ಬಿಬಿಎ ಪರೀಕ್ಷೆಯಲ್ಲಿ ಭಟ್ಕಳದ ಅಂಜುಮನ್ ಕಾಲೇಜು‌ ಶೇಕಡ 91.67 ಸಾಧನೆ

Source: SO News | By Laxmi Tanaya | Published on 24th October 2020, 9:57 PM | Coastal News |

ಭಟ್ಕಳ : ಕಳೆದ ಸಪ್ಟೆಂಬರ್ ನಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ಬಿಬಿಎ ಪರೀಕ್ಷೆಯಲ್ಲಿ ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಪ್ ಮ್ಯಾನೆಜಮೆಂಟ್ ಆ್ಯಂಡ್ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ  ವಿದ್ಯಾರ್ಥಿಗಳು ಶೇಕಡಾ 91.67 ಫಲಿತಾಂಶ ಪಡೆದು ಉತ್ತಮ  ಸಾಧನೆ ಮಾಡಿದ್ದಾರೆ.

ಕಾಲೇಜಿನ ಒಟ್ಟು 48 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು., ಒಟ್ಟು 44 ವಿದ್ಯಾರ್ಥಿಗಳು ಅತ್ಯುತ್ತಮವಾಗಿ ತೇರ್ಗಡೆ ಹೊಂದಿದ್ದಾರೆ. ಒಟ್ಟು 23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೆ, 4 ಜನ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಮಹಮದ್ ಮಸೂದ್ ಇಕ್ಕೇರಿ 90.17 ಶೇಕಡಾ ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ.  ಶ್ರೀಮತಿ ಅಲ್ತಾಮಸ್ ಮಹಮದ್ ಅಲ್ತಾಪ್ ತಾಹೀರ್ 88.17 ಶೇಕಡಾ ಅಂಕ ಗಳಿಸಿದ್ದಾರೆ.  ಸಪಾನ್ ಮಹಮದ್ ಹುಸೇನ್ ಅಂಡಲೆ 87.17 ಶೇಕಡಾ ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರ ಸಾಧನೆಗೆ ಅಂಜುಮನ್ ಸಂಸ್ಥೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...