ಕಾರವಾರ: ಭ್ರಷ್ಟಾಚಾರ ಆರೋಪ-ಸಂಚಾರಿ ನಿಯಮ ಉಲ್ಲಂಘನೆ ಆರ್‌ಟಿಓ, ಟ್ರಾಫಿಕ್ ಅಧಿಕಾರಿಗಳಿಗೆ ಬಾಡಿ ಕ್ಯಾಮರಾ

Source: KM | By S O News | Published on 1st March 2021, 11:05 PM | Coastal News |

ಕಾರವಾರ: ಪೊಲೀಸ್ ಸಂಚಾರಿ ವಿಭಾಗ ಹಾಗೂ ಆರ್.ಟಿ.ಓ. ಅಧಿಕಾರಿ ಗಳ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾ ರದ ಆರೋಪ ಹಾಗೂ ನಾಗರಿಕರು ಸಂಚಾರಿ ನಿಯಮಗಳನ್ನು ಉಲ್ಲಂಘಿಸು ವದರ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ವಾಗಿದ್ದು, ಆರ್.ಟಿ.ಓ. ಹಾಗೂ ಸಂಚಾರಿ ಪೊಲೀಸ್ ಅಧಿಕಾರಿಗಳಿಗೆ ಬಾಡಿ ಕ್ಯಾಮೆರಾ ಅಳವಡಿಸಿ ವ್ಯವಸ್ಥೆಯನ್ನು ಹೈಟೆಕ್ ಮಾಡಲು ನಿರ್ಧಾರ ಕೈಗೊಂಡಿದೆ.
ಕೇಂದ್ರ ಸರ್ಕಾರ ದೇಶದ ರಾಷ್ಟ್ರೀಯ ಹೆದ್ದಾರಿ ಹಾಗೂ ನಗರ ಪ್ರದೇಶದ ಸಂಚಾರ ವ್ಯವಸ್ಥೆಯನ್ನು ಡಿಜಿಟಲ್ ಮಾಡಲು ನಿರ್ಧರಿಸಿದೆ. ಅದರಂತೆ ರಾಜ್ಯದ ಸಂಚಾರಿ ಪೊಲೀಸ್ ವಿಭಾಗ ಹಾಗೂ ಆರ್.ಟಿ.ಓ. ಇಲಾಖೆಯ ಅಧಿಕಾರಿಗಳು ಆಧುನಿಕ ತಂತ್ರಜ್ಞಾನದ ಮೂಲಕ ಹೈಟೆಕ್ ಮಾಡುವ ನಿರ್ಧಾರ ಕೈಗೊಂಡಿದೆ. ರಾಜ್ಯದ ಸಂಚಾರಿ ಪೊಲೀಸ್ ಹಾಗೂ ಆರ್.ಟಿ.ಓ ಅಧಿಕಾರಿಗಳಿಗೆ ಆಧುನಿಕ ತಂತ್ರಜ್ಞಾನ ಸೌಲಭ್ಯ ಒದಗಿಸಿ ಅವರ ವಾಹನದ ಡೆಶ್‌ಬೋರ್ಡ್ ಮೇಲೆ ಸಿ.ಸಿ.ಟಿ.ವಿ.

ಕ್ಯಾಮರಾ, ಹೆದ್ದಾರಿಯ ಜಂಕ್ಷನ್‌ಗಳಲ್ಲಿ ಸ್ವಿಚ್ ಕ್ಯಾಮರಾ ಅಧಿಕಾರಿಗಳಿಗೆ ಬಾಡಿ ಕ್ಯಾಮರಾ ಒದಗಿಸಿ ಅದರಿಂದ ವಿಡಿಯೋ-ಆಡಿಯೋ ರಿಕಾರ್ಡಿಂಗ್ ಮಾಡುವ ವ್ಯವಸ್ಥೆ ಮಾಡಲಿದೆ. ಅದನ್ನೇ ನ್ಯಾಯಾಲಯಗಳಲ್ಲಿ ಸಾಕ್ಷಿಯಾಗಿ ಬಳಸಲಾಗುವುದು. ಇದರಿಂದ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುವದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದಾಗಿದೆ. ರಾಷ್ಟ್ರೀಯ ಹೆದ್ದಾರಿಗೂ ಪ್ರಮುಖ ಸ್ಥಳಗಳಲ್ಲಿ ವಾಹನ ಚಾಲಕರಿಂದ ಹಣ ವಸೂಲಿ ಮಾಡುವ ಭ್ರಷ್ಟ ಅಧಿಕಾರಿಗಳ ಮೇಲೆ ನಿಯಂತ್ರಣ ವಿಧಿಸಲು ಸಹ ಸಾಧ್ಯವಾಗಲಿದೆ.

