ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Source: sonews | By Staff Correspondent | Published on 13th July 2020, 10:17 PM | State News |

ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಎದುರು  ಅಂಗನವಾಡಿ ಕಾರ್ಯಕರ್ತೆಯರು  ಬೇಡಿಕೆ ಈಡೇರಿಸುವಂತೆ ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಜಿ.ಈಶ್ವರಮ್ಮ ಪ್ರತಿಭಟನೆ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿ, ಮೊದಲ ಸಾಲಿನ ಕೊರೊನಾ ವಾರಿಯರ್ಸ್‌ ಆಗಿರುವ ಅಂಗನವಾಡಿ ನೌಕರರಿಗೆ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕು. ಮಕ್ಕಳ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ಮೂಲ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಅಂಗನವಾಡಿ ನೌಕರರ ನಿವೃತ್ತಿ ವೇತನ ಸಮಸ್ಯೆ ಬಗೆಹರಿಸಬೇಕು. ಸಹಾಯಕಿಯರ ಮುಂಬಡ್ತಿಗೆ ವಯಸ್ಸಿನ ಮಿತಿಯನ್ನು ತೆಗೆದುಹಾಕಬೇಕು. ಕೊರೊನಾ ನಿಯಂತ್ರನ ಕಾರ್ಯಕ್ಕೆ ತಲಾ ರೂ.25 ಸಾವಿರ ಪ್ರೋತ್ಸಾಹ ಧನ ನೀಡಬೇಕು. ಮೇಲ್ವಿಚಾರಕಿಯರ ಹುದ್ದೆಗೆ ಶೇ.100 ರಷ್ಟು ಮೀಸಲಾಗಿ ನೀಡಿ, ಸೇವಾ ಜೇಷ್ಟತೆಯ ಆಧಾರದಲ್ಲಿ ಮುಂಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಆಂಜಿಲಮ್ಮ, ಸಹ ಕಾರ್ಯದರ್ಶಿಗಳಾದ ರಾಧಾ, ಮಮತ, ಖಜಾಂಚಿ ಪುಷ್ಪ, ಉಪಾಧ್ಯಕ್ಷರಾದ ಪದ್ಮ , ಲಕ್ಷ್ಮಿದೇವಮ್ಮ, ಶಕುಂತಲ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...