ಉಗ್ಗಿನಕೇರಿ ಸರಕಾರಿ ಪ್ರೌಢಶಾಲೆಗೆ ಜಿಪಂ ಸಿಇಓ ಅನಿರೀಕ್ಷಿತ ಭೇಟಿ. ವಿದ್ಯಾರ್ಥಿಗಳೊಂದಿಗೆ ಸಂವಾದ, ತರಗತಿಗಳ ಪರಿಶೀಲನೆ.

Source: SO News | By Laxmi Tanaya | Published on 7th September 2021, 9:47 PM | State News | Don't Miss |

ಧಾರವಾಡ : ಧಾರವಾಡ ಜಿಲ್ಲಾಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ಮಂಗಳವಾರ ಬೆಳಿಗ್ಗೆ ಕಲಘಟಗಿ ತಾಲೂಕಿನ ಉಗ್ಗಿನಕೇರಿ ಸರಕಾರಿ  ಪ್ರೌಢಶಾಲೆಗೆ ಭೇಟಿ ನೀಡಿ, ತರಗತಿಗಳ ಪರಿಶೀಲನೆ ಮಾಡಿದರು.

 ವಿವಿಧ ತರಗತಿಗಳಿಗೆ ತೆರಳಿ, ವಿದ್ಯಾರ್ಥಿಗಳೊಂದಿಗೆ ಪಾಠ, ಪಠ್ಯಕ್ರಮ, ಬೋಧನೆ ಕುರಿತು ಮಾಹಿತಿ ಪಡೆದರು. ಬಸ್‍ಗಳ ಕೊರತೆಯಿಂದ ಶಾಲೆಗೆ ಬರುವುದು ಮತ್ತು ಮರಳಿ ಹೊಗುವುದು  ಕಷ್ಟವಾಗುತ್ತಿದೆ. ಹೆಚ್ಚಿನ ಬಸ್ ಸೌಕರ್ಯ ಕಲ್ಪಸಲು ವಿದ್ಯಾರ್ಥಿಗಳು ಸಿಇಓ ಅವರಿಗೆ ವಿನಂತಿಸಿದರು. 

 ಶಾಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆ ಬಗ್ಗೆ ಹೆಚ್ಚು ಒತ್ತು ಕೊಡಲು ಮತ್ತು ಪ್ರತಿದಿನ  ಶಾಲಾ ಆವರಣ, ಆಟದ ಮೈದಾನ ಮತ್ತು ಶೌಚಾಲಯಗಳ ಸ್ವಚ್ಚತೆಗೆ ಗಮನಹರಿಸುವಂತೆ  ಶಿಕ್ಷಕರಿಗೆ ಅವರು ಸೂಚಿಸಿದರು.

 ಶಿಕ್ಷಣ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಬೇಕೆಂದು ಮತ್ತು ವಿದ್ಯಾರ್ಥಿಗಳಲ್ಲಿ  ಸಾಮಾನ್ಯ ಜ್ಞಾನ, ಸ್ಪರ್ಧಾತ್ಮಕ ಮನೋಭಾವ ಬೆಳೆಯುವಂತೆ ಪ್ರೋತ್ಸಾಹಿಸಬೇಕೆಂದು ಡಾ. ಬಿ.ಸುಶೀಲಾ ಅವರು ತಿಳಿಸಿದರು.

 ಈ ಸಂದರ್ಭದಲ್ಲಿ ಕಲಘಟಗಿ ಕ್ಷೇತ್ರಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ, ಉಗ್ಗಿನಕೇರಿ ಸರಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಚಂದ್ರಶೇಖರ ಅಳಗವಾಡಿ, ಶಿಕ್ಷಕರು, ಸಿಬ್ಬಂದಿಗಳು  ಸೇರಿದಂತೆ ಇತರರು ಇದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...