ಅಂಜುಮನ್ ಬಿಬಿಎ ಮತ್ತು ಬಿಸಿಎ ಕಾಲೇಜಿನಲ್ಲಿ ವಾರ್ಷೀಕ ಕ್ರೀಡಾಕೂಟ

Source: sonews | By Staff Correspondent | Published on 28th March 2019, 3:50 PM | Coastal News |

ಭಟ್ಕಳ: ಇಲ್ಲಿನ ಪ್ರತಿಷ್ಠಿತ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಬಿಬಿಎ ಮತ್ತು ಬಿಸಿಎ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಅಂಜುಮನಾಬಾದ್ ಮೈದಾನದಲ್ಲಿ ಬುಧವಾರ ನಡೆಯಿತು.

ಕ್ರಿಡಾದ್ವಜಾರೋಹಣಗೈದು ಕ್ರಿಡಾಕೂಟವನ್ನು ಉದ್ಘಾಟಿಸಿದ ಅಂಜುಮನ್ ಅಲುಮ್ನಿ(ಹಳೆ ವಿದ್ಯಾರ್ಥಿ) ಯುಎಇ ಯ ಡಿ.ಯು ಟೆಲಿಕಾಮ್ ಸೀನಿಯರ್ ಮ್ಯಾನೇಜರ್ ಸೈಯ್ಯದ್ ಸಮೀರ್ ಸಖಾಫ್ ಮಾತನಾಡಿ, ಕ್ರೀಡೆ ಎನ್ನುವುದು ಕೇವಲ ಸೋಲುಗೆಲುವು ಆಗಿರದೆ, ವ್ಯಕ್ತಿತ್ವ ವಿಕಸನಕ್ಕೆ ಆಧಾರವಾಗಿದೆ ಎಂದ ಅವರ, ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಅಲ್ಲಿ ಒಂದೊಂದು ಕ್ಷಣವೂ ಎಷ್ಟೊಂದು ಮಹತ್ವದ್ದಾಗಿರುತ್ತದೆ ಎಂಬುದು ತಿಳಿಯುತ್ತಾರೆ. ಹಾಗೆ ಬದುಕಿನಲ್ಲಿ ಸಮಯ ಬಹಳ ಮುಖ್ಯವಾದದು ಎನ್ನುವುದನ್ನು ಕ್ರೀಡೆಗಳಿಂದ ತಿಳಿದುಕೊಳ್ಳಬಹುದು ಎಂದರು. ಇಂದಿನ ದಿನಗಳಲ್ಲಿ ಕ್ರೀಡೆಯು ಕೂಡ ಒಂದು ಕರಿಯರ್ ಆಗಿದೆ. ಕ್ರೀಡೆಯಲ್ಲಿ ಬದುಕು ರೂಪಿಸಿಕೊಂಡು ದೇಶವಿದೇಶಗಳಲ್ಲಿ ತಮ್ಮ ಖ್ಯಾತಿಯನ್ನು ಗಳಿಸಿಕೊಂಡಿದ್ದನ್ನು ನಾವು ಕಾಣುತ್ತೇವೆ ಎಂದ ಅವರು, ಶಾಲಾ ಕಾಲೇಜುಗಳಲ್ಲಿ ಕ್ರೀಡಾಪಟುಗಳಿಗೆ ಗೌರವವಿದೆ ಎಂದರು. 

ಅಂಜುಮನ್ ಕಾಲೇಜ್ ಬೋರ್ಡ್ ಕಾರ್ಯದರ್ಶಿ ಮುಹಮ್ಮದ್ ಮೊಹಸಿನ್ ಶಾಬಂದ್ರಿ ಅಧ್ಯಕ್ಷತೆ ವಹಿಸಿದ್ದರು. 
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಇಸ್ಮಾಯಿಲ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಹಾಖ್ ಶಾಬಂದ್ರಿ, ಕಾರ್ಯದರ್ಶಿ ಆಫ್ತಾಬ್ ಖಮರಿ, ಪ್ರಾಂಶುಪಾಲ ಮುಹಮ್ಮದ್ ಮೊಹಸಿನ್, ದೈಹಿಕ ಶಿಕ್ಷಣ ನಿರ್ದೇಶಕ ಮೋಹನ್ ಮೇಸ್ತಾ, ವಿದ್ಯಾರ್ಥಿ ಕಾರ್ಯದರ್ಶಿ ಹಿದಾಯತ್ ರುಕ್ನುದ್ದೀನ್, ಮ್ಯಾನೇಜ್ಮೆಂಟ್ ಇವೆಂಟ್ ಕಾರ್ಯದರ್ಶಿ ಮುಹಮದ್ ಉಸ್ಮಾನ್ ಮುಲ್ಲಾ, ಕ್ರೀಡಾ ಕಾರ್ಯದರ್ಶಿ ಸಲ್ಮಾನ್ ಮತ್ತಿತರರು ಉಪಸ್ಥಿತರಿದ್ದರು. 
 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...