ವಸತಿ ರಹಿತರಿಗೆ ಮನೆ ಮಂಜೂರು : ಸತೀಸ್ ಸೈಲ್

Source: SOnews | By Staff Correspondent | Published on 1st March 2024, 6:16 PM | Coastal News | Don't Miss |

ಕಾರವಾರ : ಗ್ರಾಮ ಪಂಚಾಯತಗಳಲ್ಲಿನ ವಸತಿ ರಹಿತ ಫಲಾನುಭವಿಗಳ ಪಟ್ಟಿ ಮಾಡಿ ಪಂಚಾಯತಿಯಲ್ಲಿ ಠರಾವು ಮಾಡಿ, ವರದಿಯನ್ನು ನೀಡಿದಲ್ಲಿ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸುವ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ ಸೈಲ್ ಹೇಳಿದರು.

ಅವರು ಇಂದು ಜಿಲ್ಲಾ ರಂಗಮAದಿರದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ವತಿಯಿಂದ ಆಯೋಜಿಸಿದ್ದ, ಬಸವ ವಸತಿ ಯೋಜನೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಕಾರವಾರ ತಾಲೂಕಿನ 18 ಗ್ರಾಮ ಪಂಚಾಯತಗಳಲ್ಲಿ, ಬಸವ ಯೋಜನೆಯಡಿ 486 ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಯೋಜನೆಯಡಿ 13 ಸೇರಿದಂತೆ ಒಟ್ಟು 499 ಫಲಾನುಭವಿಗಳು 2022-23 ನೇ ಸಾಲಿನಲ್ಲಿ ಆಯ್ಕೆಯಾಗಿದ್ದು, ಆಯ್ಕೆಯಾಗಿರುವ ಎಲ್ಲಾ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಲು ಹಂತ ಹಂತವಾಗಿ ಸಹಾಯಧನ ಬಿಡುಗಡೆಯಾಗಲಿದ್ದು, ಬಹುದಿನಗಳ ತಮ್ಮ ಸ್ವಂತ ಮನೆ ನಿರ್ಮಾಣದ ಕನಸನ್ನು ಸಾಕಾರಗೊಳಿಸಿಕೊಳ್ಳುವಂತೆ ಹೇಳಿದರು.

ಮುಂದಿನ ದಿನಗಳಲ್ಲಿ ಜಿಲ್ಲೆಯ ಬಡ ಜನರಿಗೆ ವಸತಿ ಯೋಜನೆಯಡಿ ಹೆಚ್ಚಿನ ಮನೆಗಳನ್ನು ಮಂಜೂರು ಮಾಡಿಸಿಕೊಡುವ ಭರವಸೆ ನೀಡಿದ ಅವರು, ಅಭಿವೃದ್ಧಿ ಹಾಗೂ ಬಡ ಜನರ ಕೆಲಸಗಳನ್ನು ಮಾಡುವಾಗ ಪಕ್ಷಬೇಧ ಮರೆತು ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕು ಎಂದರು.

ವಿವಿಧ ಗ್ರಾಮಗಳಿಂದ ಬಂದಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಅಹವಾಲು ಆಲಿಸಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುವ ಮುನೋಭಾವ ಬೆಳಸಿಕೊಳ್ಳಬೇಕು. ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಸೇರಿದಂತೆ ಕುಡಿಯುವ ನೀರು, ರಸ್ತೆ, ಸ್ಮಶಾನ ಭೂಮಿ ಒದಗಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ ಇಒ ಈರಣ್ಣಗೌಡ, ವಿವಿಧ ಗ್ರಾಮ ಪಂಚಾಯತಗಳ ಅಧ್ಯಕ್ಷರು, ಉಪಾಧ್ಯಕ್ಷರು ವಿವಿಧ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...