ವಿಷಾನಿಲ ಸೇವನೆಯಿಂದ ಐವರು ಕಾರ್ಮಿಕರ ಸಾವು

Source: S O News service | By Staff Correspondent | Published on 30th March 2017, 3:24 PM | National News | Don't Miss |

ಅಮರಾವತಿ:ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ತುರು ಪಟ್ಟಣದ ಸಮುದ್ರ ಆಹಾರ ಸಂಸ್ಕರಣೆ ಘಟಕವೊಂದರಲ್ಲಿ ವಿಷಾನಿಲ ಸೇವನೆಯಿಂದ ಐವರು ಕಾರ್ಮಿಕರು ಸಾವನ್ನಪ್ಪಿದ ದುರಂತ ಗುರುವಾರ ಬೆಳಿಗ್ಗೆ ಸಂಭವಿಸಿದೆ.

 

21ರಿಂದ 25ವರ್ಷ ಪ್ರಾಯದ ಈ ಕಾರ್ಮಿಕರು ಆನಂದ ಅಕ್ವಾ ಫುಡ್ ಪ್ರಾಸೆಸಿಂಗ್‌ನಿಂದ ಸುಮಾರು ನೂರು ಮೀಟರ್ ಅಂತರದಲ್ಲಿರುವ ರಾಸಾಯನಿಕ ತುಂಬಿದ್ದ ಟ್ಯಾಂಕೊಂದನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ನಡೆದಿದೆ. ಅವರ ಸಾವಿಗೆ ಕಾರಣವಾಗಿರುವ ವಿಷಾನಿಲ ಅಮೋನಿಯಾ ಆಗಿರಬಹುದೆಂದು ಶಂಕಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.

ಮೃತರು ಆಸುಪಾಸಿನ ಗ್ರಾಮಗಳ ನಿವಾಸಿಗಳಾಗಿದ್ದಾರೆ.

ಜಿಲ್ಲಾಧಿಕಾರಿ ಕೆ.ಭಾಸ್ಕರ ಅವರಿಂದ ದುರಂತದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...