ಅಂಬಿಗರ ಚೌಡಯ್ಯ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಿದವರು; ಅಪರ ಜಿಲ್ಲಾಧಿಕಾರಿ

Source: SO News | By Laxmi Tanaya | Published on 23rd January 2024, 9:06 PM | Coastal News | Don't Miss |

ಕಾರವಾರ : 12ನೇ ಶತಮಾನವನ್ನು  ಶರಣರ ಕಾಲವೆಂದು ಪರಿಗಣಿಸಲಾಗಿದೆ. ಬಸವಣ್ಣರಂತೆ ಅಂಬಿಗರ ಚೌಡಯ್ಯನವರು ಪ್ರಮುಖ ವಚನಕಾರರು.  ಅವರು ನೇರ, ನಿಷ್ಠೂರ  ವಚನಗಳಿಂದ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಿದರು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು‌ ಸಂಸ್ಕೃತಿ‌ ಇಲಾಖೆ‌  ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‌ನಿಜ‌ ಶರಣ ಅಂಬಿಗರ ಚೌಡಯ್ಯ ಜಯಂತಿ‌ ಕಾರ್ಯಕ್ರಮದಲ್ಲಿ  ಅಂಬಿಗರ ಚೌಡಯ್ಯ  ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

 ಸಮಾಜದಲ್ಲಿನ ಸಣ್ಣ ಸಣ್ಣ ಸಮುದಾಯಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ  ಆ ಸಮುದಾಯದ ದಾರ್ಶನಿಕರ ಜಯಂತಿಗಳನ್ನು  ಆಚರಿಸುವುದು ಅವಶ್ಯವಾಗಿದೆ. ಎಲ್ಲಾ ಸಮುದಾಯಗಳು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯಾದಾಗ ಮಾತ್ರ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದು ನುಡಿದರು.

ಸಮುದಾಯದ ಮುಖಂಡ ಗಣಪತಿ‌ ಮಾಂಗ್ರೆ ಮಾತನಾಡಿ, ಅಂಬಿಗರ ಚೌಡಯ್ಯ ಅವರು ಕಾಯಕದ ಜೊತೆಗೆ ಹಾಕಿ ಕೊಟ್ಟ ಜೀವನದ ಮೌಲ್ಯಗಳು ಸರ್ವಕಾಲಿಕವಾಗಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ. ಸಮುದಾಯ 12 ನೇ ಶತಮಾನದಿಂದ  ಸಮಾಜದಲ್ಲಿ ಸಂಪರ್ಕ ಕೊಂಡಿಯಾಗಿ  ಕಾರ್ಯನಿರ್ವಹಿಸುತ್ತಾ ಬಂದಿದೆ ಎಂದರು.

ಮಾಣೇಶ್ವರ ನಾಯ್ಕ ನಿಜಶರಣ  ಅಂಬಿಗರ ಚೌಡಯ್ಯ ಕುರಿತು ಉಪನ್ಯಾಸ ನೀಡಿ ಅಂಬಿಗರ ಚೌಡಯ್ಯನವರು ಮಹಾನ್ ದಾರ್ಶನಿಕರು ಸಮಾಜದ ಒಳಿತಿಗಾಗಿ ರಚಿಸಿರುವ ಅವರ ವಚನಗಳೇ ಪ್ರತಿಯೊಬ್ಬ ಯುವಪೀಳಿಗೆಗೂ ದಾರಿ ದೀಪವಾಗಿದೆ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕೃತಿ‌ ಇಲಾಖೆ‌ ಸಹಾಯಕ‌ ನಿರ್ದೇಶಕ ಡಾ. ಕೆ. ಎಂ ರಾಮಚಂದ್ರ, ನಗರಸಭೆ ಪೌರಾಯುಕ್ತ ಚಂದ್ರಮೌಳಿ ಸಮುದಾಯದ ಮುಖಂಡ ಬಾಬು ಅಂಬಿಗ ಮತ್ತಿತರರು  ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...