ಅರಣ್ಯ ಸಿಬ್ಬಂದಿಗಳಿಂದ ಅತಿಕ್ರಮಣದಾರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ಆರೋಪ

Source: sonews | By Staff Correspondent | Published on 15th October 2019, 4:46 PM | Coastal News | Don't Miss |

•    ಸೂಕ್ತ ಕ್ರಮ ಜರಗಿಸುವಂತೆ ಆಗ್ರಹಿಸಿ ಅತಿಕ್ರಮಣದಾರರಿಂದ ಎಎಸ್‍ಪಿ ಗೆ ಮನವಿ

ಭಟ್ಕಳ: ಭಟ್ಕಳ ತಾಲೂಕಿನಲ್ಲಿ ಅರಣ್ಯ ಅತಿಕ್ರಮಣದಾರರನ್ನು ಗುರಿಯಾಗಿಸಿಕೊಂಡು ಅರಣ್ಯ ಸಿಬ್ಬಂದಿಗಳಾದ ಉಪ ವಲಯ ಅರಣ್ಯಾಧಿಕಾರಿ, ವನಪಾಲಕರು, ಗಾರ್ಡುಗಳು, ವಾಚಮನ್‍ಗಳು ದೈಹಿಕ ಮಾನಸಿಕ ಕಿರುಕುಳ ನೀಡುವುದರ ಮೂಲಕ ದೌರ್ಜನ್ಯ ಎಸಗುತ್ತಿದ್ದು ಅಂತಹ ಸಿಬ್ಬಂದಿಗಳ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕರ ನೇತೃತ್ವದಲ್ಲಿ ಮಂಗಳವಾರ ನೂರಾರು ಅರಣ್ಯ ಅತಿಕ್ರಮಣದಾರರು ಭಟ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷರಿಗೆ ದೂರನ್ನು ನೀಡಿದ್ದಾರೆ. 

ತಾಲೂಕಿನಾದ್ಯಂತ ಅರಣ್ಯ ಅತಿಕ್ರಮಣದಾರರು ವಾಸ್ತವ್ಯ ಹಾಗೂ ಸಾಗುವಳಿಗಾಗಿ ಅರಣ್ಯಭೂಮಿ ಅವಲಂಭಿಸಿದ್ದು ಅರಣ್ಯ ಅತಿಕ್ರಮಣದಾರರು ವಾಸ್ತ್ಯದ ಇಮಾರತುಗಳಿಗೆ ಸಂಬಂಧಿಸಿದ ಸ್ಥಳಿಯ ಸಂಸ್ಥೆಗಳಿಗೆ ಮನೆ ಕರ, ನೀರಿನ ಕರ ತುಂಬುತ್ತಿದ್ದಾರೆ. ವಾಸ್ತಯವ್ಯ ಇಮಾರತಿಗೆ ವಿದ್ಯುತ್ ಸಂಪರ್ಕ ಪಡದುಕೊಂಡು ಹಲವು ವರ್ಷಗಳಿಂದ ವಾಸಿಸುತ್ತಿದ್ದ ಬಂದಿದ್ದು ಅತಿಕ್ರಮಣ ಕ್ಷೇತ್ರಕ್ಕೆ ಜಿ.ಪಿ.ಎಸ್ ಸಹಿತ ಆಗಿದ್ದು ಇರುತ್ತದೆ. ಅರಣ್ಯ ಹಕ್ಕು ಕಾಯ್ದೆ ಅನ್ವಯ ಇಂತಹ ಅರಣ್ಯ ಒತ್ತುವರಿಗಳನ್ನು ಒಕ್ಕಲೆಬ್ಬಿಸಬಾರದು ಎಂದು ಆದೇಶಸಿದ್ದು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಅರಣ್ಯ ಸಿಬ್ಬಂದಿಗಳು ತಮ್ಮ ಮನಸ್ಸಿಗೆ ಬಂದಂತೆ ವರ್ತಿಸಿಸಿ ಅರಣ್ಯ ಅತಿಕ್ರಮಣದಾರರಿಗೆ ಕಿರುಕುಳ , ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. 

ಭಟ್ಕಳ ವ್ಯಾಪ್ತಿಯ ನಗರ ಪ್ರದೇಶ, ಜಾಲಿ, ಬೆಳಕೆ ವ್ಯಾಪ್ತಿಯಲ್ಲಿ ಬರುವ ಅರಣ್ಯ ರಕ್ಷಕರು, ವಾಚ್‍ಮನ್, ಅತಿಕ್ರಮಣ ಸ್ವಾಧೀನದಲ್ಲಿರುವ ಮನೆಗಳಿಗೆ ಏಕಾಏಕಿ ಅಕ್ರಮ ಪ್ರವೇಶ ಮಾಡಿ ಅತಿಕ್ರಮಣದಾರರ ಸಾಗುವಳಿಗೆ ಆತಂಕವನ್ನುಂಟು ಮಾಡುವದಲ್ಲದೆ ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ಹಾನಿಯನ್ನುಂಟು ಮಾಡುತ್ತಿದ್ದಾರೆ. ಮನೆಯಲ್ಲಿರುವ ಮಹಿಳೆಯರನ್ನುಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದು ಇಂತಹ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು  ಜಾಲಿ ರೋ ನಿವಾಸಿ, ಖಾನಮೀರ ಸಾಹೇಬ್ ಬಾಗಸಿರಾಜ್, ಜಾಮಿಯಾಬಾದ್ ಜನತಾ ಕಾಲೋನಿ ನಿವಾಸಿ ರಹಿಮಾ ಶಾಬಂದ್ರಿ, ಅಮೀನುದ್ದೀನ್ ರಸ್ತೆ ಮದೀನಾ ಕಾಲೋನಿಯ ಮುಹಮ್ಮದ್ ಫೈಸಲ್ ಮನವಿ ಮಾಡಕೊಂಡಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...