ಕರ್ನಾಟಕ ಸಿಂಗ್ ಖ್ಯಾತಿಯ ಅಧಿಕಾರಿ ಅಣ್ಣಾ ಮಲೈ ಬಿಜೆಪಿ ತೆಕ್ಕೆಗೆ

Source: SO News | Published on 25th August 2020, 6:10 PM | Coastal News | National News |

ದೆಹಲಿ: ರಾಜಕೀಯ ಪರಿಣಿತರ ನಿರೀಕ್ಷೆಯಂತೆ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಮುರುಳಿಧರ ರಾವ್ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿದ್ದಾರೆ.


ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಕರ್ನಾಟಕ ಸಿಂಗಂ ಅಂತಾನೆ ಹೆಸರು ಪಡೆದವರು.ಚಿಕ್ಕಮಗಳೂರು, ಉಡುಪಿಯಲ್ಲಿ
ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ ಬೆಂಗಳೂರಿಗೆ ಡಿಸಿಪಿಯಾಗಿ ವರ್ಗಾವಣೆಯಾಗಿದ್ದರು.

2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸ್ವಂತ ಊರು ತಮಿಳುನಾಡಿಗೆ ಹೋಗಿದ್ದರು. ಈಗ ಸ್ವಂತ ಊರಿನಲ್ಲೇ ಇದ್ದು, ಅಲ್ಲೇ ಕೆಲಸ ಮಾಡಿ 2021ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಇಂಗಿತ ವ್ಯಕ್ತಪಡಿಸಿದ್ದರು.‌

ಈ ಮೊದಲು ಅವರು ತಮಿಳುನಾಡಿನ ನಟ ರಜಿನಿಕಾಂತ್ ಅವರ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಪ್ರಕಾರ ಐಪಿಎಸ್ ಎಂದರೆ ದೇಶ, ರಾಷ್ಟ್ರೀಯ ಭದ್ರತೆ. ನಾನು ಅಧಿಕಾರಿಯಾಗಿದ್ದೆ. ಅದೇ ನಿಟ್ಟಿನಲ್ಲಿ ತಮಿಳುನಾಡಿಗೆ ಈಗ ಪರ್ಯಾಯ ಆಡಳಿತದ ಅಗತ್ಯವಿದೆ. ಆ ಮಾರ್ಗವನ್ನು ಬಿಜೆಪಿ ಒದಗಿಸಬಹುದೆಂದು ನಾನು ಭಾವಿಸುತ್ತೇನೆ. ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ನಾನು ರಾಷ್ಟ್ರೀಯ ವಿಚಾರ ಹೊಂದಿರುವ ವ್ಯಕ್ತಿ. ಹೀಗಾಗಿ ನಾನು ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ನರೇಂದ್ರ ಮೋದಿ ಅವರ ಬಗ್ಗೆ ಇರುವ ಮೆಚ್ಚುಗೆಯೇ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವಾಯಿತು ಎಂದು ಹೇಳಿದ್ದಾರೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...