ಅಮರನಾಥ ಯಾತ್ರೆ: ಎರಡನೇ ವರ್ಷ ರದ್ದು

Source: ANI | By MV Bhatkal | Published on 21st June 2021, 7:20 PM | National News | Don't Miss |

ಜಮ್ಮು:ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷ ಪವಿತ್ರ ಅಮರನಾಥ ಯಾತ್ರೆ ಯನ್ನು ಜಮ್ಮು-ಕಾಶ್ಮೀರ ಆಡಳಿತ ರದ್ದು ಮಾಡಿದೆ.
ಆನ್ ಲೈನ್ ಮೂಲಕ ದರ್ಶನಕ್ಕೆ ಜಮ್ಮು-ಕಾಶ್ಮೀರದ ಅಮರನಾಥ ಯಾತ್ರಾ ಮಂಡಳಿ ಅನುವು ಮಾಡಿಕೊಟ್ಟಿದೆ.
ದೇಶ, ವಿದೇಶದಲ್ಲಿರುವ ಭಕ್ತಾದಿಗಳು ಆನ್‌ಲೈನ್ ಮೂಲಕ ಅಮರನಾಥ ದರ್ಶನವನ್ನು ಆನ್ ಲೈನ್ ಮೂಲಕ ಪಡೆಯಬಹುದು. ಇದಕ್ಕಾಗಿ ಎಲ್ಲ ರೀತಿಯ ಅವಕಾಶ ಮಾಡಿಕೊಡಲಾಗಿದೆ ಅಮರನಾಥ ಯಾತ್ರಾ ಮಂಡಳಿ ತಿಳಿಸಿದೆ.
ಅಮರನಾಥ ಯಾತ್ರೆ ರದ್ದುಗೊಂಡಿದ್ದರೂ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ಆನ್ ಲೈನ್ ಮೂಲಕ ದರ್ಶನ ಮುಂದುವರೆಯಲಿದೆ ಎಂದು ಜಮ್ಮು-ಕಾಶ್ಮೀರ ಸರ್ಕಾರ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗೌರ್ನರ್ ಮನೋಜ್ ಸಿನ್ಹಾ ಅವರು, ಆನ್ ಲೈನ್ ನಲ್ಲಿ ದರ್ಶನಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜೂನ್ 28 ರಿಂದ ಆರಂಭವಾಗಿ ಆಗಸ್ಟ್ 22 ರವರೆಗೆ ಅಮರನಾಥ ಯಾತ್ರೆ ನಿಗದಿಯಾಗಿತ್ತು. 56 ದಿನಗಳ ಯಾತ್ರೆ ಕೊರೊನಾ ಸೋಂಕಿನಿಂದ ರದ್ದಾಗಿದೆ.

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...