“ವಿಭಜನಕಾರಿ ರಾಜಕೀಯದ ವಿರುದ್ಧ ಮಾತನಾಡುವವರನ್ನು ಬೆದರಿಸಲಾಗುತ್ತಿದೆ- ಉಮರ್ ಖಾಲಿದ್

Source: ಹೊಸದಿಲ್ಲಿ: ದಿಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿ ಜೆಎನ್ ಯುವಿನ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ರನ್ನು ಬಂ | By Staff Correspondent | Published on 16th September 2020, 11:49 PM | National News | Don't Miss |

ಹೊಸದಿಲ್ಲಿ: ದಿಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿ ಜೆಎನ್ ಯುವಿನ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ರನ್ನು ಬಂಧಿಸಿ ಮೂರು ದಿನಗಳಾದ ಬಳಿಕ ಅವರು ಮೊದಲೇ ರೆಕಾರ್ಡ್ ಮಾಡಿದ್ದ ವಿಡಿಯೋವೊಂದು ಬಿಡುಗಡೆಯಾಗಿದೆ.

ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಪ್ರತಿಭಟನೆ ನಡೆಸಿದವರ ವಿರುದ್ಧ ದಿಲ್ಲಿ ಪೊಲೀಸರು ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ವಿಡಿಯೋದಲ್ಲಿ ಉಮರ್ ಖಾಲಿದ್ ಆರೋಪಿಸಿದ್ದಾರೆ.

“ರಾಜಧಾನಿಯಲ್ಲಿ ಭಾರೀ ಮಟ್ಟದ ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಗಲಭೆಕೋರರನ್ನು ದಿಲ್ಲಿ ಪೊಲೀಸರು ಬಂಧಿಸುತ್ತಿಲ್ಲ. ಆದರೆ ಸರಕಾರ ಮತ್ತು ಅದರ ನೀತಿಗಳನ್ನು ಟೀಕಿಸಿದವರ ಹಿಂದೆ ಬಿದ್ದಿದೆ. ಸಿಎಎ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದವರನ್ನು ಯಾವುದೇ ಆಧಾರಗಳಲ್ಲಿ ಪ್ರಕರಣಗಳಲ್ಲಿ ಸಿಲುಕಿಸಲಾಗುತ್ತಿದೆ” ಎಂದವರು ಹೇಳಿದ್ದಾರೆ.

“ವಿಭಜನಕಾರಿ ರಾಜಕೀಯದ ವಿರುದ್ಧ ಮಾತನಾಡುವವರನ್ನು ಬೆದರಿಸಲಾಗುತ್ತಿದೆ. ಅವರನ್ನು ಮೌನವಾಗಿಸಲು ಜೈಲಿಗೆ ತಳ್ಳಲಾಗುತ್ತಿದೆ. ನಾನು ಯಾಕೆ ಅಪಾಯಕಾರಿ?, ನಿಮಗೆಷ್ಟು ಈ ದೇಶ ಸೇರಿದೆಯೋ ಅಷ್ಟೇ ನನಗೂ ಸೇರಿದ್ದು ಎಂದು ನಾನು ಹೇಳಿದ್ದಕ್ಕಾಗಿಯೇ?, ವಿವಿಧ ನಂಬಿಕೆಗಳ ಜನರಿರುವ, ವಿವಿಧ ಭಾಷೆಗಳನ್ನು ಮಾತನಾಡುವ ಸುಂದರ ದೇಶದಲ್ಲಿ ನಾವಿದ್ದೇವೆ. ಸಂವಿಧಾನ ಮತ್ತು ಕಾನೂನಿನ ಮುಂದೆ ಎಲ್ಲರೂ ಸಮಾನರು. ಆದರೆ ಇಂದು ಇದನ್ನು ಬದಲಿಸುವ, ನಮ್ಮನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದವರು ಹೇಳಿದರು.

ಅನ್ಯಾಯದ ವಿರುದ್ಧ ಧ್ವನಿಯೆತ್ತುವಂತೆ ಅವರು ಜನರಿಗೆ ಕರೆ ನೀಡಿದರು. “ಅವರು ನಮ್ಮನ್ನು ಹೆದರಿಸಲು ಯತ್ನಿಸುತ್ತಿದ್ದಾರೆ. ಜೈಲಿಗೆ ತಳ್ಳಿ ನಮ್ಮ ಸದ್ದಡಗಿಸಲು ಯತ್ನಿಸುತ್ತಿದ್ದಾರೆ. ನಿಮ್ಮನ್ನು ಸುಮ್ಮನಾಗಿಸಲು ಅವರು ಹೆದರಿಸುತ್ತಾರೆ. ನನ್ನ ಮನವಿ ಏನೆಂದರೆ ನೀವು ಹೆದರಬೇಡಿ. ಅನ್ಯಾಯದ ವಿರುದ್ಧ ಧ್ವನಿಯೆತ್ತಿ” ಎಂದು ಖಾಲಿದ್ ಹೇಳಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...