನಂತರ ಸಂಬಂಧ ಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು. ಎಲ್ಲಾ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಖಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು ಮತ್ತು ಪ್ರತೀ ರೋಗಿಗಳೊಂದಿಗೆ ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...