ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಮಾಲೀಕ ಸೇರಿ ೯ ಸಾವು

Source: ANI | Published on 4th September 2020, 7:52 PM | National News | Don't Miss |

 

 


ಚೆನ್ನೈ:ತಮಿಳುನಾಡಿನ ಕಡಲೂರು ಜಿಲ್ಲೆಯ ಕತ್ತು ಮನ್ನಾರ್ ಕೋಲಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕಾರ್ಖಾನೆಯ ಮಾಲೀಕ ಸೇರಿ ಕನಿಷ್ಠ ೯ಮಂದಿ ಮೃತಪಟ್ಟು ಅನೇಕರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಸ್ಫೋಟ ಪ್ರಕರಣದಲ್ಲಿ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
ಪಟಾಕಿ ಕಾರ್ಖಾನೆ ಹೆಚ್ಚಿರುವ ತಮಿಳುನಾಡಿನಲ್ಲಿ ಆಗಿಂದಾಗ್ಗೆ ಅನಾಹುತಗಳು ಸಂಭವಿಸುತ್ತಿದ್ದು ಅನೇಕ ಸಾವು-ನೋವುಗಳು ಸಂಭವಿಸುತ್ತಿವೆ. ಇದೀಗ ಇಂದು ಸಂಭವಿಸಿದ ಪಟಾಕಿ ಕಾರ್ಖಾನೆ ಸ್ಫೋಟ ಪ್ರಕರಣದಲ್ಲಿ ೯ ಮಂದಿ ಸಾವನ್ನಪ್ಪಿದ್ದು ಅನೇಕ ಮಂದಿ ಗಾಯಗಳಾಗಿದ್ದು ಅವರನ್ನು ಕೆಲವರು ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೆನ್ನೈನಿಂದ ೧೯೦ ಕಿಲೋಮೀಟರ್ ದೂರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ ಸಾವು-ನೋವಿನ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕೆಲಸ ಮಾಡಲಾಯಿತಾದರೂ ಆವೇಳೆಗಾಗಲೇ ಪಟಾಕಿ ಕಾರ್ಖಾನೆ ಕೆಲಭಾಗ ಸ್ಪೋಟಗೊಂಡ ಪರಿಣಾಮ ಅದರಲ್ಲಿ ಕೆಲವರು ಸಾವನ್ನಪ್ಪಿದ್ದಾರೆ.
ಇನ್ನೂ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ವೋಟ ಪ್ರಕರಣದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬದ ಸದಸ್ಯರು ಆಕ್ರಂದನ ಮುಗಿಲು ಮುಟ್ಟಿದೆ ಯಾವ ಕಾರಣಕ್ಕಾಗಿ ಸ್ಪೋಟ ಕಾರ್ಖಾನೆಯಲ್ಲಿ ಸಂಭವಿಸಿತು ಎನ್ನುವುದು ಇನ್ನಷ್ಟೇ ತಿಳಿಯಬೇಕಾಗಿದೆ. ಸ್ಪೋಟದ ಮಾಹಿತಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸಾಕಷ್ಟು ಜನ ಸಂಖ್ಯೆಯಲ್ಲಿ ಜಮಾಯಿಸಿದ್ದ ಅವರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಲಾಕ್ ಡೌನ್ ತೆರವು ಮಾಡಿದ ನಂತರ ರಾಜ್ಯ ಸರ್ಕಾರ ಶೇಕಡ ನೂರರಷ್ಟು ಸಂಖ್ಯೆಯಲ್ಲಿ ಕಾರ್ಖಾನೆಯಲ್ಲಿ ಕೆಲಸ ಮಾಡಲು ಅನುಮತಿ ನೀಡಿದ್ದು ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ತನಿಖೆಗೆ ಆದೇಶ:
ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಸಂಭವಿಸಿದ ಹಿನ್ನೆಲೆಯಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಕಾರ್ಖಾನೆಯಲ್ಲಿ ದೇಶಿಯ ಬಾಂಬ್ ತಯಾರು ಮಾಡಲಾಗುತ್ತಿದೆ ಅಥವಾ ಇಲ್ಲವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಕಡಲೂರು ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಅಭಿನವ್ ಹೇಳಿದ್ದಾರೆ

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...