ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ನಡುವೆಯೇ ಪ.ಬಂಗಾಳದಲ್ಲಿ ಗಂಗಾಸಾಗರ ಮೇಳ ಆರಂಭ

Source: vb | By I.G. Bhatkali | Published on 9th January 2022, 4:58 PM | National News |

ಕೋಲ್ಕತಾ: ಪ್ರತಿ ವರ್ಷ ಮಕರ ಸಂಕ್ರಾಂತಿಯ ಸಂದರ್ಭ ಪಶ್ಚಿಮಬಂಗಾಳದಲ್ಲಿ ನಡೆಯುವ ದಶಕಗಳ ಇತಿಹಾಸ ಇರುವ ಗಂಗಾಸಾ ಗರ ಮೇಳ ಶನಿವಾರ ಆರಂಭವಾಗಿದ್ದು, ಜನವರಿ 16ರವರೆಗೆ ನಡೆಯಲಿದೆ.

ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿ ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಂಗಾಸಾಗರ ಮೇಳ ವನ್ನು ನಿಷೇಧಿಸುವಂತೆ ಕೂಗು ಕೇಳಿ ಬರುತ್ತಿರುವ ಹೊರತಾಗಿಯೂ ಮೇಳ ನಡೆಯಲಿದೆ.

ಕೋವಿಡ್ ನಿಯಂತ್ರಿಸಲು ಅಗತ್ಯದ ಕ್ರಮಗಳನ್ನು ತೆಗೆದುಕೊಂಡ ಬಳಿಕ ಕಾರ್ಯಕ್ರಮ ನಡೆಸುವಂತೆ ತೃಣಮೂಲ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ ಕೋಲ್ಕತ್ತಾ ಉಚ್ಚ ನ್ಯಾಯಾಲಯ ಶುಕ್ರವಾರ ಸೂಚಿಸಿದೆ.

ಮೇಳದ ಆವರಣದಲ್ಲಿ 2022 ಜನವರಿ 2ರಂದು ರಾಜ್ಯ ಸರಕಾರ ನೀಡಿದ ಆದೇ ಶವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊ ಳಿಸುವಂತೆ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾತ್ಸವ ಹಾಗೂ ನ್ಯಾಯಮೂರ್ತಿ ಕೇಸಂಗ್ ಡೋಮಾ ಭುಟಿಯಾ ಅವರನ್ನು ಒಳಗೊಂಡ ವಿಭಾಗೀಯ ನ್ಯಾಯಪೀಠ ನಿರ್ದೇಶಿಸಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿ ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಭೆ ಯ ಸಂದರ್ಭ 50ಕ್ಕಿಂತ ಹೆಚ್ಚು ಜನರು ಪಾಲ್ಗೊ ಳ್ಳುವುದಕ್ಕೆ ಅವಕಾಶ ಹಿಂದೆ ಆದೇಶ ನೀಡಿತ್ತು. ಎಂದು ಸರಕಾರ ಈ ವರ್ಷ ಗಂಗಾಸಾಗರ ಮೇಳವನ್ನು ನಿಷೇಧಿ ಸುವಂತೆ ಕೋರಿ ಡಾ. ಅರವಿಂದನ್ ಮಂಡಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆ ಯನ್ನು ಪೀಠ ವಿಚಾರಣೆ ನಡೆಸಿತು.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...