ಕೆನರಾ ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗಡೆ ಕುರಿತು ದಿನೇಶ್ ಗುಂಡುರಾವ್ ಹೇಳಿದ್ದೇನು?

Source: sonews | By Staff Correspondent | Published on 15th March 2019, 11:44 PM | State News | Don't Miss |

ಚಾಮರಾಜನಗರ: ಬಿಜೆಪಿಯಲ್ಲಿರುವ ಸಂಸದರಲ್ಲಿ ಅತ್ಯಂತ ಕಳಪೆ ಸಂಸದರೆಂದರೆ ಅದು ಅನಂತ್ ಕುಮಾರ್ ಹೆಗಡೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಚಾಮರಾಜನಗರದಲ್ಲಿ ಕಾಂಗ್ರೆಸ್ ಪರಿವರ್ತನಾ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿಯಾಗಿ ಮಾತನಾಡುತ್ತಾರೆ. ಅಂತಹವರನ್ನು ಮನೆಗೆ ಕಳುಹಿಸಲು ಮತದಾರರು ತಿರ್ಮಾನಿಸಿದ್ದಾರೆ. ಅದರೊಂದಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅನಂತಕುಮಾರ್ ಹೆಗಡೆಯನ್ನು ಸೋಲಿಸಲು ಶ್ರಮಿಸಲಿದೆ ಎಂದರು.

ಅನಂತಕುಮಾರ್ ಹೆಗಡೆ ಈ ಬಾರಿ ಹೀನಾಯವಾಗಿ ಸೋಲುತ್ತಾರೆ. ಉತ್ತರ ಕರ್ನಾಟಕದವರು ಅನಂತಕುಮಾರ್ ಹೆಗಡೆಯವರನ್ನು ಮನೆಗೆ ಕಳುಹಿಸುತ್ತಾರೆ ಎಂದ ಅವರು, ಅನಂತ್ ಕುಮಾರ್ ಹೆಗಡೆ ಮಾತುಗಳು ದ್ವೇಷವನ್ನು ಸೃಷ್ಟಿಸುತ್ತವೆ. ಉತ್ತರ ಕರ್ನಾಟಕ ಕಾಂಗ್ರೆಸ್ ಮುಕ್ತ ಮಾಡುತ್ತಾರೆನ್ನುವ ಉಡಾಫೆಯ ಮಾತುಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಅಂಬರೀಶ್ ಕೂಡ ಕಾಂಗ್ರೆಸ್ ನಾಯಕರಾಗಿದ್ದರು, ಹಾಗಾಗಿ ಸುಮಲತ ಜೊತೆ ಮಾತನಾಡುತ್ತೇನೆ ಎಂದರು.

ತುಮಕೂರಿನ ವಿಚಾರದಲ್ಲಿ ಮುದ್ದಹನುಮೇಗೌಡರ ಜೊತೆ ಮಾತನಾಡುತ್ತೇವೆ. ಹಾಸನದ ಎ.ಮಂಜು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ. 28 ಸಂಸದರಲ್ಲಿ ಹೆಚ್ಚು ಅಂತರದಲ್ಲಿ ಗೆಲ್ಲುವವರು ಆರ್.ದ್ರುವನಾರಾಯಣ್ ಎಂದು ವಿಶ್ವಾಸ ವ್ಯಕ್ತಪಡಿಸಿದ ದಿನೇಶ್ ಗುಂಡೂರಾವ್, ಸಾಕಷ್ಡು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ. ಬಿಜೆಪಿಯಿಂದ ಯಾರೇ ನಿಂತರೂ ದ್ರುವನಾರಾಯಣ್ ಗೆಲ್ಲುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಈಶ್ವರ್ ಖಂಡ್ರೆ, ಲೋಕಸಭಾ ಅಭ್ಯರ್ಥಿ ದ್ರುವನಾರಾಯಣ್ ಇದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...