ಅನ್ನಭಾಗ್ಯ ಯೋಜನೆ" 5 ಕೆಜಿ ಅಕಿ ಬದಲು ಹಣ; ಸಂಪುಟ ತೀರ್ಮಾನ

Source: Vb | By I.G. Bhatkali | Published on 30th June 2023, 12:12 AM | State News |

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ವಿತರಿಸಲು ಹೆಚ್ಚುವರಿ ಅಕ್ಕಿ ಲಭ್ಯವಾಗದೇ ಇರುವುದರಿಂದ, ತಲಾ ಐದು ಕೆಜಿ ಅಕ್ಕಿ ಬದಲು ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಬುಧವಾರ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಆಹಾರ ಮತ್ತು ನಾಗರಿಕ ಸರಬ ರಾಜು ಸಚಿವ ಕೆ.ಎಚ್‌.ಮುನಿಯಪ್ಪ, ಪಡಿತರದಾರರಿಗೆ ತಲಾ 5 ಕೆಜಿ ಅಕ್ಕಿ ನೀಡ ಲಾಗುತ್ತದೆ. ಉಳಿದ 5 ಕೆಜಿ ಅಕ್ಕಿಯ ಬದ ಲಿಗೆ 'ಭಾರತೀಯ ಆಹಾರ ನಿಗಮ (ಎಫ್‌ಐ)ದ ದರದಂತೆ ಪ್ರತೀ ಕೆಜಿ ಅಕ್ಕಿಗೆ 34 ರೂ.ಗಳಂತೆ(ಒಬ್ಬ ಸದಸ್ಯರಿಗೆ 170 ರೂ.) ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗಳಿಗೆ ಜು.1ರಿಂದಲೇ ಜಾರಿಗೆ ಬರುವಂತೆ ಜಮೆ ಮಾಡಲಾಗು ವುದು ಎಂದು ಹೇಳಿದರು.

ರಾಜ್ಯದಲ್ಲಿ 85 ಲಕ್ಷ ಬಿಪಿಎಲ್ ಅಕಾರ್ಡುಗಳಿದ್ದು, ಈ ಪೈಕಿ ಶೇ.95ರಷ್ಟು ಬಿಪಿಎಲ್ ಕಾರ್ಡುದಾರರ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಆಗಿದೆ. ಇನ್ನು ಉಳಿದಿರುವುದನ್ನು ಆದಷ್ಟು ಬೇಗ ಮಾಡಿಸಿ, ಅರ್ಹರ ಖಾತೆಗಳಿಗೆ ಹಣ ಜಮೆ ಮಾಡುತ್ತೇವೆ.

ನಾವು ಜನತೆಗೆ ಮಾತು ಕೊಟ್ಟಂತೆ ಅಕ್ಕಿ ಪಡೆಯಲು ಸಾಕಷ್ಟು ಪ್ರಯತ್ನ ಮಾಡಿ ದೆವು. ಎಫ್‌ಸಿಐನವರು ನಮಗೆ ಅಕ್ಕಿ ಕೊಡುವುದಾಗಿ ಮೊದಲು ಒಪ್ಪಿಕೊಂಡು, ನಂತರ ನಿರಾಕರಿಸಿದರು. ಈ ವಿಚಾರದ ಕುರಿತು ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್‌ರನ್ನು ಭೇಟಿ ಯಾಗಿ ಚರ್ಚೆ ಮಾಡಿ, ಒತ್ತಾಯಿಸಿದರೂ ನಮ್ಮ ಬೇಡಿಕೆಗೆ ಸ್ಪಂದಿಸಲಿಲ್ಲ ಎಂದು ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಪಡಿತರ ವ್ಯವಸ್ಥೆಯಡಿ ವಿತರಣೆ ಮಾಡಲು ಪ್ರತೀ ತಿಂಗಳು 135 ಲಕ್ಷ ಟನ್ ಅಕ್ಕಿ ಅಗತ್ಯವಿದೆ. ಕೇಂದ್ರದ ಬಳಿ 262 ಲಕ್ಷ ಟನ್ ಲಭ್ಯವಿದೆ. ಹಣ ಕೊಡುತ್ತೇವೆ ಎಂದು ಹೇಳಿದರೂ ಕೇಳಲಿಲ್ಲ. ಈಗ ಪ್ರತೀ ಕೆಜಿಗೆ 31 ರೂ. ಗಳಂತೆ 15 ಲಕ್ಷ ಟನ್ ಅಕ್ಕಿಯನ್ನು ಮುಕ್ತ ಮಾರುಕಟ್ಟೆಗೆ ಬಿಡಲು ಟೆಂಡ‌ ಕರೆದಿದ್ದಾರೆ ಎಂದು ಮುನಿಯಪ್ಪ ಹೇಳಿದರು.

ಅಕ್ಕಿ ಸರಬರಾಜು ವಿಚಾರದಲ್ಲಿ ಕೇಂದ್ರ ಸರಕಾರ ಸಂಪೂರ್ಣ ರಾಜಕಾರಣ ಮಾಡಿದೆ. ಆದ್ದರಿಂದ, ಅಕ್ಕಿ ಪೂರೈಕೆ ಮಾಡುವ ಏಜೆನ್ಸಿಗಳ ಅಧಿಕಾರಿಗಳನ್ನು ಕರೆದು ಚರ್ಚೆ ಮಾಡಿದ್ದೆವು. ಆದರೆ, ಅವರಿಂದಲೂ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ ಎಂದು ಅವರು ಟೀಕಿಸಿದರು.