ಕೇಂದ್ರದ ರಸ್ತೆ ಸಂಚಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಫೆ.25 ರಂದು ರಸ್ತೆ ಸುರಕ್ಷೆ, ವ್ಯವಸ್ಥೆ ನಿರ್ವಹಣೆ ಮತ್ತು ಸಂಚಾರ ನಿಯಮಗಳ ಬಗ್ಗೆ ಮಸೂದೆಯನ್ನು ತಯಾರಿಸಿ, ಸಲಹೆ ಸೂಚನೆಗಳಿಗಾಗಿ ಜಾರಿ ಮಾಡಿದೆ. ಈ ಕಾನೂನು ಜಾರಿಯಾದ ನಂತರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿ ಚಾಲಕರಿಂದ ಸಾವಿರಾರು ಕೋಟಿ ರು. ಕಾನೂನು ಬಾಹಿರವಾಗಿ ವಸೂಲಿ ಮಾಡುವ ಅಕ್ರಮ ದಂಧೆಗೆ ಕಡಿವಾಣ ಬೀಳಲಿದೆ. ವಾಹನ ಚಾಲಕರು ಕೆಂಪು ದೀಪ ಕ್ರಾಸ್ ಮಾಡಿದರೆ, ಓವರ್ ಸ್ವಿಚ್ ಇದ್ದರೆ, ತಪ್ಪು ಪಾರ್ಕಿಂಗ್ ಮಾಡಿದರೆ ಸಿಟ್ ಬೇಲ್ಸ್, ಹೆಲೈಟ್, ಮೊಬೈಲ್‌ದಲ್ಲಿ ಮಾತನಾಡುವ ಮೂಲಕ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ, ಅದನ್ನು ಅಡಿಯೋ-ವಿಡಿಯೋ ರಿಕಾರ್ಡಿಂಗ್ ಮೂಲಕ ಸಾಕ್ಷಿಯಾಗಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಇದರಿಂದಾಗಿ ತಪ್ಪಿತಸ್ಥರಿಗೆ ನ್ಯಾಯಾಲಯದಲ್ಲಿ ಆಗುವ ಶಿಕ್ಷೆ ಪ್ರಮಾಣ ಸಹ ಹೆಚ್ಚಾಗಲಿದೆ ಎಂದು ನೀರಿಕ್ಷಿಸಲಾಗಿದೆ. ಅದಲ್ಲದೆ ವಿನಾಕಾರಣ , ವಾಹನ ಚಾಲಕರಿಗೆ ಕಿರುಕುಳ ನೀಡುವ ಸಮಸ್ಯೆಗೂ ಪರಿಹಾರ ಸಿಗಲಿದೆ.

ನಗರಗಳಲ್ಲಿ ಇದು ಆರಂಭ: ಪ್ರಾರಂಭಿಕ ಹಂತದಲ್ಲಿ ಇದನ್ನು ರಾಜ್ಯದ ರಾಜಧಾನಿಗಳಲ್ಲಿ ಹಾಗೂ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ ಹಾಗೂ ಹೆಚ್ಚಿನ ಒತ್ತಡವಿರುವ ಜಂಕ್ಷನ್ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಾರಂಭಿಸಲಾಗುವುದು. ತದನಂತರ ಇದನ್ನು ಹಂತ-ಹಂತವಾಗಿ ದೇಶಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ವ್ಯವಸ್ಥೆಯಿಂದ ವಾಹನ ಸಂಚಾರ ವ್ಯವಸ್ಥೆಯಲ್ಲಿ ಪರಿಣಾಮಕಾರಿಯಾಗಿ ನಿಯಮಗಳ ಪಾಲನೆ, ಹಾಗೂ ಪಾರದರ್ಶಕ ವ್ಯವಸ್ಥೆ ನಿರ್ಮಾಣವಾಗಲಿದೆ.

ಡಿಜಿಟಲ್ ವ್ಯವಸ್ಥೆ : ಸಂಚಾರಿ ಪೊಲೀಸರು ಹಾಗೂ ಆರ್.ಟಿ.ಓ. ಅಧಿಕಾರಿಗಳು ವಾಹನ ಚಾಲಕರನ್ನು ನಿಲ್ಲಿಸಿ ಅನಗತ್ಯ ಕಿರುಕುಳ ನೀಡುತ್ತಾರೆಂಬ ದೊಡ್ಡ ಆರೋಪ ದೇಶಾದ್ಯಂತ ಕೇಳಿ ಬರುತ್ತದೆ. ಅದಲ್ಲ ವಾಹನ ಚಾಲಕರಿಂದ ಅಕ್ರಮವಾಗಿ ವಸೂಲಿ ಮಾಡುವ ವ್ಯವಹಾರವೇ ದೇಶದಲ್ಲಿ ಪ್ರತಿ ವರ್ಷ ಸಾವಿರಾರು ಕೋಟಿ ರು. ದ್ದಾಗಿದೆ ಎಂದು ಅಂದಾಜಿಸಲಾಗಿದೆ. ಇದಕ್ಕೆಲ್ಲ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಡಿಜಿಟಲ್ ವ್ಯವಸ್ಥೆ ಅಳವಡಿಸಲು ಮುಂದಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...