ಮೀಸಲಾತಿ ಪ್ರಮಾಣ ಶೇ.75ಕ್ಕೆ ಹೆಚ್ಚಳ, 'ಗುಜರಾತ್ ಮಾದರಿ ನಡೆಯುವುದಿಲ್ಲ; ಸಿದ್ದರಾಮಯ್ಯ

Source: Vb | By I.G. Bhatkali | Published on 27th April 2023, 10:01 AM | State News |

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.75ಕ್ಕೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗ ದಲ್ಲಿ ಮೀಸಲಾತಿ ಕಲ್ಪಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅಮಿತ್ ಶಾ ಹೇಳಿಕೆಯೇ ಜಾತಿ-ಜಾತಿ ಮತ್ತು ಧರ್ಮ-ಧರ್ಮದ ನಡುವೆ ಜಗಳ ಹಚ್ಚುವ ದುಷ್ಟ ಆಲೋಚನೆಯದ್ದು. ಕರ್ನಾಟಕ ರಾಜ್ಯದ ಜನತೆ ಇದನ್ನು ಅರ್ಥಮಾಡಿ ಕೊಳ್ಳದಷ್ಟು ದಡ್ಡರಲ್ಲ. ಒಕ್ಕಲಿಗರು ಮತ್ತು ಲಿಂಗಾಯತರು ಸೇರಿದಂತೆ ಈ ರಾಜ್ಯದ ಜನತೆ ಕಿತ್ತು ತಿನ್ನುವ ದುಷ್ಟರಲ್ಲ, ಹಂಚಿ ತಿನ್ನುವ ಔದಾರ್ಯದ ಸಜ್ಜನರು ಎನ್ನುವುದನ್ನು ಅಮಿತ್ ಶಾ ಅರಿಯಬೇಕು ಎಂದು ತಿರುಗೇಟು ನೀಡಿದ್ದಾರೆ.

'ಗುಜರಾತ್ ಮಾದರಿ' ನಡೆಯುವುದಿಲ್ಲ: ಇದೀಗ ನಿರೀಕ್ಷೆಯಂತೆ ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಹೊಸ ಮೀಸಲಾತಿಯನ್ನು ಜಾರಿಗೆ ತರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಭರವಸೆ ನೀಡಲಾಗಿದೆ. ಆದರೆ, ಕೇಂದ್ರ ಗೃಹ ಸಚಿವರು ಚುನಾವಣಾ ಭಾಷಣದಲ್ಲಿ ಅದರ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರೇ, ಇದು ಕರ್ನಾಟಕ ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ, ಸುಡುವ 'ಗುಜರಾತ್ ಮಾದರಿ' ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ 'ಕರ್ನಾಟಕ ಮಾದರಿ'ಯೇ ನಡೆಯುವುದು.
Jiಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ. ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಮೀಸಲಾತಿಯ ಗೊಂದಲ ಪರಿಹರಿಸಲು ಇರುವ ಸರಿಯಾದ ಮಾರ್ಗ, ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇ.50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿ ಶೇ.50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿ ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮೀಸಲಾತಿ ಪರಿಷ್ಕರಣೆಗೆ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಅನುಕೂಲ ಇದೆ. ಯಾಕೆಂದರೆ ನಮ್ಮಲ್ಲಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ-ಮನೆಗೆ ತೆರಳಿ ವೈಜ್ಞಾನಿಕ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧವಿದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ ಎಂದು ಹೇಳಿದ್ದಾರೆ.

ವೀರಪ್ಪ ಮೊಯ್ಲಿ ಸರಕಾರ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.73ಕ್ಕೆ ಹೆಚ್ಚಿಸಿ ಆದೇಶ ಮಾಡಿತ್ತು. ಅದಿನ್ನೂ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿದೆ. ಅಲ್ಲಿಯೂ ರಾಜ್ಯ ಸರಕಾರ ಜಾತಿಗಣತಿಯ ವರದಿಯನ್ನು ಮುಂದಿಟ್ಟು ಮೀಸಲಾತಿ ಹೆಚ್ಚಳಕ್ಕೆ ಅನುಮತಿ ಕೋರಿದರೆ ನ್ಯಾಯಾಲಯ ಖಂಡಿತ ಒಪ್ಪಿಗೆ ನೀಡಬಹುದು. ಸಾಮಾಜಿಕ ಅನ್ಯಾಯವನ್ನೇ ರಾಜಕೀಯದ ಅಸ್ತ್ರವನ್ನಾಗಿ ಮಾಡಿಕೊಂಡು ಬಂದ ಬಿಜೆಪಿಗೆ, ಅದರ ಅಧ್ಯಕ್ಷರಿಗೆ ಸಾಮಾಜಿಕ ನ್ಯಾಯ ಅರ್ಥವಾಗಲಾರದು. ನಮ್ಮದು ಕೋಮುವಾದ ಉಸಿರಾಡುವ ಗುಜರಾತ್ ಅಲ್ಲ, ಬಸವವಾದ ಮೈಗೂಡಿಸಿಕೊಂಡಿರುವ ಕರ್ನಾಟಕ ಎನ್ನುವುದನ್ನು ನೆನಪಿಸಬಯಸುತ್ತೇನೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...