ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ವನಮಹೋತ್ಸವ ಕಾರ್ಯಕ್ರಮ

Source: sonews | By Staff Correspondent | Published on 3rd August 2019, 10:53 PM | Coastal News |

ಭಟ್ಕಳ: ನಮ್ಮ ನಮ್ಮ ಪರಿಸರದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಪರಿಸರವನ್ನು ಕಾಪಾಡುವುದು ನಮ್ಮೆಲ್ಲೆ ಆಧ್ಯ ಕರ್ತವ್ಯವಾಗಿದೆ ಎಂದು ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜುಕಾಕೋ ಅಬ್ದುಲ್ ರಹೀಮ್ ಹೇಳಿದರು. 

ಅವರು ಇಲ್ಲಿನ ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನ ಘಟಕ, ಎನ್‍ಸಿಸಿ ಘಟಕ ಮತ್ತು ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಪರಿಸರದಲ್ಲಿ ಸಸಿಗಳನ್ನು ನೆಡುವುದರ ಜೊತೆಗೆ ಆರೈಕೆ ಮಾಡಿ ಮರವಾಗಿ ಬೆಳೆಸಿ, ಅವು ನಮ್ಮ ಪರಿಸರಕ್ಕೆ ಉತ್ತಮ ಗಾಳಿ, ನೆರಳು ನೀಡುವಂತೆ ನೋಡಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.  

ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಇಸ್ಮಾಯಿಲ್, ಕಾಲೇಜು ಬೋರ್ಡ್ ಕಾರ್ಯದರ್ಶಿ ಮುಹಮ್ಮದ್ ಮೊಹಸಿನ್ ಶಾಬಂದ್ರಿ ವಿದ್ಯಾರ್ಥಿ, ಉಪನ್ಯಾಸಕರ ಮತ್ತು ಸಿಬ್ಬಂದಿಗಳ ಜೊತೆ ಸೇರಿ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಹುಮ್ಮಸ್ಸು ತುಂಬಿದರು. ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಮುಷ್ತಾಖ್ ಶೇಖ್ ಮತ್ತು ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಯೂಸೂಫ್ ಕೋಲಾ, ಅಬ್ದುಲ್ ರವೂಫ್ ಸವಣೂರು, ಅಬ್ದುಲ್ ರಹೀಮ್ ಖಾನ್ ಮತ್ತಿರರು ಉಪಸ್ಥಿತರಿದ್ದರು.  

ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜನಾಧಿಕಾರಿ ಪ್ರೊ. ಆರ್. ಎಸ್. ನಾಯಕ ವನಮಹೋತ್ಸವ ಕಾರ್ಯಕ್ರಮ ನಿರ್ವಹಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...