ಬಿಜೆಪಿಯವರು ರಾಜ್ಯಕ್ಕೆ ಅಕ್ತಿ ಕೊಡಿಸಬೇಕಿತ್ತು: ಸಿಎಂ: ಬಡವರಿಗೆ ಅಕ್ಕಿ ಕೊಡುವ ವಿಷಯ ದಲ್ಲಿ ರಾಜ್ಯದಲ್ಲಿರುವ ಬಿಜೆಪಿ ನಾಯಕರು ಕೇಂದ್ರ ಸರಕಾರ ದೊಂದಿಗೆ ಮಾತನಾಡಿ ಅಕ್ಕಿ ಕೊಡಿಸಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ನಾನು ಕೇಂದ್ರ ಗೃಹ ಸಚಿವ ಅಮಿತ್‌ ಹಾಗೂ ಆಹಾರ ಖಾತೆ ರಾಜ್ಯ ಸಚಿವರನ್ನು ಭೇಟಿ ಮಾಡಿ ಅಕ್ಕಿ ಸರಬರಾಜು ಮಾಡುವಂತೆ ಮನವಿ ಮಾಡಿದೆ. ಏನ್ ಸಿಸಿಎಫ, ನಫೆಡ್ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ಅಕ್ಕಿ ಪೂರೈಸಲು ಸೂಚಿಸಿರುವ ದರ ಹೆಚ್ಚಾಗಿದೆ ಎಂದರು.

ಎನ್‌ಸಿಎಫ್‌ನವರು 32.94 ರೂ. ಸೂಚಿಸಿದ್ದು, ನಾವು 32.24 ರೂ.ಗಳಿಗೆ ನೀಡಬೇಕೆಂದು ಕೋರಿದ್ದೇವೆ. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಪಾರದರ್ಶಕವಾಗಿ ಟೆಂಡರ್ ಕರೆಯಲಾಗುತ್ತಿದೆ. ಜು.1ರಿಂದ ಅಕ್ಕಿ ನೀಡಲಾಗುವುದೆಂದು ಭರವಸೆ ನೀಡಲಾಗಿದೆ. ರಾಜ್ಯಕ್ಕೆ ಪ್ರತಿ ತಿಂಗಳು 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದ್ದು, ಇಷ್ಟು ಪ್ರಮಾಣದ ಅಕ್ಕಿಯನ್ನು ಯಾವ ರಾಜ್ಯದವರೂ ಪೂರೈಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಯುಪಿಎ ಸರಕಾರ ರಚಿಸಿದ ಆಹಾರ ಭದ್ರತೆ ಕಾಯ್ದೆಯ ಪ್ರಕಾರ ಹಿಂದೆ ನಮ್ಮ ಸರಕಾರ ಜನರಿಗೆ 7 ಕೆಜಿ ವರೆಗೆ ಅಕ್ಕಿ ಪೂರೈಸುತ್ತಿತ್ತು. ಈಗ ಆಂಧ್ರಪ್ರದೇಶ, ತೆಲಂಗಾಣ, ಪಂಜಾಬ್ ರಾಜ್ಯಗಳಲ್ಲಿಯೂ ಅಕ್ಕಿಯ ದರ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ಒಂದು ತಿಂಗಳಿಗೆ 750-800 ಕೋಟಿ ರೂ. ಇದಕ್ಕಾಗಿ ಬೇಕಾಗುತ್ತದೆ. ತಾತ್ಕಾಲಿಕವಾಗಿ ಹಣ ನೀಡುವ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು, ಅಕ್ಕಿಯ ಲಭ್ಯತೆ ಖಾತರಿ ಪಡಿಸಿಕೊಂಡ ಬಳಿಕ ಅಕ್ಕಿಯನ್ನೇ ವಿತರಿಸಲಾಗುವುದು. ಇದಕ್ಕಾಗಿ, ಟೆಂಡರ್ ಕರೆಯಲಾಗುವುದು. ಎಪಿಎಲ್ ಕಾರ್ಡುದಾರರಿಗೆ ವಿತರಿಸಲು ಅಗತ್ಯವಿರುವ 20 ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು ನಾವು ಖರೀದಿ ಮಾಡಿ ವಿತರಿಸುತ್ತೇವೆ.

ಕೆ.ಎಚ್.ಮುನಿಯಪ್ಪ,
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ

ನಾವು ನೀಡಿದ್ದ ಭರವಸೆ ಯಂತೆ ಬಡ ಕುಟುಂಬದ ಪ್ರತೀ ವ್ಯಕ್ತಿಗೆ ತಲಾ 10 ಕೆಜಿ ಅಕ್ಕಿಯನ್ನು ನೀಡಲು ಶಕ್ತಿಮೀರಿ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯವರ ಕುತಂತ್ರ ನೀತಿಯಿಂದಾಗಿ ಎಫ್‌ಐ ನವರು ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದರು. ಆ ನಂತರ ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್ ಮುಂತಾದ ರಾಜ್ಯಗಳನ್ನು ಸಂಪರ್ಕಿಸಿ ಅಕ್ಕಿಯನ್ನು ಖರೀದಿಸಲು ನಾವು ನಡೆಸಿದ ಪ್ರಯತ್ನ ಕೈಗೂಡಲಿಲ್ಲ ಹೀಗಾಗಿ ಜುಲೈ 1ರಿಂದ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿಯ ಬದಲಿಗೆ ಹಣ ನೀಡಲು ನಿರ್ಧರಿಸಿದ್ದೇವೆ.

ಸಿದ್ದರಾಮಯ್ಯ, ಮುಖ್ಯಮಂತ್ರಿ

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...