ಅಂಕೋಲಾ:ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹರೀಶಕುಮಾರ್ ಭೇಟಿ

Source: so news | By MV Bhatkal | Published on 23rd June 2019, 6:32 PM | Coastal News | Don't Miss |

ಅಂಕೋಲಾ: ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಭಾರಿ ಮಳೆ ಸುರಿದು ಜಲಾವೃತವಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.
ಗಂಗಾವಳಿ ನದಿ ಪಾತ್ರದಲ್ಲಿರುವ ವಾಸರೆ, ಕೊಡ್ಸಣಿ ಮತ್ತು ಕುರ್ವೆ ದ್ವೀಪಗಳಲ್ಲಿ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿತ್ತು. ಪೂಜಗೇರಿ ಹಳ್ಳ ಉಕ್ಕಿ ಹರಿದು ಪೂಜಗೇರಿ ಮತ್ತು ನದಿಬಾಗ ಗ್ರಾಮಗಳಲ್ಲಿ ಕೃಷಿ ಭೂಮಿ ಮತ್ತು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.
ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ, 'ಜಿಲ್ಲಾ ಉಸ್ತುವಾರಿ ಸಚಿವರು ನನಗೆ ಕರೆ ಮಾಡಿ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ಕೊಡಲೇ ಕ್ರಮ ಕೈಗೊಳ್ಳಲು ತಿಳಿಸಿದರು. ಯಾವುದೇ ಪ್ರದೇಶದಲ್ಲಿ ನೈಸರ್ಗಿಕವಾಗಿ ನೀರು ಸರಾಗವಾಗಿ ಹರಿಯಲು ಅನುವು ಮಾಡಿಕೊಡಬೇಕು. ಇದಕ್ಕೆ ಜನರು ಸ್ವಾರ್ಥಕ್ಕಾಗಿ ಅಡ್ಡಿಪಡಿಸಿದರೆ ನಾವು ಸಹಿಸುವುದಿಲ್ಲ' ಎಂದು ಪುರಸಭೆ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಸಾಜಿದ್ ಮುಲ್ಲಾ,ತಹಶೀಲ್ದಾರ ವಿವೇಕ್ ಶೇಣ್ವಿ,ಪುರಸಭೆ ಮುಖ್ಯಾಧಿಕಾರಿ ಡಿ.ಪ್ರಹ್ಲಾದ್,ಇದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...