6 ಪ್ರಕರಣಗಳಲ್ಲೂ ಝುಬೈರ್‌ಗೆ ಜಾಮೀನು; ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Source: Vb | By I.G. Bhatkali | Published on 21st July 2022, 9:51 AM | National News |

ಹೊಸದಿಲ್ಲಿ: ಉತ್ತರಪ್ರದೇಶದಲ್ಲಿ ದಾಖಲಿಸಲಾಗಿರುವ ಎಲ್ಲಾ 6 ಪ್ರಕರಣಗಳಲ್ಲಿ ಆಲ್ಟ್ ನ್ಯೂಸ್ ಪತ್ರಕರ್ತ ಮುಹಮ್ಮದ್ ಝುಬೈರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ ಹಾಗೂ ಎ.ಎಸ್. ಬೋಪಣ್ಣ ಅವರನು ಒಳಗೊಂಡ ಪೀಠ ಝುಬೈರ್ ಅವರನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ನಿರ್ದೇಶಿಸಿದೆ.

ಝುಬೈರ್ ವಿರುದ್ಧ ಸೀತಾಪುರ, ಲಖಂಪುರ ಖೇರಿ, ಮುಝರ್‌ನಗರ ಹಾಗೂ ಗಾಝಿಯಾಬಾದ್ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣ ಹಾಗೂ ಹಾಥರಸ್‌ನಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಟಿ.ವಿ. ಸುದ್ದಿ ನಿರೂಪಕನ ಕುರಿತು ವಿಡಂಬನಾತ್ಮಕ ಹೇಳಿಕೆ ನೀಡಿರುವುದು, ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಹಿಂದೂ ದೇವರ ಬಗ್ಗೆ ಪ್ರಚೋದನಾಕಾರಿ ಅಂಶಗಳನ್ನು ಪೋಸ್ಟ್ ಮಾಡಿದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಗಳು ಇದಾಗಿವೆ.

ಹೊಸದಿಲ್ಲಿಯಲ್ಲಿ ದಾಖಲಿಸಲಾದ 7ನೇ ಪ್ರಕರಣದಲ್ಲಿ ನ್ಯಾಯಾಲಯ ಮುಹಮ್ಮದ್ ಝುಬೈರ್ ಅವರಿಗೆ ಈಗಾಗಲೇ ಜಾಮೀನು ನೀಡಿದೆ.

ಝುಬೈರ್ ಅವರನ್ನು ಕಸ್ಟಡಿಯಲ್ಲೇ ಇರಿಸಲು ಅವರ ವಿರುದ್ಧ ದಾಖಲಿಸಲಾದ ಹಳೆಯ ಎಫ್‌ಐಆರ್‌ಗಳನ್ನು ಉತ್ತರಪ್ರದೇಶ ಪೊಲೀಸರು ಸಲ್ಲಿಸಿದ್ದಾರೆ ಎಂದು ಝುಬೈರ್ ಪರ ವಕೀಲ ವೃಂದಾ ಗೋವರ್ ಬುಧವಾರ ನಡೆದ ವಿಚಾರಣೆ ಸಂದರ್ಭ ತಿಳಿಸಿದರು.

ಈ ನಡುವೆ ಉತ್ತರಪ್ರದೇಶದ ಹೆಚ್ಚುವರಿ ಅಡ್ವಕೇಟ್ ಜನರಲ್ ಗರಿಮಾ ಪ್ರಸಾದ್, ಸತ್ಯ ಶೋಧನೆ ಹೆಸರಿನಲ್ಲಿ ಝಬೈರ್ ಅವರು ದುರುದ್ದೇಶಪೂರಿತ ಹಾಗೂ ಪ್ರಚೋದನಕಾರಿ ವಿಚಾರಗಳನ್ನು ಪ್ರಚಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...