ಅಂಬಿಗರ ಚೌಡಯ್ಯ ಅವರ ವಚನಗಳು ಮನುಕುಲಕ್ಕೆ ದಾರಿ ದೀಪ

Source: sonews | By Staff Correspondent | Published on 21st January 2020, 11:16 PM | State News |

ಶ್ರೀನಿವಾಸಪುರ: ಅಂಬಿಗರ ಚೌಡಯ್ಯ ಅವರ ವಚನಗಳು ಮನುಕುಲಕ್ಕೆ ದಾರಿ ದೀಪವಾಗಿವೆ ಎಂದು ತಹಶೀಲ್ದಾರ್‌ ಕೆ.ಎನ್‌.ಸುಜಾತ ಹೇಳಿದರು.

ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಜಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಒಬ್ಬ ವ್ಯಕ್ತಿ ಜಾತಿಯಿಂದ ಉತ್ತಮನಾಗಲು ಸಾಧ್ಯವಿಲ್ಲ. ಕರ್ತವ್ಯ ನಿಷ್ಠೆಯಿಂದ ಸಮಾಜದ ಮನ್ನಣೆ ಪಡೆಯಬಹುದು ಎಂಬುದು ಅಂಬಿಗರ ಚೌಡಯ್ಯ ಅವರ ಜೀವನ ಸಂದೇಶವಾಗಿದೆ ಎಂದು ಹೇಳಿದರು.

ತಾಲ್ಲೂಕು ಬೆಸ್ತರ ಸಂಘದ ಅಧ್ಯಕ್ಷ ಕೋಟೇಶ್‌ ಮಾತನಾಡಿ, ಅಂಬಿಗರು ಸರಳ ಜೀವನ ನಡೆಸುತ್ತಾ, ಸಮಾಜದ ಒಳಿತಿಗೆ ಶ್ರಮಿಸುತ್ತಿದ್ದಾರೆ. ಅವರ ಬದುಕು ಕಷ್ಟದಿಂದ ಕೂಡಿದೆ. ಆದ್ದರಿಂದ ಸಮುದಾಯ ಸಂಘಟಿತವಾಗಬೇಕು. ಗೌರವಯುತ ಜೀವನ ನಡೆಸಲು ಅಗತ್ಯವಾದ ಸೌಲಭ್ಯ ಪಡೆಯಲು ಹೋರಾಟ ಮಾಡಬೇಕು ಎಂದು ಹೇಳಿದರು.

ಸಂಘದ ಕಾರ್ಯದರ್ಶಿ ಟಿ.ವೆಂಕಟೇಶ್‌ ಮಾತನಾಡಿ, ಅಂಬಿಗ ಸಮುದಾಯ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಸರ್ಕಾರ ನೀಡುವ ಸೌಲಭ್ಯ ಪಡೆದು ಆರ್ಥಿಕವಾಗಿ ಮುಂದೆ ಬರಲು ಪ್ರಯತ್ನಿಸಬೇಕು. ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ಮರೆಯಬಾರದು. ಸಾಂಘಿಕ ಪ್ರಯತ್ನದ ಮೂಲಕ ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದಿದ್ದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌, ಬಿಇಒ ಉಮಾದೇವಿ, ಸಹಾಯಕ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ರವೀಂದ್ರಗೌಡ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಣ್ಣ, ಮುಖಂಡರಾದ ಶಂಕರಪ್ಪ, ಸತ್ಯನಾರಾಯಣ, ಆಂಜಪ್ಪ, ಸತ್ಯನಾರಾಯನ, ಸತೀಶ್‌ ಕುಮಾರ್‌, ಆನಂದ್‌, ನಾರಾಯಣಸ್ವಾಮಿ, ವಿಜಯಲಕ್ಷ್ಮಿ ಸತ್ಯನಾರಾಯಣ ಇದ್ದರು
 

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...