ಸೇವಾ ಸಿಂಧು ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ : ಭರತ್ ಎಸ್

Source: SO News | By Laxmi Tanaya | Published on 13th June 2023, 9:41 PM | State News | Don't Miss |

ಹುಬ್ಬಳ್ಳಿ:  2023-24ನೇ ಶೈಕ್ಷಣಿಕ ವರ್ಷಕ್ಕೆ  ರಿಯಾಯಿತಿ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಸಲು ಸೇವಾಸಿಂಧು ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಿಂದ  ಸೇವಾಸಿಂಧು ಪೋರ್ಟಲ್ ಮೂಲಕ ಸಂಪೂರ್ಣ ಯಾಂತ್ರೀಕೃತ ವಿದ್ಯಾರ್ಥಿ ಬಸ್ ವಿತರಣೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಪಾಸ್ ಗಾಗಿ ವಿದ್ಯಾರ್ಥಿಗಳು ಸೇವಾಸಿಂಧು ಫೊರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಲಿಂಕ್ URL https://devas in shudder vices.Karnataka.gov.in/bus pass services

ವಿದ್ಯಾರ್ಥಿಗಳು ತಾವೇ ಸೇವಾ ಸಿಂಧು ಪೋರ್ಟಲ್ ನಲ್ಲಿ ಲಾಗಿನ್ ಆಗಿ ಅರ್ಜಿ  ಸಲ್ಲಿಸಬಹುದಾಗಿದ್ದು ಅದಕ್ಕೆ  ಯಾವುದೇ ಶುಲ್ಕ ಇರುವುದಿಲ್ಲ‌. ಇದಲ್ಲದೆ, ವಿದ್ಯಾರ್ಥಿಗಳು ಕರ್ನಾಟಕ-ಒನ್ ಅಥವಾ ಗ್ರಾಮ- ಒನ್ ಕೇಂದ್ರದ ಸಿಬ್ಬಂದಿಗಳ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದ್ದು, ಅದಕ್ಕೆ   ಸದರಿ ಕೇಂದ್ರದ ಸಿಬ್ವಂದಿಗೆ ರೂ. 30 ಸೇವಾ ಶುಲ್ಕ ನೀಡಬೇಕು. ಅರ್ಜಿ ಅನುಮೋದನೆಯಾದ ನಂತರ ಪಾಸ್ ಪಡೆಯಲು ಭೇಟಿ ನೀಡಬೇಕಾದ ಕೌಂಟರ್ ಹೆಸರು, ವಿಳಾಸದ ಮಾಹಿತಿಯನ್ನು  ಅರ್ಜಿಯಲ್ಲಿ ನೀಡಿದ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮೂಲಕ ಕಳುಹಿಸಲಾಗುವುದು. ಅದರಂತೆ ವಿದ್ಯಾರ್ಥಿಗಳು ಕೌಂಟರ್ ಗೆ ಹೋಗಿ ನಿಗಧಿತ ಪಾಸಿನ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆಯಬಹುದಾಗಿದೆ. ಪಾಸ್ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಯುಪಿಐ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಸರ್ಕಾರದ   ಶಕ್ತಿ
ಯೋಜನೆಯಲ್ಲಿ ವಿದ್ಯಾರ್ಥಿನಿಯರಿಗೆ ರಾಜ್ಯದೊಳಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಲಾಗಿರುತ್ತದೆ. ನೆರೆ ರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು ನೆರೆ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗಡಿ ಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ಬಸ್ ಪಾಸ್ ಪಡೆಯುವುದು ಅವಶ್ಯವಿರುತ್ತದೆ. ಅವರೂ ಸಹ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ  ಪಾಸ್ ಪಡೆಯಬಹುದು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ವ್ಯಾಪ್ತಿಯಲ್ಲಿ 55 ಬಸ್  ನಿಲ್ದಾಣಗಳು ಹಾಗೂ 14 ಕರ್ನಾಟಕ-ಒನ್ ಕೇಂದ್ರಗಳು ಸೇರಿದಂತೆ ಒಟ್ಟು  74 ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಕೌಂಟರ್ ಗಳನ್ನು ಸ್ಥಾಪಿಸಲಾಗಿದ್ದು ಅವುಗಳ  ವಿವರಗಳನ್ನು ಸಂಸ್ಥೆಯ ವೆಬ್ ಸೈಟ್   https://nwkrtc.karnataka.gov.in ನಲ್ಲಿ  ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...