ಅಳ್ನಾವರ-ಅಂಬೇವಾಡಿ ರೈಲು ಶೀಘ್ರ;  ಆರ್.ವಿ.ದೇಶಪಾಂಡೆ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು

Source: sonews | By Staff Correspondent | Published on 9th July 2019, 6:19 PM | Coastal News | Don't Miss |

ಕಾರವಾರ; ಅಳ್ನಾವರ-ಅಂಬೇವಾಡಿ ಪ್ಯಾಸೆಂಜರ್ ರೈಲು ಶೀಘ್ರ ಪ್ರಾರಂಭಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಕೇಂದ್ರ ಸರ್ಕಾರಕ್ಕೆ ವಿನಂತಿಸಿದ ಹಿನ್ನೆಲೆಯಲ್ಲಿ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
    
ಈ ಬಗ್ಗೆ ಕಂದಾಯ ಸಚಿವರಿಗೆ ಪತ್ರ ಬರೆದಿರುವ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು, ತಾವು ಮನವಿಯಲ್ಲಿ ಕೋರಿರುವಂತೆ ಅಳ್ನಾವರ-ಅಂಬೇವಾಡಿ ಪ್ಯಾಸೆಂಜರ್ ರೈಲು ಪ್ರಾರಂಭಿಸಲು ಕ್ರಮ ವಹಿಸುವುದಾಗಿ ಅವರು ಪತ್ರದಲ್ಲಿ ಭರವಸೆ ನೀಡಿದ್ದಾರೆ.
    
ಜಿಲ್ಲಾ ಉಸ್ತುವಾರಿ ಸಚಿವರು ದೆಹಲಿ ಪ್ರವಾಸ ಸಂದರ್ಭದಲ್ಲಿ  ದಿನಾಂಕ 22-06-2019ರಂದು ರೈಲ್ವೆ ರಾಜ್ಯ ಸಚಿವರಾದ ಸುರೇಶ್ ಅಂಗಡಿಯವರಿಗೆ ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಈ ಸಂಬಂಧ ದಿನಾಂಕ 27-06-2019ರಂದು ಅವರು ಪತ್ರ ಬರೆದು ಸೂಕ್ತ ಕ್ರಮ ವಹಿಸುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕಂದಾಯ ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...