ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

Source: sonews | By Staff Correspondent | Published on 29th March 2019, 1:15 AM | Coastal News |

ಭಟ್ಕಳ:  " ಪ್ರಪಂಚದಲ್ಲಿ ಅವಕಾಶಗಳು ನಾವು ಉಪಯೋಗಿಸಿಕೊಂಡಷ್ಟಿದೆ" ಎಂದು ಜ್ನಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನರಸಿಂಹಮೂರ್ತಿ ಹೇಳಿದರು. ನಗರದ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು "ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸರ್ವತೋಮುಖ ಪ್ರಗತಿ ಸಾಧಿಸಬೇಕು" ಎಂದು ಕರೆನೀಡಿದರು.

ಕಾರ್ಯಕ್ರಮದ ಇನ್ನೋರ್ವ ಅಥಿತಿ ಜನ್‍ಪ್ಯಾಟ್ ಸಂಸ್ಥೆಯ ಟೀಮ್ ಲೀಡರ್  ನರೇಶ್ ಪೈ ಮಾತನಾಡಿ " ನಾವು ದುಡಿದ ಆದಾಯದಲ್ಲಿ ಸ್ವಲ್ಪ ಭಾಗವನ್ನು ದಾನದ ರೂಪದಲ್ಲಿ ಗ್ರಾಮೀಣ ಅಭಿವೃದ್ಧಿಗೆ ವಿನಿಯೋಗಿಸಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ, ಇದರಿಂದ ಗಾಂಧೀಜಿಯವರ ಸರ್ವೋದಯದ ಕನಸನ್ನು ನನಸು ಮಾಡಲು ಪ್ರಯತ್ನಿಸಿದಂತಾಗುತ್ತದೆ" ಎಂದರು.

ಭಟ್ಕಳ ಎಜುಕೇಶನ್ ಟ್ರಸ್ಟ್‍ನ ಅದ್ಯಕ್ಷ ಡಾ.ಸುರೇಶ್ ವಿ. ನಾಯಕ್ ಅದ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ  ನಾಗೇಶ್ ಎಮ್ ಭಟ್ ಪ್ರಾಸ್ತಾವಿಕ ಭಾಷಣ ಮಾಡಿದರು,

ಶೈಕ್ಷಣಿಕ ಸಂಯೋಜಕ ಫಣಿಯಪ್ಪಯ್ಯ ಹೆಬ್ಬಾರ್ ವಾರ್ಷಿಕ ವರದಿ ಮಂಡಿಸಿದರು. ಶೈಕ್ಷಣಿಕ ತಜ್ಞ ಬಿ.ಆರ್.ಕೆ ಮೂರ್ತಿ, ಗುರು ಸುಧೀಂದ್ರ ಬಿ.ಸಿ.ಎ ಕಾಲೇಜಿನ ಪ್ರಾಂಶುಪಾಲ  ಶ್ರೀನಾಥ್ ಪೈ ಉಪಸ್ಥಿತರಿದ್ದರು, ಉಪನ್ಯಾಸಕ ವಿಶ್ವನಾಥ್ ಭಟ್ ಉಪಸ್ಥಿತರಿದ್ದರು. ಉಪನ್ಯಾಸಕ ದೇವೇಂದ್ರ ಕಿಣಿ ಸ್ವಾಗತಿಸಿದರು, ವೈಭವ್ ನಾಯ್ಕ್, ಅರ್ಚನಾ ಹೆಬ್ಬಾರ್ ನಿರೂಪಿಸಿದರು, ಮತ್ತು ಉಪನ್ಯಾಸಕಿ ವಂದನಾ ಡಿಸೋಜ ವಂದಿಸಿದರು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...