ರಾಜ್ಯಾದ್ಯಂತ ಮೊದಲ ದಿನದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ

Source: UNI | Published on 25th June 2020, 6:55 PM | State News | Don't Miss |

ಬೆಂಗಳೂರು: ಕೊರೊನಾ ಸೋಂಕಿನ ಭೀತಿ ನಡುವೆಯೂ ಇಂದಿನಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಿದ್ದು, 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ 3209 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷೆ ನಡೆಸಿ ಎಕ್ಸಾಂ ಬರೆಯಲು ಅವಕಾಶ ಕಲ್ಪಿಸಲಾಯಿತು.
ಸೋಂಕು ಲಕ್ಷಣಗಳು ಕಂಡುಬಂದ ಕೆಲ ವಿದ್ಯಾರ್ಥಿಗಳ ಮನವೊಲಿಸಿ ಮತ್ತೆ ಪರೀಕ್ಷೆ ನಡೆಸುವ ಆಶ್ವಾಸನೆ ನೀಡಿ ವಾಪಸ್ ಕಳುಹಿಸಲಾಯಿತು. ಉಳಿದಂತೆ ರಾಜ್ಯದೆಲ್ಲೆಡೆ ಯಶಸ್ವಿಯಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಹಲವಾರು ಪರೀಕ್ಷಾ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಗಂಗಾವತಿಯಲ್ಲಿ ಶಾಲೆಯನ್ನು ತಳಿರುತೋರಣಗಳಿಂದ ಅಲಂಕರಿಸಿ ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳಿಗೆ ನಮಿಸುವ ಮೂಲಕ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು.ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಆಗಮಿಸಿದ್ದ 367 ವಿದ್ಯಾರ್ಥಿಗಳನ್ನು ತಲಪಾಡಿ ಚೆಕ್‍ಪೋಸ್ಟ್‍ನಿಂದ ಬರಮಾಡಿಕೊಂಡ ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ವಾಹನಗಳಲ್ಲಿ ತಲುಪಿಸುವ ಮೂಲಕ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...